ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಭದ್ರಾ ಅರಣ್ಯಕ್ಕೆ 56 ಕಾಡಾನೆಗಳ ಸ್ಥಳಾಂತರಕ್ಕೆ ವಿರೋಧ: ಪ್ರಸ್ತಾವನೆ ಕೈಬಿಡುವಂತೆ ಅರಣ್ಯ ಸಚಿವರಿಗೆ ಶಾಸಕ ರಾಜೇಗೌಡ ಮನವಿಹಾಸನದ ಬೇಲೂರಿನಲ್ಲಿ ಕಾಡಾನೆ ಸೆರೆ – ಸ್ಥಳಾಂತರ ಕಾರ್ಯಾಚರಣೆಗೆ ಚಾಲನೆಅನುದಿನದ ಅಂತರಂಗ: ತುಳಿದಷ್ಟೂ ಬೆಳೆಯುತ್ತೇನೆ ತಿಳಿದಿರಲಿ ನಿಮಗೆಬೊಗಸೆಗೆ ದಕ್ಕಿದ್ದು-101 : ಮೇಲ್ವರ್ಗದ ರಕ್ಷಣೆ, ಕೆಳವರ್ಗದ ಗುಲಾಮಿಯೇ ಸರ್ವಾಧಿಕಾರದ ಗುರಿ!SIR ಮತದಾರರ ಪಟ್ಟಿ ಪರಿಷ್ಕರಣೆ ವಿವಾದ ಸುಪ್ರೀಂ ಕೋರ್ಟ್ ಅಂಗಳಕ್ಕೆ!ಹಾಸನದಲ್ಲಿ ಕಾಡಾನೆ ಕಾರ್ಯಾಚರಣೆಗೆ ಸಿದ್ಧತೆ: 300ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆಕೇಂದ್ರದ ವಿರುದ್ಧ ಸುಪ್ರೀಂ ದೂರು – ರಾಜ್ಯ ಬರಬೇಕಾದ 2186 ಕೋಟಿ ರೂ. ಬಾಕಿಕೋಲಾರ : ಆಟೋಗೆ ಸ್ಕೊಡಾ ಕಾರಿನ ನಡುವೆ ಬೀಕರ ಅಪಘಾತ – ಇಬ್ಬರು ದುರ್ಮರಣಎಂಎಸ್ ಧೋನಿ ಐಪಿಎಲ್ ನಿವೃತ್ತಿ: 2027ರಿಂದ CSK ಮೆಂಟರ್ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮ – ಮಧು ಬಂಗಾರಪ್ಪಸಾತನೂರು: ಜನರಲ್ಲಿ ಆತಂಕ ಮೂಡಿಸಿದ್ದ ಚಿರತೆ; ಬೋನಿಗೆ.ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯಗೆ ಐದನೇ ಸಾಲಿನ ಆಸನ! ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ತಲೆ ಮೇಲೆ ತಾನೇ ಕಲ್ಲು ಎಳೆದುಕೊಂಡಿದೆ ಎಂಬ ಚರ್ಚೆಧರ್ಮಸ್ಥಳದ ಪ್ರತಿಭಟನೆಗೆ ಪ್ರಚಾರ, ಸೌಜನ್ಯಳ ನ್ಯಾಯದ ಪ್ರಶ್ನೆಗಳಿಗೆ ಇಲ್ಲ ಉಪಚಾರ!ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್ನಮ್ಮ ಕುಟುಂಬದ ಬಗ್ಗೆ ಹರಡಿರುವ ಬಹುತೇಕ ಕಥೆಗಳು ಸತ್ಯಕ್ಕೆ ದೂರ: ಆತ್ಮಕಥೆ ಬರೆಯಲು ಕಾರಣ ತಿಳಿಸಿದ ಸೋನಿಯಾ ಗಾಂಧಿಸ್ಥಳೀಯ ಸಂಸ್ಥೆಗಳ ಚುನಾವಣಾ ಮೀಸಲಾತಿ ಹಂಚಿಕೆ ಹಕ್ಕು ಸರ್ಕಾರದ್ದು, ಜನರದ್ದಲ್ಲ: ಸುಪ್ರೀಂಕೋರ್ಟ್ಮತದಾರರ ಪಟ್ಟಿಯಿಂದ ಹೆಸರು ತೆಗೆದರೆ ದೇಶದಿಂದಲೇ ಗಡಿಪಾರು ಭೀತಿ: ಮುಸ್ಲಿಂ ಕುಟುಂಬಗಳಲ್ಲಿ ಹೆಚ್ಚಿದ ಪೌರತ್ವ ಕಳೆದುಕೊಳ್ಳುವ ಆತಂಕಶಿವಮೊಗ್ಗ ವಿಮಾನ ನಿಲ್ದಾಣ: ಮಲೆನಾಡಿಗೆ ಕಿರೀಟವಾಗಬೇಕಿದ್ದದ್ದು, “ಕಪ್ಪುಚುಕ್ಕೆ” ಆದ ಬಗೆತಿಂಗಳಿಗೆ ₹15 ಸಾವಿರ ಸಂಬಳ ಪಡೆಯುವ ಯುವಕನ ಹೆಸರಿನಲ್ಲಿ ₹350 ಕೋಟಿ ಜಿಎಸ್‌ಟಿ ವಹಿವಾಟು!ಕೆಪಿಎಸ್‌ಸಿ ನೇಮಕಾತಿ ಅಕ್ರಮ: ಅಮಾನತುಗೊಂಡ ಅಧ್ಯಕ್ಷರಿಂದ ₹4.17 ಕೋಟಿ ಅಕ್ರಮ ಹಣ ವರ್ಗಾವಣೆ ಆರೋಪ

ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮ – ಮಧು ಬಂಗಾರಪ್ಪ

ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮ – ಮಧು ಬಂಗಾರಪ್ಪ

ಬೆಂಗಳೂರು : ಶಾಲಾ ಮಕ್ಕಳ ಎದುರೇ ಅಸಂವಿಧಾನಿಕ ಹಾಗೂ ದ್ವೇಷಪೂರಿತ ಭಾಷಣ ಮಾಡಿರುವ ಬೆಳ್ತಂಗಡಿ ಬಿಜೆಪಿ (BJP) ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಕುರಿತು ಅಧಿಕಾರಿಗಳಿಂದ ವರದಿ ಪಡೆದು ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಶಾಲಾ ಮಕ್ಕಳ ಮುಂದೆ ಶಾಸಕರ ವಿವಾದಾತ್ಮಕ ಭಾಷಣ
ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಶಾಲೆ (KPS) ನೂತನ ಸಭಾಭವನ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಹರೀಶ್ ಪೂಂಜಾ ಪಾಲ್ಗೊಂಡಿದ್ದರು. ಈ ವೇಳೆ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ, ದ್ವೇಷದ ಭಾಷಣ ಮಾಡಿದ್ದರು. ಶಾಸಕರ ಈ ಬೇಜವಾಬ್ದಾರಿ ವರ್ತನೆಗೆ ಸಚಿವ ಮಧು ಬಂಗಾರಪ್ಪ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

ಮಕ್ಕಳಿಗೆ ವಿಷ ಬಿತ್ತುವ ಚಾಳಿ; ಮಧು
ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜನಪ್ರತಿನಿಧಿಯಾಗಿ ಹೇಗೆ ಮಾತನಾಡಬೇಕು ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದೆ ಶಾಲಾ ಮಕ್ಕಳ ಮುಂದೆ ಈ ರೀತಿ ಮಾತನಾಡಿರುವುದು ಖಂಡನೀಯ ಎಂದರು.

ರಾಜಕಾರಣವನ್ನು ರಾಜಕೀಯ ವೇದಿಕೆಗಳಿಗೆ ಮಾತ್ರ ಸೀಮಿತಗೊಳಿಸಬೇಕು ಮತ್ತು ಮಕ್ಕಳಲ್ಲಿ ಕೆಟ್ಟ ವಿಚಾರಗಳನ್ನು ಬಿತ್ತುವುದೇ ಬಿಜೆಪಿ ನಾಯಕರ ಚಾಳಿಯಾಗಿದೆ. ಶಾಸಕರ ಮನಸ್ಸಿನಲ್ಲಿ ವಿಷವಿದ್ದರೆ ಅದನ್ನೇ ಹೊರಹಾಕುತ್ತಾರೆ ಎಂದು ಕಿಡಿಕಾರಿದರು.

ಇಲಾಖೆಯಿಂದಲೇ ಸ್ವಯಂಪ್ರೇರಿತ ಕ್ರಮ
ಶಾಸಕರು ಏನು ಮಾತನಾಡಿದ್ದಾರೆ ಎಂಬ ಬಗ್ಗೆ ಸಮಗ್ರ ವರದಿ ನೀಡುವಂತೆ ಈಗಾಗಲೇ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವರು ತಿಳಿಸಿದ್ದಾರೆ. ವರದಿಯ ಆಧಾರದ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದಿರುವ ಅವರು, ಸಾರ್ವಜನಿಕರು ದೂರು ನೀಡಲು ಮುಂದಾದರೂ ಸ್ವಾಗತಿಸುತ್ತೇವೆ, ಆದರೆ ದೂರುಗಳಿಗಾಗಿ ಕಾಯದೆ ಇಲಾಖೆಯಿಂದಲೇ ನೇರ ಕ್ರಮ ಜರುಗಿಸುವುದಾಗಿ ಸ್ಪಷ್ಟಪಡಿಸಿದ್ದಾರೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು