ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ವಾಲ್ಮೀಕಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರು ನೈತಿಕ ಹೊಣೆ ಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ನಿಗಮದ ಲೆಕ್ಕಾಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ಆತ್ಮಹತ್ಯೆಗೂ ಮುನ್ನ ಅವರು ಬರೆದಿದ್ದ ಡೆತ್‌ನೋಟ್‌ನಲ್ಲಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿದ್ದವು. ₹80 ಕೋಟಿಗೂ ಅಧಿಕ ಹಣವನ್ನು ನಕಲಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂಬ ಆರೋಪ ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ವಿಧಾನಮಂಡಲದ ಅಧಿವೇಶನದಲ್ಲೂ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದವು.

ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ (SIT) ರಚಿಸಿತ್ತು. ಮತ್ತೊಂದೆಡೆ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ತನಿಖಾ ಸಂಸ್ಥೆಗಳಾದ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ (ED) ಕೂಡ ಪ್ರಕರಣದ ತನಿಖೆ ನಡೆಸುತ್ತಿವೆ.

ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿದ ಬಿ. ನಾಗೇಂದ್ರ, ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಉದ್ದೇಶದಿಂದ ನೈತಿಕ ಹೊಣೆ ಹೊತ್ತು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ತಮ್ಮ ವಿರುದ್ಧ ಕೇಳಿಬಂದಿರುವ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಹೇಳಿದ ಅವರು, ತನಿಖೆಯಿಂದ ಸತ್ಯ ಹೊರಬರಲಿದೆ. ತಾವು ನಿರಪರಾಧಿಯಾಗಿ ಹೊರಬರುವ ವಿಶ್ವಾಸವಿದೆ ಎಂದು ತಿಳಿಸಿದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು