ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಸಕಲೇಶಪುರ ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ ತೆರವು ಕಾರ್ಯಾಚರಣೆ ಪ್ರಾರಂಭ

ಸಕಲೇಶಪುರ ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ ತೆರವು ಕಾರ್ಯಾಚರಣೆ ಪ್ರಾರಂಭ

ಸಕಲೇಶಪುರ : ಸಕಲೇಶಪುರ ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (NH-75) ಶಿರಾಡಿ ಘಾಟ್‌ನ ದೊಡ್ಡತಪ್ಪಲೆ ಬಳಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ಕಾರೊಂದರ ಮೇಲೆ ಬಿದ್ದ ಘಟನೆ ನಡೆದಿದೆ. ಈ ಘಟನೆಯಿಂದ ಕಾರು ಜಖಂಗೊಂಡಿದ್ದು, ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತು.

ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ತಂಡ, ಉಪ ವಿಭಾಗಾಧಿಕಾರಿಗಳು, ಸಕಲೇಶಪುರ ವಲಯ ಅರಣ್ಯಾಧಿಕಾರಿಗಳಾದ ಹೇಮಂತ್ ಕುಮಾರ್, ಮಾರನಹಳ್ಳಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಮಹದೇವ್, ಕೆಂಪುಹೊಳೆ ಬೀಟ್‌ನ ಅರಣ್ಯ ವೀಕ್ಷಕ ಲೋಕೇಶ್ ಮತ್ತು ಅವರ ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಗುಡ್ಡ ಕುಸಿತದಿಂದಾಗಿ ರಸ್ತೆಯಲ್ಲಿ ವಾಹನಗಳು ಗಂಟೆಗಟ್ಟಲೆ ಸರತಿಯಲ್ಲಿ ಸಿಲುಕಿಕೊಂಡಿವೆ. ಈ ಘಟನೆಯಿಂದಾಗಿ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅರಣ್ಯ ಇಲಾಖೆ ಮತ್ತು ಪೊಲೀಸ್ ತಂಡಗಳು ಮಣ್ಣು ತೆರವುಗೊಳಿಸಲು ಶ್ರಮಿಸುತ್ತಿದ್ದು, ರಸ್ತೆಯನ್ನು ಶೀಘ್ರವಾಗಿ ಮುಕ್ತಗೊಳಿಸುವ ಪ್ರಯತ್ನದಲ್ಲಿವೆ.

ಶಿರಾಡಿ ಘಾಟ್‌ನಲ್ಲಿ ಭಾರೀ ಮಳೆಯಿಂದಾಗಿ ಆಗಾಗ್ಗೆ ಭೂಕುಸಿತ ಸಂಭವಿಸುವುದು ಸಾಮಾನ್ಯವಾಗಿದ್ದು, ಈ ಘಟನೆಯಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ. ಸ್ಥಳೀಯರು ಮತ್ತು ಪ್ರಯಾಣಿಕರು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.

ಗಮನಿಸಿ: ಪ್ರಯಾಣಿಕರು ಶಿರಾಡಿ ಘಾಟ್ ಮಾರ್ಗವನ್ನು ತಪ್ಪಿಸಿ ಪರ್ಯಾಯ ಮಾರ್ಗಗಳಾದ ಚಾರ್ಮಡಿ ಘಾಟ್ ಅಥವಾ ಸಂಪಾಜೆ ರಸ್ತೆಯನ್ನು ಬಳಸಲು ಸೂಚಿಸಲಾಗಿದೆ.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು