ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
81 ಲಕ್ಷಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನ ಹರಾಜು!ಡಿಸಿ ಪಿಎ ಚಾಟ್ ಪ್ರಕರಣದಲ್ಲಿ ಸತ್ಯಾ ಹೊರಬರಲಿ – ಎಚ್.ಡಿ. ಕುಮಾರಸ್ವಾಮಿನಿಖಿಲ್‌ಗೆ ದೇವಾಲಯ ಪ್ರವೇಶ ವಿಚಾರ – ಕಾಂಗ್ರೆಸ್‌ಗೆ ಬುದ್ಧಿ ಕಲಿಸಲಿದ್ದಾರೆ ಜನ – ಎಚ್.ಡಿ. ಕುಮಾರಸ್ವಾಮಿಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮಧ್ಯಪ್ರವೇಶ ಮಾಡಲಿ – ಜಿ. ಪರಮೇಶ್ವರ್ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಭೀತಿ: ನವೆಂಬರ್ 16ರ ವೇಳೆಗೆ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ; ಮೀನುಗಾರರಿಗೆ ಎಚ್ಚರಿಕೆಅಮೆರಿಕದಲ್ಲಿ ಒಂದೇ ದಿನ ಸರಣಿ ಅವಘಡಗಳು: ವಿಮಾನ ಹಾರಾಟ ಸ್ಥಗಿತ, ಹಡಗು ಅಪಘಾತ, SpaceX ಬೂಸ್ಟರ್ ಸ್ಫೋಟ!ತಮಿಳುನಾಡಿನ ವಿರೋಧಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ, ಮೇಕೆದಾಟಿಗೆ ಅಣೆಕಟ್ಟು ಕಟ್ಟುವುದು ನಮ್ಮ ಹಕ್ಕು ಸಿ ಎಮ್‌ ಡಿ ಕೆ ಶಿವಕುಮಾರ್ಸೌಜನ್ಯಾ ಕೊಲೆ ಪ್ರಕರಣದ ಮರುತನಿಖೆ ಚುರುಕು: ಐವರು ಪ್ರಮುಖ ಸಾಕ್ಷಿಗಳ ವಿಚಾರಣೆಮಹದೇವ್ ಬೆಟ್ಟಿಂಗ್ ಆಯಪ್ ಜಾಲಕ್ಕೆ ಸಿಬಿಐ ಶಾಕ್; 6 ರಾಜ್ಯಗಳ 33 ಕಡೆ ದಾಳಿಆರ್‌ಎಸ್‌ಎಸ್‌ ನಂಟಿನ ಆರೋಪ: ನಿಗಮ ಮಂಡಳಿ ಹುದ್ದೆಗಳಿಗೆ ರಾಜೀನಾಮೆ ನೀಡಲು ಸೂಚನೆKPS ಶಾಲೆಗಳ ಬಲವರ್ಧನೆ – ಕರಡು ಪ್ರಕಟಿಸಿದ ರಾಜ್ಯ ಸರ್ಕಾರಸೋನಿಯಾ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್; ವಿವಾದಾತ್ಮಕ ನಟಿ ಕಂಗನಾ ರಣಾವತ್ ವಿರುದ್ಧ ಎಫ್‌ಐಆರ್ ದಾಖಲುಮಕ್ಕಳಿಗೆ ಹೆಚ್ಚಿದ ಓದಿನ ಒತ್ತಡ – 1 ರಿಂದ 9ನೇ ತರಗತಿವರೆಗೆ ಟ್ಯೂಷನ್‌ಗೆ ಬ್ರೇಕ್ಮೇಕೆದಾಟು ಯೋಜನೆಗೆ ವಿರೋಧ ರಾಜಕೀಯ ಪ್ರೇರಿತ: ದೆಹಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ಪ್ರಧಾನಿ ಒಪ್ಪಿಗೆಪ್ರಧಾನಿ ಮೋದಿ ಭೇಟಿ ವೇಳೆ ಮಾಂಸದಂಗಡಿ ಬಂದ್ ಮಾಡುವ ಅವಶ್ಯಕತೆ ಏನಿತ್ತು – ನಿ. ನ್ಯಾ. ನಾಗಮೋಹನ್‌ನಾಳೆಯಿಂದ ತುಂಗಭದ್ರಾ ಕಾಲುವೆ ನಾಳೆಯಿಂದ ಬಂದ್ – ರೈತರಿಂದ ತೀವ್ರ ಆಕ್ರೋಶಇಡಿಯಿಂದ 580 ಪುಟಗಳ ಚಾರ್ಜ್‌ಶೀಟ್, ಕೆಪಿಎಸ್‌ಸಿ ಹಗರಣದಲ್ಲಿ 4 ಜನರ ಪಟ್ಟಿ ಬಿಡುಗಡೆಮಧುಮೇಹ ಪತ್ತೆಯಲ್ಲಿನ ವಿಳಂಬ ಆತಂಕಕಾರಿ; ಆರಂಭಿಕ ತಪಾಸಣೆಗೆ WHO ಕರೆವಿಶ್ವ ಬಾಕ್ಸ್ ಆಫೀಸ್‌ನಲ್ಲಿ ₹1,110 ಕೋಟಿ ಗಳಿಸಿದ ‘ರಾಮಾಯಣ’; ಯಶ್‌ಗೆ ಮತ್ತೊಂದು 1,000 ಕೋಟಿ ದಾಖಲೆ!ಋತುಬಂಧದ ಮಹಿಳೆಯರ ಆರೋಗ್ಯ ರಕ್ಷಣೆಗೆ ‘ಋತುತಾರೆ’ ಯೋಜನೆ ಜಾರಿ; ನಟಿ, ಮಾಜಿ ಸಂಸದೆ ರಮ್ಯಾ ರಾಯಭಾರಿ

ಡಿಸಿ ಪಿಎ ಚಾಟ್ ಪ್ರಕರಣದಲ್ಲಿ ಸತ್ಯಾ ಹೊರಬರಲಿ – ಎಚ್.ಡಿ. ಕುಮಾರಸ್ವಾಮಿ

ಡಿಸಿ ಪಿಎ ಚಾಟ್ ಪ್ರಕರಣದಲ್ಲಿ ಸತ್ಯಾ ಹೊರಬರಲಿ – ಎಚ್.ಡಿ. ಕುಮಾರಸ್ವಾಮಿ

ಹಾಸನ: ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ಆಪ್ತ ಸಹಾಯಕ ಶಶಿಕಿರಣ್ ಅವರ ಚಾಟ್ ಪ್ರಕರಣದ ಸತ್ಯಾಸತ್ಯತೆ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿದ್ದೇನೆ. ಆದರೆ, ಯಾರಾದರೂ ಹಣ ಪಡೆದಿದ್ದಾರೆ ಎಂದು ನಾನು ಆರೋಪಿಸಿಲ್ಲ ಅಥವಾ ಯಾರ ಮೇಲೂ ಬೆಟ್ಟು ಮಾಡಿ ತೋರಿಸಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆಯಲ್ಲಿ ಮಾತನಾಡಿದ ಅವರು, ಚಾಟ್‌ನಲ್ಲಿ ಉಲ್ಲೇಖವಾಗಿರುವ ವಿಚಾರಗಳ ಸತ್ಯಾಸತ್ಯತೆಯನ್ನು ತನಿಖೆ ನಡೆಸಿ ಎಂದು ಹೇಳುವುದು ತಪ್ಪೇ? ನನ್ನ ಮುಂದೆ ಇಂತಹ ವಿಷಯಗಳು ಬಂದಾಗ ತನಿಖೆಗೆ ಒತ್ತಾಯಿಸುವುದು ಸಹಜ. ಈ ಪ್ರಕರಣದಲ್ಲಿ ಯಾರ ಹೆಸರುಗಳನ್ನೂ ನಾನು ಪ್ರಸ್ತಾಪಿಸಿಲ್ಲ. ಚಾಟ್‌ನಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ ಎಂಬ ಹೆಸರುಗಳಿವೆ. ಅವರು ತಪ್ಪು ಮಾಡಿಲ್ಲದಿದ್ದರೆ ತನಿಖೆಗೆ ಏಕೆ ಭಯಪಡಬೇಕು ಎಂದು ಪ್ರಶ್ನಿಸಿದರು. ಅಧಿಕಾರಿಗಳು ಯಾವ ರೀತಿ ನಡೆದುಕೊಳ್ಳಬೇಕು, ಅದಕ್ಕೆ ಸಂಬಂಧಿಸಿದ ನಿಯಮಗಳೇನು ಎಂಬುದನ್ನು ಸರ್ಕಾರ ಗಮನಿಸಬೇಕು. ಆದರೆ, ಈ ಸರ್ಕಾರ ಅಧಿಕಾರಿಗಳ ನಡವಳಿಕೆಯಲ್ಲಿ ನಿಯಮಗಳ ಎಲ್ಲೆ ಮೀರುವುದಕ್ಕೆ ಪ್ರೋತ್ಸಾಹ ನೀಡುತ್ತಿದೆ. ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಯ ಪಕ್ಕದಲ್ಲಿ ಕುಳಿತುಕೊಂಡು ಏನು ನಡೆದಿದೆ ಎಂಬುದನ್ನು ಗಮನಿಸಿ ಕ್ಲೀನ್‌ಚಿಟ್ ನೀಡಿರುವುದನ್ನು ನೋಡಿದ್ದೇನೆ. ಇಂತಹ ಪರಿಸ್ಥಿತಿಯಲ್ಲಿ ತನಿಖೆ ಯಾವ ರೀತಿ ನಡೆಯಬಹುದು ಎಂದು ಪ್ರಶ್ನಿಸಿದರು.

ಈ ಪ್ರಕರಣದ ಬಗ್ಗೆ ಹೆಚ್ಚಿನ ಚರ್ಚೆ ಮಾಡುವ ಅಗತ್ಯವಿಲ್ಲ. ಸರ್ಕಾರದಲ್ಲಿ ಈಗ ಏನೂ ಆಗುವುದಿಲ್ಲ. ಅದಕ್ಕೆ ಕಾಲ ಬರಬೇಕು. ಕಾಲ ಬಂದಾಗ ಯಾವ ರೀತಿಯ ಬದಲಾವಣೆಗಳಾಗುತ್ತವೆ ಎಂಬುದನ್ನು ಕಾದು ನೋಡೋಣ ಎಂದರು.

ಇಂದು ರಂಗನಾಥಸ್ವಾಮಿ ಸನ್ನಿಧಿಯಲ್ಲಿ ಕುಳಿತು ಹೇಳುತ್ತಿದ್ದೇನೆ. ಅಧಿಕಾರ ದುರುಪಯೋಗ ಹಾಗೂ ತಪ್ಪು ನಡವಳಿಕೆ ತೋರಿದವರಿಗೆ ತಕ್ಕ ಫಲ ದೊರೆಯಬೇಕು. ಅದನ್ನು ದೇವರೇ ನೀಡುತ್ತಾನೆ. ಈ ತನಿಖೆಯಿಂದ ಯಾವುದೇ ಫಲಿತಾಂಶ ಹೊರಬರುವುದಿಲ್ಲ ಎಂಬುದು ನನ್ನ ಅಭಿಪ್ರಾಯ. ಈಗಾಗಲೇ ಮುಖ್ಯಮಂತ್ರಿಗಳೇ ಕ್ಲೀನ್‌ಚಿಟ್ ನೀಡಿದ ಮೇಲೆ ತನಿಖೆ ಹೇಗೆ ನಡೆಯಲಿದೆ ಎಂಬುದನ್ನು ಜನರೇ ಅರ್ಥಮಾಡಿಕೊಳ್ಳಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು