ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನೀತಿ ಸಮಿತಿ ಶಿಫಾರಸು : ಲೋಕಸಭೆಯಿಂದ ಸಂಸದೆ ಮೊಹುವಾ ಮೋಯಿತ್ರಾ ಉಚ್ಚಾಟನೆ

P

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ನೀತಿ ಸಮಿತಿ ಶಿಫಾರಸು : ಲೋಕಸಭೆಯಿಂದ ಸಂಸದೆ ಮೊಹುವಾ ಮೋಯಿತ್ರಾ ಉಚ್ಚಾಟನೆ

ಕ್ಯಾಶ್ ಫಾರ್ ಕ್ವೆರಿ (ಹಣಕ್ಕಾಗಿ ಪ್ರಶ್ನೆ) ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಸಮಿತಿಯ ಶಿಫಾರಸಿನ ಮೇರೆಗೆ ತೃಣಮೂಲ ಸಂಸದೆ ಮಹುವಾ ಮೊಯಿತ್ರಾ ಅವರನ್ನ ಸಂಸತ್ತಿನಿಂದ ಉಚ್ಚಾಟಿಸಲಾಗಿದೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರನ್ನ ಉಚ್ಚಾಟಿಸಲು ಶಿಫಾರಸು ಮಾಡಿದ ವರದಿಯನ್ನು ಲೋಕಸಭಾ ನೈತಿಕ ಸಮಿತಿ ಶುಕ್ರವಾರ ಮಂಡಿಸಿದೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರ ಆರೋಪಗಳ ಬಗ್ಗೆ ತನಿಖೆ ನಡೆಸಿದ ನೈತಿಕ ಸಮಿತಿಯು ನವೆಂಬರ್ 9 ರಂದು ತನ್ನ 500 ಪುಟಗಳ ವರದಿಯನ್ನು ಅಂಗೀಕರಿಸಿದ್ದು, ಮೊಯಿತ್ರಾ ಅವರ “ಅತ್ಯಂತ ಆಕ್ಷೇಪಾರ್ಹ, ಅನೈತಿಕ, ಘೋರ ಮತ್ತು ಕ್ರಿಮಿನಲ್ ನಡವಳಿಕೆ” ಯನ್ನು ಗಮನದಲ್ಲಿಟ್ಟುಕೊಂಡು ಅವರನ್ನು 17 ನೇ ಲೋಕಸಭೆಯಿಂದ ಹೊರಹಾಕುವಂತೆ ಶಿಫಾರಸು ಮಾಡಿದೆ.

ಜೊತೆಗೆ “ಅಶಿಸ್ತಿನ ನಡವಳಿಕೆ ಮತ್ತು ವದಂತಿಗಳನ್ನು ಹರಡುವುದಕ್ಕಾಗಿ” ಸಹ ಸಂಸದ ಡ್ಯಾನಿಶ್ ಅಲಿ ಅವರಿಗೆ ‘ಎಚ್ಚರಿಕೆ’ ನೀಡಬೇಕು ಎಂದು ನೀತಿ ಸಮಿತಿಯು ಕೇಂದ್ರ ಸರ್ಕಾರಕ್ಕೆ ಕರೆ ನೀಡಿದೆ. 

ಬಿಜೆಪಿ ಶಾಸಕ ವಿನೋದ್ ಕುಮಾರ್ ನೇತೃತ್ವದ ತಂಡವು ತನ್ನ ವರದಿಯಲ್ಲಿ “ಕಠಿಣ ಶಿಕ್ಷೆ” ಮತ್ತು ಸರ್ಕಾರದ ಕಡೆಯಿಂದ ತನಿಖೆಗೆ ಕರೆ ನೀಡಿದೆ. ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಅವರು ಉದ್ಯಮಿ ಕಡೆಯಿಂದ ನಗದು ಮತ್ತು ಇತರ ಉಡುಗೊರೆಗಳನ್ನು ತೆಗೆದುಕೊಂಡಿದ್ದಾರೆ ಎಂಬ ಆರೋಪವನ್ನು ಮೊಯಿತ್ರಾ ಎದುರಿಸುತ್ತಿದ್ದಾರೆ.

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version