ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಧು ಬಂಗಾರಪ್ಪ ನೀವು ದಿನಕ್ಕೊಂದು ಶೂ ಹಾಕ್ತೀರಿ, ಮಕ್ಕಳಿಗೆ ಕಿತ್ತೋಗಿರೋ ಶೂ ಕೊಡ್ತೀರಿ ಏನ್ರಿ ನಿಮ್ದು – ಶ್ರೀರಾಮುಲು

ಮಧು ಬಂಗಾರಪ್ಪ ನೀವು ದಿನಕ್ಕೊಂದು ಶೂ ಹಾಕ್ತೀರಿ, ಮಕ್ಕಳಿಗೆ ಕಿತ್ತೋಗಿರೋ ಶೂ ಕೊಡ್ತೀರಿ ಏನ್ರಿ ನಿಮ್ದು – ಶ್ರೀರಾಮುಲು

ಬಳ್ಳಾರಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅರಮನೆಯಲ್ಲಿದ್ದು, ಜನರನ್ನು ಬೀದಿಗೆ ನಿಲ್ಲಿಸುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಪ್ರಸಕ್ತ ವರ್ಷ ಮಳೆ ಕೊರತೆಯಿಂದ ತೀವ್ರ ಬರಗಾಲ ಎದುರಾಗಿದ್ದರೂ ಮುಖ್ಯಮಂತ್ರಿ ಜನರಿಗೆ ಸಹಾಯ ಮಾಡಿಲ್ಲ. ರೈತರ ಕಷ್ಟಗಳನ್ನು ಆಲಿಸಿಲ್ಲ. ದೆಹಲಿಗೆ ತೆರಳಿ ರಾಹುಲ್ ಗಾಂಧಿ ಅವರ ಮನೆ ಕಾಯುತ್ತ ಕಾಲ ಕಳೆದಿದ್ದಾರೆ. ಇದು ಹೈಟೆಕ್ ಸರ್ಕಾರ, ಬಡವರಿಗೆ ಸಹಾಯ ಮಾಡದ ಬಿಸಿನೆಸ್‌ಮನ್ ಸರ್ಕಾರ ಎಂದು ಟೀಕಿಸಿದರು.ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಗುರುವಾರ ಸಂಜೆ ನಡೆದ ‘ಬಳ್ಳಾರಿ ಚಲೋ’ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಹಾಗೂ ಶಾಸಕ ಬಿ.ನಾಗೇಂದ್ರ ಅವರು ನನಗೆ ಶತ್ರುವಲ್ಲ, ಅವರ ಮೇಲೆ ಯಾವುದೇ ದ್ವೇಷವಿಲ್ಲ ಎಂದರು.

ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆಯಾಗಬೇಕಿದ್ದ 187 ಕೋಟಿ ನಿಗಮದ ಹಣದ ಹಗರಣದ ವಿರುದ್ಧ ನಮ್ಮ ಹೋರಾಟವಾಗಿದೆ. ತನಿಖೆ ವೇಳೆ ನಾಗೇಂದ್ರ ಅವರ ಹೆಸರನ್ನು ತನಿಖಾಧಿಕಾರಿಗಳು ಉಲ್ಲೇಖಿಸಿದ್ದಾರೆ. ಈ ಹಣ ನಿಗಮಕ್ಕೆ ವಾಪಸಾಗಿ ಸಮುದಾಯದ ಜನರಿಗೆ ತಲುಪಬೇಕು. ಇದನ್ನು ಪ್ರಶ್ನಿಸುವುದು ತಪ್ಪೇ ಎಂದು ಕೇಳಿದರು. ಮಧು ಬಂಗಾರಪ್ಪನವರು ದಿನಕ್ಕೊಂದು ಹೊಸ ಶೂ ಬದಲಾಯಿಸ್ತಾರೆ… ಆದರೆ ಶಾಲಾ ಮಕ್ಕಳಿಗೆ ಕೊಡುವ ಶೂ ಚಿಂದಿ ಆಯುವವರು ಕೂಡ ತಗೋಳಲ್ಲ ಎಂದಿದ್ದಾರೆ, ಹಾಕಿಕೊಂಡ ಕೂಡಲೇ ಶೂ ಹರಿಯುತ್ತದೆ ಶಿಕ್ಷಣ ಎಂಬುದು ಹುಟ್ಟಿನಿಂದ ಸಾಯುವವರೆಗೂ ಇರುತ್ತದೆ .ಹೀಗಾಗಿ, ಶಿಕ್ಷಣದ ಕಡೆ ಗಮನ ಕೊಡಬೇಕು ಎಂದರು.

ರೆಡ್ಡಿ, ಶ್ರೀರಾಮುಲು ಮತ್ತು ಯಡಿಯೂರಪ್ಪ ಅವರು ಪ್ರತ್ಯೇಕ ಪಕ್ಷ ಕಟ್ಟಿದ್ದರು ಎಂದು ತಂಗಡಗಿ ಹೇಳಿದ್ದಾರೆ. ಯಡಿಯೂರಪ್ಪ ಪಾರ್ಟಿ ಕಟ್ಟಿದ್ದು ಸ್ವಾರ್ಥಕ್ಕಲ್ಲ, ಜನಹಿತಕ್ಕಾಗಿ. ನಿನ್ನ ಹಾಗೆ ಅಧಿಕಾರಕ್ಕಾಗಿ ಪದೇ ಪದೇ ಸ್ವಾಮಿ ನಿಷ್ಠೆ, ಪಕ್ಷ ನಿಷ್ಠೆ ಬದಲಾಯಿಸುವವರಲ್ಲ, ನೀವು ಗಾಳಿ ಬಂದ ಕಡೆ ತೂರಿಕೊಳ್ಳೋ ಜನ. ಬಿಜೆಪಿ ಇದ್ದಾಗ ನಮ್ಮ ಹತ್ರ ಮಂತ್ರಿಯಾದಿರಿ, ಸಿದ್ದರಾಮಯ್ಯ ಇದ್ದಾಗ ಅವರಿಗೆ ಪೂಜೆ ಮಾಡಿ ಸಚಿವರಾಗಿದ್ದೀರಿ. ಈಗ ಶಿವಕುಮಾರ್ ಅವರಿಗೆ ಪೂಜೆ ಮಾಡಿ ಮಂತ್ರಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂದು ಶ್ರೀರಾಮಲು ಲೇವಡಿ ಮಾಡಿದ್ದಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು