ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಲೋಕಸಭಾ ಚುನಾವಣಾ ಎಫೆಕ್ಟ್ : LPG ಸಿಲಿಂಡರ್ ಬೆಲೆ ಇಳಿಸಿದ ಸರ್ಕಾರ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಲೋಕಸಭಾ ಚುನಾವಣಾ ಎಫೆಕ್ಟ್ : LPG ಸಿಲಿಂಡರ್ ಬೆಲೆ ಇಳಿಸಿದ ಸರ್ಕಾರ

ಮುಂಬರುವ ಲೋಕಸಭೆ ಚುನಾವಣೆ ಹಾಗೂ ಸಾಲು ಸಾಲು ಉಪಚುನಾವಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ದೈನಂದಿನ ಗೃಹಬಳಕೆಯ LPG ಸಿಲಿಂಡರ್ ಬೆಲೆಯನ್ನು ಇಳಿಸಿದೆ. ಇದರಿಂದ ಹಣದುಬ್ಬರದ ಹೊಡೆತಕ್ಕೆ ಸಿಕ್ಕಿ ನಲುಗುತ್ತಿರುವ ಜನತೆಗೆ ಸ್ವಲ್ಪ ರಿಲೀಫ್ ಸಿಕ್ಕರೂ ಇದು ಚುನಾವಣೆ ದೃಷ್ಟಿಯಿಂದ ತಾತ್ಕಾಲಿಕ ಇಳಿಕೆ ಎಂಬಂತೆ ಜನ ಮಾತನಾಡಿಕೊಳ್ಳುತ್ತಿದ್ದಾರೆ.

ಸರ್ಕಾರವು ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ (LPG Price) 200 ರೂ.ವರೆಗೆ ಕಡಿತಗೊಳಿಸಿದೆ. ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ಮೇಲೆ 200 ರೂ.ಗಳ ಸಹಾಯಧನವನ್ನ ಸರ್ಕಾರ ಘೋಷಿಸಿದೆ.

ಇಳಿಕೆಯಲ್ಲೂ ಗೊಂದಲ ಮೂಡಿಸಿದ ಕೇಂದ್ರ ಸರ್ಕಾರದ ನಡೆ
ಸರ್ಕಾರ ಏನೋ ದೈನಂದಿನ ಗೃಹ ಬಳಕೆ ಸಿಲಿಂಡರ್ ಬೆಲೆ ಇಳಿಕೆ ಎಂದು ಘೋಷಿಸಿದರೂ ಅಲ್ಲೂ ಸಹ ಕೆಲವೊಂದು ಟ್ವಿಸ್ಟ್ ಇಟ್ಟಿದೆ. ಉಜ್ವಲ ಯೋಜನೆಯಡಿ ಬರುವ ಫಲಾನುಭವಿಗಳಿಗೆ ಮಾತ್ರ ಈ ಸಹಾಯಧನವನ್ನ (ಸಬ್ಸಿಡಿ) ಏರಿಕೆ ಮಾಡಿದೆ.

ಆಗಸ್ಟ್ ಒಂದರಂದು ಪೆಟ್ರೋಲಿಯಂ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 100 ರೂಪಾಯಿ ಕಡಿತಗೊಳಿಸಿದ್ದವು. ಆದರೆ, ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಸರ್ಕಾರದ ಪ್ರಕಾರ, ಉಜ್ವಲ ಯೋಜನೆಯಡಿ ಎಲ್‌ಪಿಜಿ ಸಿಲಿಂಡರ್ ಬೆಲೆ 200 ರೂಪಾಯಿಗಳಷ್ಟು ಅಗ್ಗವಾಗಲಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಮಾತ್ರ ಅಡುಗೆ ಅನಿಲದ ಸಬ್ಸಿಡಿಯ ಲಾಭ ಸಿಗಲಿದೆ ಎಂದು ಕೇಂದ್ರ ಸರ್ಕಾರ ಕಳೆದ ವರ್ಷವೇ ಸ್ಪಷ್ಟಪಡಿಸಿತ್ತು. ಅಡುಗೆ ಅನಿಲ ಸಿಲಿಂಡರ್ ಮೇಲೆ ಬೇರೆ ಯಾರಿಗೂ ಸಬ್ಸಿಡಿ ನೀಡುವುದಿಲ್ಲ. ಉಜ್ವಲ ಯೋಜನೆಯಡಿ ಸರ್ಕಾರ ಈಗಾಗಲೇ 200 ರೂಪಾಯಿ ಸಬ್ಸಿಡಿ ನೀಡುತ್ತಿದ್ದು, ಈಗ ಹೆಚ್ಚುವರಿಯಾಗಿ 200 ರೂಪಾಯಿ ನೀಡುತ್ತಿದೆ.

2016 ರಿಂದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸಿಲಿಂಡರ್ ನೀಡಲಾಗಿತ್ತು. ಈ ಯೋಜನೆ ಅನ್ವಯ ವರ್ಷದಲ್ಲಿ ಒಟ್ಟು 12 ಅಡುಗೆ ಅನಿಲ ಸಿಲಿಂಡರ್‌ಗಳ ಮೇಲೆ ಸಬ್ಸಿಡಿ ಪಡೆಯಬಹುದು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು