ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಚಿವ ಉಮೇಶ್‌ ಕತ್ತಿ ಹೃದಯಾಘಾತದಿಂದ ನಿಧನ

PPeepal Media

Peepal Media • ಬ್ರೇಕಿಂಗ್ ಸುದ್ದಿ, ರಾಜ್ಯ

• 1 ನಿಮಿಷದ ಓದು

ಸಚಿವ ಉಮೇಶ್‌ ಕತ್ತಿ ಹೃದಯಾಘಾತದಿಂದ ನಿಧನ

ಬೆಂಗಳೂರು: ರಾಜ್ಯದ ಅರಣ್ಯ ಸಚಿವ ಉಮೇಶ್‌ ಕತ್ತಿಯವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಇಂದು ರಾತ್ರಿ 11 ಗಂಟೆ ಸುಮಾರಿಗೆ ಸಚಿವ ಉಮೇಶ್‌ ಕತ್ತಿಯವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಅವರ ಮನೆಯ ಬಳಿಯೇ ಇರುವ ಎಂ ಎಸ್‌ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಕ್ಷಣವೇ ವೈದ್ಯರು ತುರ್ತು ನಿಗಾ ಘಟಕಕ್ಕೆ ದಾಖಲಿಸಿಕೊಂಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.

ಉಮೇಶ್‌ ಕತ್ತಿಯವರ ಪೂರ್ತಿ ಹೆಸರು ಉಮೇಶ್ ವಿಶ್ವನಾಥ್‌ ಕತ್ತಿ ಎಂದು. ಭಾರತೀಯ ಜನತಾ ಪಕ್ಷದ ಮುಖಂಡರಾಗಿ ಆಗಸ್ಟ್‌ 4, 2021 ರಂದು ರಾಜ್ಯ ಸರ್ಕಾರದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಖಾತೆಯ ಸಚಿವರಾಗಿ ಮತ್ತು ಅರಣ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರಲ್ಲದೆ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿದ್ದರು.

ಎಂಟು ಸಲ ಶಾಸಕರಾಗಿ ಆಯ್ಕೆಯಾಗಿದ್ದ ಉಮೇಶ್‌ ಕತ್ತಿ  1985ರಲ್ಲಿ ಶಾಸಕರಾಗಿದ್ದ ತಮ್ಮ ತಂದೆ ವಿಶ್ವನಾಥ ಕತ್ತಿಯವರ ನಿಧನದ ನಂತರದಲ್ಲಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. ಒಂಭತ್ತು ಸಲ ಚುನಾವಣೆಗೆ ಸ್ಪರ್ಧಿಸಿ ಒಮ್ಮೆ ಮಾತ್ರ ಸೋಲು ಕಂಡಿದ್ದ ಉಮೇಶ್‌ ಕತ್ತಿ ಆರು ಬಾರಿ ಪಕ್ಷಾಂತರ ಮಾಡಿದ್ದರು.  

ಹೆಂಡತಿ ಶೀಲಾ, ಮಗ ನಿಖಿಲ್‌ ಹಾಗೂ ಮಗಳು ಸ್ನೇಹಾ ಅವರನ್ನು ಉಮೇಶ್‌ ಕತ್ತಿ ಅಗಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವಾರು ಮುಖಂಡರು ತೀವ್ರ ಸಂತಾಪ ಸೂಚಿಸಿದ್ದಾರೆ.

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು