ಆರ್ಎಫ್ಒ ಹೇಮಂತ್ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ – ಆದಾಯಕ್ಕಿಂತ ಅಧಿಕ ಆಸ್ತಿ ತೀವ್ರ ಶೋಧ
ಲಿಂಕ್ ನಕಲಿಸಲಾಗಿದೆ ✓
ಹಾಸನ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್ಎಫ್ಒ) ಹೇಮಂತ್ಕುಮಾರ್ ಅವರಿಗೆ ಸಂಬಂಧಿಸಿದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಹಾಸನ ನಗರದ ಚಿಕ್ಕಹೊನ್ನೇನಹಳ್ಳಿಯಲ್ಲಿರುವ ಹೇಮಂತ್ಕುಮಾರ್ ಅವರ ನಿವಾಸ, ಸಕಲೇಶಪುರದಲ್ಲಿರುವ ಬಾಡಿಗೆ ಮನೆ ಹಾಗೂ ಅವರ ಕಚೇರಿ, ಆಲೂರು ತಾಲ್ಲೂಕಿನ ದೊಡ್ಡಗುತ್ತಿಗೆದಾರ ಹರೀಶ್ ಅವರು ಹೇಮಂತ್ಕುಮಾರ್ ಅವರ ಆಪ್ತರಾಗಿದ್ದಾರೆ ಎನ್ನಲಾಗಿದೆ. ಐದು ಸ್ಥಳಗಳಲ್ಲಿ ಏಕಕಾಲಕ್ಕೆ ಪರಿಶೀಲನೆ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಆಸ್ತಿ ಹಾಗೂ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ನಂದಿನಿ, ಡಿವೈಎಸ್ಪಿ ಸುರೇಶ್ ಹಾಗೂ ಇನ್ಸ್ಪೆಕ್ಟರ್ಗಳಾದ ಶಿಲ್ಪ, ಗವಿರಾಜು ಮತ್ತು ಚಂದ್ರಶೇಖರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಡೆದಿರುವ ಈ ದಾಳಿಯ ಪರಿಶೀಲನೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.ಮಗ್ಗೆ ಗ್ರಾಮದಲ್ಲಿರುವ ಅವರ ಮಾವನ ಮನೆ ಮತ್ತು ಹಾಸನದ ಕುವೆಂಪುನಗರದಲ್ಲಿರುವ ಗುತ್ತಿಗೆದಾರ ಹರೀಶ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ.
ರಮೇಶ್ ಹಾಸನ್
Peepal Media · ಬ್ರೇಕಿಂಗ್ ಸುದ್ದಿ ವಿಭಾಗ