ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ತಮ್ಮ ವಿರುದ್ಧ  ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕಾನೂನು ಕ್ರಮ – ಸಚಿವ ಸತೀಶ್ ಜಾರಕಿಹೊಳಿ

ತಮ್ಮ ವಿರುದ್ಧ  ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕಾನೂನು ಕ್ರಮ – ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : ತಮ್ಮ ವಿರುದ್ಧ ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಆರೋಪಗಳನ್ನು ಎದುರಿಸಲು ನ್ಯಾಯಾಲಯಕ್ಕೆ ಬರಲಿ ಎಂದು ಸಚಿವ ಸತೀಶ್ ಜಾರಕಿಹೊಳಿ ಸವಾಲು ಹಾಕಿದ್ದಾರೆ. ಕಮಿಷನ್ ಹಣದಿಂದ ಹೆಲಿಕಾಪ್ಟರ್ ಖರೀದಿಸಿದ್ದಾರೆ ಎಂಬ ಆರೋಪಗಳ ವರದಿಗಳಿಗೆ ಪ್ರತಿಕ್ರಿಯಿಸಿದ ಅವರು, ತಮ್ಮ ಹೆಸರಿಗೆ ಕಳಂಕ ತರುವ ಪ್ರಯತ್ನಗಳ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಹೇಳಿದರು.ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇವೆ. ಅವರು ನ್ಯಾಯಾಲಯಕ್ಕೆ ಬಂದು ಉತ್ತರಿಸಲಿ” ಎಂದು ಹೇಳಿದರು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ನಡೆಯುತ್ತಿರುವ ವಿವಾದದ ಬಗ್ಗೆ ಮಾತನಾಡಿ, ಕಾಂಗ್ರೆಸ್‌ಗೆ SIR ಬಗ್ಗೆ ಯಾವುದೇ ಭಯವಿಲ್ಲ. ಈ ಪ್ರಕ್ರಿಯೆ ಬಗ್ಗೆ ಬಿಜೆಪಿಯವರೇ ಆತಂಕಗೊಂಡಿದ್ದಾರೆ. “ನಾವು ಯಾವುದೇ ಮತಗಳನ್ನು ಅಳಿಸಿಲ್ಲ, ಹೊಸ ಮತಗಳನ್ನು ಸೇರಿಸಿಲ್ಲ. ಬಿಜೆಪಿ ನಾಯಕರಲ್ಲಿ ಗೊಂದಲವಿದೆ ಎಂದು ಹೇಳಿದರು.

ಇದೇ ವೇಳೆ ಸಾವಿರಾರು ಫಾರ್ಮ್‌-7 ಅರ್ಜಿಗಳನ್ನು ಸಲ್ಲಿಸಲು ಬಿಜೆಪಿಗೆ ಯಾವ ಅಧಿಕಾರವಿದೆ ಎಂದು ಪ್ರಶ್ನಿಸಿದ ಅವರು, ಒಂದು ಸಂಸ್ಥೆ ಫಾರ್ಮ್‌ಗಳನ್ನು ಮುದ್ರಿಸುತ್ತಿದ್ದು, ಬಿಜೆಪಿ ಕಾರ್ಯಕರ್ತರು ಅವುಗಳಿಗೆ ಸಹಿ ಹಾಕುತ್ತಿದ್ದಾರೆ ಎಂದು ಆರೋಪಿಸಿದರು.ಯಾರ ಹೆಸರುಗಳನ್ನು ಅಳಿಸಬೇಕು ಎಂಬುದನ್ನು ಬಿಜೆಪಿ ಈಗಾಗಲೇ ನಿರ್ಧರಿಸಿಕೊಂಡಿರುವಂತೆ ಕಾಣುತ್ತಿದೆ” ಎಂದು ದೂರಿದರು. ಫಾರ್ಮ್‌ಗಳನ್ನು ಯಾವ ಸಂಸ್ಥೆ ಮುದ್ರಿಸಿದೆ ಎಂಬುದು ತನಿಖೆಯಿಂದ ಬಹಿರಂಗವಾಗಲಿದೆ ಎಂದು ಹೇಳಿದರು. ಕೊಪ್ಪಳದ ಮತದಾರರಿಗೆ ಸಂಬಂಧಿಸಿದ ಫಾರ್ಮ್‌-7 ಬೆಂಗಳೂರಿನಲ್ಲಿ ಹೇಗೆ ಮುದ್ರಣವಾಗಲು ಸಾಧ್ಯ?” ಎಂದು ಪ್ರಶ್ನಿಸಿದ ಅವರು, ಈ ಪ್ರಕ್ರಿಯೆ ಪೂರ್ವನಿಯೋಜಿತವಾಗಿರುವಂತೆ ಕಾಣುತ್ತಿದೆ ಎಂದು ಆರೋಪಿಸಿದರು. ಬಳಿಕ ಜಾರಿ ನಿರ್ದೇಶನಾಲಯದಿಂದ (ED) ಸಂಭವನೀಯ ಕ್ರಮದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತನಗೆ ಈವರೆಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಹೇಳಿದರು.

ನನಗೆ ಇ.ಡಿಯಿಂದ ಯಾವುದೇ ನೋಟಿಸ್ ಬಂದಿಲ್ಲ. ನೋಟಿಸ್ ಬಂದರೆ ನಾನು ಉತ್ತರಿಸುತ್ತೇನೆ. ನೋಟಿಸ್ ಜಾರಿಯಾದರೆ ನಮಗಿಂತ ಮೊದಲೇ ಮಾಧ್ಯಮಗಳಿಗೆ ಮಾಹಿತಿ ಸಿಗಬಹುದು ಎಂದು ಹೇಳಿದರು. ಕಬ್ಬು ಅಥವಾ ಸಕ್ಕರೆಯ ಬೆಲೆಯನ್ನು ನಿರ್ಧರಿಸುವ ಸಂಪೂರ್ಣ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ತಿಳಿಸಿದರು.

ವಿಷಯಗಳು: #karnataka #news #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು