ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗಾಯಕಿ ಮಂಗ್ಲಿ ಬರ್ತ್ ಡೇ ಪಾರ್ಟಿಯಲ್ಲಿ ಗಾಂಜಾ ಅಫೀಮು ಪತ್ತೆ ; ಪ್ರಕರಣ ದಾಖಲು

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ, ಮೀಡಿಯಾ

• 1 ನಿಮಿಷದ ಓದು

ಗಾಯಕಿ ಮಂಗ್ಲಿ ಬರ್ತ್ ಡೇ ಪಾರ್ಟಿಯಲ್ಲಿ ಗಾಂಜಾ ಅಫೀಮು ಪತ್ತೆ ; ಪ್ರಕರಣ ದಾಖಲು

ಬಹುಭಾಷಾ ಗಾಯಕಿ ಮಂಗ್ಲಿ ಅವರ ಹುಟ್ಟುಹಬ್ಬದ ವಿಶೇಷವಾಗಿ ಆಯೋಜಿಸಿದ್ದ ಬರ್ತ್ ಡೇ ಪಾರ್ಟಿಯಲ್ಲಿ ಗಾಂಜಾ ಸೇರಿದಂತೆ ವಿದೇಶಿ ಮದ್ಯಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮಂಗ್ಲಿ ಅವರ ಮೇಲೂ ಪ್ರಕರಣ ದಾಖಲಿಸಿದ ಬಗ್ಗೆ ವರದಿಯಾಗಿದೆ.

ಮಂಗಳವಾರ ರಾತ್ರಿ ಹೈದರಾಬಾದ್ ನ ಚೆವೆಲ್ಲಾ ತ್ರಿಪುರಾ ರೆಸಾರ್ಟ್‌ನಲ್ಲಿ ಗಾಯಕಿ ಮಂಗ್ಲಿಯ ಬರ್ತ್​ಡೇ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಈ ವೇಳೆ ಪಾರ್ಟಿಯಲ್ಲಿ ತೆಲುಗು ಚಿತ್ರರಂಗ ಮತ್ತು ಕಿರುತೆರೆಯ ಹಲವರು ಭಾಗಿಯಾಗಿದ್ದರು. ಹಾಡು ನೃತ್ಯ ಸೇರಿದಂತೆ ಮದ್ಯದ ಪಾರ್ಟಿಯೂ ಸಹ ಕಾರ್ಯಕ್ರಮದಲ್ಲಿ ಜೋರಾಗಿ ನಡೆದಿತ್ತು.

ಈ ವೇಳೆ ಖಚಿತ ಮಾಹಿತಿ ಮೇರೆಗೆ ಕಾರ್ಯಕ್ರಮಕ್ಕೆ ಬಂದ ಪೊಲೀಸರಿಗೆ ಹಲವರ ಟೇಬಲ್ ನಲ್ಲಿ ಮಾದಕ ವಸ್ತುಗಳು ಪತ್ತೆಯಾಗಿವೆ. ಇದಲ್ಲದೆ ಸ್ಥಳದಲ್ಲಿ ಪರವಾನಗಿ ಇಲ್ಲದ ವಿದೇಶಿ ಮದ್ಯ ಕೂಡ ಪತ್ತೆಯಾಗಿದೆ. ವಿದೇಶಿ ಮದ್ಯವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ವೇಳೆ ಗಾಯಕಿ ಮಂಗ್ಲಿ ಅವರು ಮಧ್ಯೆ ಪ್ರವೇಶಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಪಾರ್ಟಿಯಲ್ಲಿದ್ದವರ ರಕ್ತದ ಮಾದರಿಗಳನ್ನು ಪಡೆದು ಪರೀಕ್ಷೆ ಮಾಡಲಾಗಿದೆ. 9 ಮಂದಿ ಗಾಂಜಾ ಸೇವಿಸಿರುವುದು ದೃಢವಾಗಿದೆ ಎಂದು ವರದಿ ತಿಳಿಸಿದೆ. ಅವರ ವಿರುದ್ಧ NDPS ಮತ್ತು ಸೌಂಡ್ ಪೊಲ್ಯೂಷನ್ ಆಕ್ಟ್ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು