ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಂಗಳೂರಿನಲ್ಲಿ ಮೋದಿ: 3800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ

PPeepal Media

Peepal Media • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಮಂಗಳೂರಿನಲ್ಲಿ ಮೋದಿ: 3800 ಕೋಟಿ ಮೊತ್ತದ 8 ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ

ಮಂಗಳೂರು: ಕರ್ನಾಟಕದಲ್ಲಿ ವ್ಯಾಪಾರ, ಉದ್ಯೋಗ ಸಾಮರ್ಥ್ಯ ಹೆಚ್ಚಿದೆ. ಒಂದು ಜಿಲ್ಲೆ, ಒಂದು ಉತ್ಪನ್ನ ಯೋಜನೆಯಿಂದಾಗಿ ಕರ್ನಾಟಕದ ರೈತರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗಿದೆ .ಕರಾವಳಿ ಮೂಲ ಸೌಕರ್ಯಕ್ಕೆ ಸಾಗರಮಾಲಾ ಶಕ್ತಿ ನೀಡಿದೆ. ದೇಶದ ಬಂದರುಗಳ ಸಾಮರ್ಥ್ಯ ದ್ವಿಗುಣಗೊಂಡಿದೆ. ವಿಕಸಿತ ಭಾರತ ನಿರ್ಮಾಣಕ್ಕೆ ಮೇಕ್ ಇನ್ ಇಂಡಿಯಾ ಅತ್ಯಂತ ಅಗತ್ಯ ಎಂದು ಮೋದಿ ಹೇಳಿದರು. ನಗರದ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜನೆಗೊಂಡ ಸಮಾವೇಶದಲ್ಲಿ ನೆರೆದ ಜನಸ್ತೋಮವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ನರೇಂದ್ರ ಮೋದಿಯವರು ನವಮಂಗಳೂರು ಬಂದರು ಪ್ರಾಧಿಕಾರ ಮತ್ತು ಮಂಗಳೂರು ರಿಫೈನರಿ & ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂ ಆರ್ ಪಿ ಎಲ್) ನ ಟ್ಟು 3,783 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಲು ಮಂಗಳೂರಿಗೆ ಆಗಮಿಸಿದ್ದರು.

ಎನ್ಎಂಪಿಎ ಯಲ್ಲಿ ಸಮಗ್ರ ಎಲ್ ಪಿ ಜಿ ಹಾಗೂ ಬೃಹತ್ ಪಿ ಒ ಎಲ್ ಸೌಲಭ್ಯ ಸ್ಥಾಪನೆ, ಎನ್ಎಂಪಿಎ ಯಲ್ಲಿಶೇಖರಣಾ ಟ್ಯಾಕ್ ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ, ಎನ್ಎಂಪಿಎ ಯಲ್ಲಿಬಿಟುಮೆನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ, ಎನ್ಎಂಪಿಎ ಯಲ್ಲಿಬಿಟುಮೆನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್ ಗಳು, ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ, ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕೆ ಬಂದರು ಅಭಿವೃದ್ಧಿಗೆ ಭೂಮಿಪೂಜೆ ಕಾಮಗಾರಿಗಳಿಗೆ ರಿಮೋಟ್ ಮೂಲಕ ಶಿಲಾನ್ಯಾಸ ನೆರವೇರಿಸಿದರು.

ರು. 281 ಕೋಟಿ ವೆಚ್ಚದ ಕಂಟೇನರ್ ಗಳು ಹಾಗೂ ಇತರ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14ರ ಯಾಂತ್ರೀಕರಣ,1829 ಕೋಟಿ ವೆಚ್ಚದ ಬಿ ಎಸ್ 6 ಉನ್ನತೀಕರಣ ಯೋಜನೆ ಮತ್ತು 677 ಕೋಟಿ ವೆಚ್ಚದ ಸಮುದ್ರ ನೀರಿನ ನಿರ್ಲವಣೀಕರಣ ಘಟಕ ಯೋಜನೆಗಳನ್ನು ಪ್ರಧಾನಿಯವರು ಲೋಕಾರ್ಪಣೆ ಗೊಳಿಸಿದರು.

ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಮೋದಿಯವರಿಗೆ ಪೇಟ ತೊಡಿಸಿ ಸ್ವಾಗತಿಸಿದರು. ಸಂಸದ ನಳಿನ್ ಕುಮಾರ್ ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರು. ಸುನಿಲ್ ಕುಮಾರ್ ಪರಶುರಾಮನ ಮೂರ್ತಿ ನೀಡಿದರು.ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ ಇದ್ದರು.
ಈ ಸಂದರ್ಭದಲ್ಲಿ ಮೋದಿ ಆರು ಮಂದಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಅನುಮತಿ ಪತ್ರ ಹಸ್ತಾಂತರಿಸಿದರು.

ಮುಖ್ಯಮಂತ್ರಿ ಸಿ ಎಂ ಬಸವರಾಜ ಬೊಮ್ಮಾಯಿ ಪ್ರಧಾನಿಗಳನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು