ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗಾನ ಕೋಗಿಲೆ ಎಸ್. ಜಾನಕಿ ಇನ್ನಿಲ್ಲ; 48 ಸಾವಿರಕ್ಕೂ ಹೆಚ್ಚು ಹಾಡುಗಳ ಮೂಲಕ ಅಮರವಾದ ಧ್ವನಿ ಈಗ ಮೌನ

PPeepal Media Desk

Peepal Media Desk ದೇಶ, ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಗಾನ ಕೋಗಿಲೆ ಎಸ್. ಜಾನಕಿ ಇನ್ನಿಲ್ಲ; 48 ಸಾವಿರಕ್ಕೂ ಹೆಚ್ಚು ಹಾಡುಗಳ ಮೂಲಕ ಅಮರವಾದ ಧ್ವನಿ ಈಗ ಮೌನ

ಮೈಸೂರು: ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ, ಗಾನ ಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಸಂಗೀತಾಭಿಮಾನಿಗಳು, ಚಿತ್ರರಂಗದ ಗಣ್ಯರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಸಂಗೀತ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಎಸ್. ಜಾನಕಿ ಅವರು 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ 20ಕ್ಕೂ ಹೆಚ್ಚು ಭಾರತೀಯ ಹಾಗೂ ವಿದೇಶಿ ಭಾಷೆಗಳಲ್ಲಿ ತಮ್ಮ ವಿಶಿಷ್ಟ ಕಂಠಸಿರಿಯ ಮೂಲಕ ಸಂಗೀತಾಸಕ್ತರ ಮನ ಗೆದ್ದಿದ್ದರು. ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ ಅವರು ಹಾಡಿದ ಅನೇಕ ಗೀತೆಗಳು ಇಂದಿಗೂ ಜನಮನದಲ್ಲಿ ಅಚ್ಚಳಿಯದೆ ಉಳಿದಿವೆ.

1938ರ ಏಪ್ರಿಲ್ 23ರಂದು ಜನಿಸಿದ ಎಸ್. ಜಾನಕಿ ಅವರು 1957ರಲ್ಲಿ ತಮಿಳಿನ ವಿಧಿಯಿನ್ ವಿಲಾಯಟ್ಟು ಚಿತ್ರದ ಮೂಲಕ ಹಿನ್ನೆಲೆ ಗಾಯನ ಆರಂಭಿಸಿದರು. ತಮ್ಮ ಗಾಯನ ಜೀವನದ ಮೊದಲ ವರ್ಷದಲ್ಲೇ ಹಲವು ಭಾಷೆಗಳಲ್ಲಿ ಹಾಡುಗಳನ್ನು ದಾಖಲಿಸುವ ಮೂಲಕ ಅಸಾಮಾನ್ಯ ಪ್ರತಿಭೆಯನ್ನು ಪ್ರದರ್ಶಿಸಿದ್ದರು. ನಂತರದ ವರ್ಷಗಳಲ್ಲಿ ಸಾವಿರಾರು ಹಾಡುಗಳಿಗೆ ಧ್ವನಿಯಾಗಿ ಭಾರತೀಯ ಸಂಗೀತ ಲೋಕದ ಶ್ರೇಷ್ಠ ಗಾಯಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡರು.

ತಮ್ಮ ವೃತ್ತಿಜೀವನದಲ್ಲಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಹಾಗೂ ವಿವಿಧ ರಾಜ್ಯಗಳ 33ಕ್ಕೂ ಹೆಚ್ಚು ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್, ತಮಿಳುನಾಡು ಸರ್ಕಾರದ ಕಲೈಮಾಮಣಿ ಪ್ರಶಸ್ತಿ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಅವರಿಗೆ ಸಂದಿವೆ.

2013ರಲ್ಲಿ ಭಾರತ ಸರ್ಕಾರ ಘೋಷಿಸಿದ್ದ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸುವ ಮೂಲಕವೂ ಅವರು ದೇಶದ ಗಮನ ಸೆಳೆದಿದ್ದರು. ದಕ್ಷಿಣ ಭಾರತದ ಕಲಾವಿದರಿಗೆ ತಡವಾಗಿ ಗೌರವ ನೀಡಲಾಗುತ್ತಿದೆ ಎಂಬ ಕಾರಣವನ್ನು ಅವರು ಆಗ ಉಲ್ಲೇಖಿಸಿದ್ದರು.

2016ರಲ್ಲಿ ಚಿತ್ರಗಾಯನದಿಂದ ನಿವೃತ್ತಿ ಘೋಷಿಸಿದ್ದರೂ, ಬಳಿಕ ವಿಶೇಷ ಸಂದರ್ಭಗಳಲ್ಲಿ ಮತ್ತೆ ಹಾಡುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು. ತಮ್ಮ ಅಪೂರ್ವ ಕಂಠಸಿರಿ, ಭಾವಪೂರ್ಣ ಗಾಯನ ಹಾಗೂ ಬಹುಭಾಷಾ ಪ್ರತಿಭೆಯ ಮೂಲಕ ಭಾರತೀಯ ಸಂಗೀತ ಲೋಕದಲ್ಲಿ ಅಜರಾಮರ ಸ್ಥಾನ ಪಡೆದಿರುವ ಎಸ್. ಜಾನಕಿ ಅವರ ನಿಧನದಿಂದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು