ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಹಾರದ ಖಾಸಗಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: 10 ರೋಗಿಗಳು ಸಜೀವ ದಹನ, ಹಲವರ ಸ್ಥಿತಿ ಗಂಭೀರ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಬಿಹಾರದ ಖಾಸಗಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: 10 ರೋಗಿಗಳು ಸಜೀವ ದಹನ, ಹಲವರ ಸ್ಥಿತಿ ಗಂಭೀರ

ಮುಜಾಫರ್‌ಪುರ (ಬಿಹಾರ), ಜೂನ್ 4: ಬಿಹಾರದ ಮುಜಾಫರ್‌ಪುರ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಗುರುವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 10 ರೋಗಿಗಳು ಸಜೀವ ದಹನಗೊಂಡು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಘಟನೆಯ ವೇಳೆ ಆಸ್ಪತ್ರೆಯಲ್ಲಿದ್ದ 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಆಸ್ಪತ್ರೆಯಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಪರಿಣಾಮ ಆಸ್ಪತ್ರೆಯಾದ್ಯಂತ ದಟ್ಟ ಹೊಗೆ ಆವರಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು.

ತೀವ್ರ ನಿಗಾ ಘಟಕ (ಐಸಿಯು) ಹಾಗೂ ವಿವಿಧ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳು ಬೆಂಕಿ ಮತ್ತು ಹೊಗೆಯಿಂದ ಹೊರಬರಲು ಸಾಧ್ಯವಾಗದೆ ಸಿಲುಕಿಕೊಂಡರು. ಹೊಗೆಯ ತೀವ್ರತೆ ಹಾಗೂ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಹಲವರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಆಸ್ಪತ್ರೆಯ ಕಿಟಕಿಗಳು ಮತ್ತು ಬಾಗಿಲುಗಳನ್ನು ಒಡೆದು ಒಳಗಿದ್ದ ರೋಗಿಗಳು ಹಾಗೂ ಅವರ ಸಂಬಂಧಿಕರನ್ನು ಹೊರಗೆ ಕರೆತರಲಾಯಿತು. ಕಾರ್ಯಾಚರಣೆಯಲ್ಲಿ 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ರಕ್ಷಿಸಲ್ಪಟ್ಟವರಲ್ಲಿ ಕೆಲವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಆಸ್ಪತ್ರೆಯ ಸುರಕ್ಷತಾ ಕ್ರಮಗಳು ಹಾಗೂ ಅಗ್ನಿ ಅವಘಡದ ನಿಖರ ಕಾರಣದ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು