ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಣಿಪುರ ವೈರಲ್‌ ವಿಡಿಯೋ: ಮುಖ್ಯ ಆರೋಪಿ ಹೆರದಾಸ್‌ ಬಂಧನ

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಮಣಿಪುರ ವೈರಲ್‌ ವಿಡಿಯೋ: ಮುಖ್ಯ ಆರೋಪಿ ಹೆರದಾಸ್‌ ಬಂಧನ

ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಮುಖ್ಯ ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಎರಡು ತಿಂಗಳ ಕಾಲದ ನಂತರ ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಿದಂತಾಗಿದೆ.

ಆರೋಪಿಯನ್ನು ಹೆರದಾಸ್ (32) ಎಂದು ಗುರುತಿಸಲಾಗಿದ್ದು, ವೈರಲ್‌ ಆಗಿರುವ ವಿಡೀಯೋದಲ್ಲಿ ಆತ ವೈರಲ್‌ ಅಂಗಿ ಧರಿಸಿದ್ದ, ಈತನನ್ನು ತೌಬಲ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಣಿಪುರದ ಗುಡ್ಡಗಾಡು ಪ್ರದೇಶಗಳಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ಎರಡು ತಿಂಗಳ ಹಳೆಯ ವೀಡಿಯೊ ಬುಧವಾರ ಸೋಷಿಯಲ್‌ ಮೀಡಿಯಾಗಳಲ್ಲಿ ಕಾಣಿಸಿಕೊಂಡ ನಂತರ ಉದ್ವಿಗ್ನತೆ ಹೆಚ್ಚುತ್ತಿದೆ. ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ ಒಂದು ದಿನದ ನಂತರ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೇ 4ರಂದು ಈ ಘಟನೆ ನಡೆದಿದೆ.

ಪೊಲೀಸರು ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಆರೋಪಿಗಳನ್ನು ಬಂಧಿಸಲು ಸರ್ವಪ್ರಯತ್ನ ನಡೆಸಲಾಗುತ್ತಿದೆ ಮತ್ತು ಆರೋಪಿಗಳನ್ನು ಬಂಧಿಸಲು 12 ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.

ಪೊಲೀಸ್ ದೂರಿನ ಪ್ರಕಾರ, ಘಟನೆಯ ದಿನ ಸುಮಾರು 800-1,000 ಜನರು ಅತ್ಯಾಧುನಿಕ ಆಯುಧಗಳನ್ನು ಹಿಡಿದುಕೊಂಡು ಬಿ.ಫೈನೋಮ್ ಗ್ರಾಮಕ್ಕೆ ನುಗ್ಗಿ ಆಸ್ತಿಗಳನ್ನು ಧ್ವಂಸಗೊಳಿಸಿದರು ಮತ್ತು ದೋಚಿದರು ಮತ್ತು ಮನೆಗಳನ್ನು ಸುಟ್ಟು ಹಾಕಿದರು. ದುಷ್ಕರ್ಮಿಗಳು ಮೈತೇಯ್ ಸಂಘಟನೆಗಳ ಸದಸ್ಯರು ಎಂದು ಶಂಕಿಸಲಾಗಿದೆ.

ಈ ವಿಡಿಯೋಗೆ ಎಲ್ಲೆಡೆಯಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಯಾವುದೇ ವಿಳಂಬವಿಲ್ಲದೆ ಸರ್ವಪಕ್ಷ ನಿಯೋಗವನ್ನು ಮಣಿಪುರಕ್ಕೆ ಕಳುಹಿಸಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.

ಈ ನಡುವೆ ಕೇಂದ್ರ ಸರ್ಕಾರವು ಈ ವಿಡಿಯೋವನ್ನು ಡೊಲೀಟ್‌ ಮಾಡುವಂತೆ ಟ್ವಿಟರ್‌ ಸಂಸ್ಥೆಗೆ ಆದೇಶಿಸಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಜನರೂ ಅದನ್ನೂ ಸೋಷಿಯಲ್‌ ಮೀಡಿಯಾಗಳಲ್ಲಿ ಶೇರ್‌ ಮಾಡಬಾರದು ಎಂದಿದೆ.

ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆಸಿದ ವಿಡಿಯೋ ವೈರಲ್:‌ ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು