ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

‘ಮೂಲ ನಿವಾಸಿ ಮುಕ್ತ ಭಾರತ’ ಕೃತಿ ಸಮಾಜದಲ್ಲಿ ಚಿಂತನೆಗೆ ಪ್ರೇರಣೆ – ಮಲ್ನಾಡ್‌ ಮೆಹಬೂಬ್

‘ಮೂಲ ನಿವಾಸಿ ಮುಕ್ತ ಭಾರತ’ ಕೃತಿ ಸಮಾಜದಲ್ಲಿ ಚಿಂತನೆಗೆ ಪ್ರೇರಣೆ – ಮಲ್ನಾಡ್‌ ಮೆಹಬೂಬ್

ಹಾಸನ: ಪತ್ರಕರ್ತ ಹಾಗೂ ಲೇಖಕ ಮಲ್ನಾಡ್ ಮೆಹಬೂಬ್ ರಚಿಸಿರುವ ‘ಮೂಲ ನಿವಾಸಿ ಮುಕ್ತ ಭಾರತ’ ಕೃತಿಯ ಬಿಡುಗಡೆ ಸಮಾರಂಭ ಫೆ. 15ರಂದು ಬೆಳಗ್ಗೆ 11 ಗಂಟೆಗೆ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆಯಲಿದೆ ಎಂದು ಪತ್ರಕರ್ತ ನಾಗರಾಜ್ ಹೆತ್ತೂರು ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃತಿಯನ್ನು ಹಾಸನದ ಕಲಾ ಮತ್ತು ವಿಜ್ಞಾನ ಸ್ನಾತಕೋತ್ತರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಇರ್ಷಾದ್ ಬಿಡುಗಡೆ ಮಾಡಲಿದ್ದಾರೆ. ಅಲೂರಿನ ಕನ್ನಡ ಉಪನ್ಯಾಸಕರಾದ ರೋಹಿತ್ ಅಗಸರವಳ್ಳಿ ಕೃತಿಯ ಕುರಿತು ಮಾತನಾಡಲಿದ್ದಾರೆ ಎಂದು ಹೇಳಿದರು.‌ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತೆ ನಜ್ಞಾ ನಜೀರ್ ಚಿಕ್ಕನೆರಳೆ (ಬೆಂಗಳೂರು), ಮಂಡ್ಯದ ಪ್ರಕಾಶಕರಾದ ಮಹಮ್ಮದ್ ಅಜರುದ್ದೀನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಿಐಟಿಯು ಹಾಸನ ಅಧ್ಯಕ್ಷ ಧರ್ಮೇಶ್ ವಹಿಸಲಿದ್ದಾರೆ. ಕೃತಿಯ ವಿಷಯಾವಳಿಯನ್ನು ಕೇಂದ್ರವಾಗಿಟ್ಟುಕೊಂಡು ವಿಶೇಷ ಸಂವಾದ ಕಾರ್ಯಕ್ರಮವೂ ನಡೆಯಲಿದೆ ಎಂದು ತಿಳಿಸಿದರು.

‘ಮೂಲ ನಿವಾಸಿ ಮುಕ್ತ ಭಾರತ’ ಕೃತಿ ಸಮಾಜದಲ್ಲಿ ಚಿಂತನೆಗೆ ಪ್ರೇರಣೆ ನೀಡುವ ಉದ್ದೇಶ ಹೊಂದಿದ್ದು, ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಅಪವಾದ ರಾಜಕಾರಣ, ವಿಕೃತ ಇತಿಹಾಸ ನಿರ್ಮಾಣ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಅರ್ಧಸತ್ಯಗಳ ಪರಿಣಾಮಗಳನ್ನು ವಿಶ್ಲೇಷಿಸುತ್ತದೆ ಎಂದು ವಿವರಿಸಿದರು. ಲೇಖಕರಾದ ಮಲ್ನಾಡ್ ಮೆಹಬೂಬ್ ಅವರಿಗೆ ಇದು ಆರನೇ ಕೃತಿಯಾಗಿದೆ. ಜನಪರ ಸಂಘಟನೆಗಳ ಒಕ್ಕೂಟ, ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟ, ವಿವಿಧ ದಲಿತ, ಮಹಿಳಾ, ಕಾರ್ಮಿಕ ಹಾಗೂ ವಿದ್ಯಾರ್ಥಿ ಸಂಘಟನೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಚಾರಗಳನ್ನು ಕೇಳಲು, ಚರ್ಚಿಸಲು ಹಾಗೂ ಅರಿತುಕೊಳ್ಳಲು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಲೇಖಕ ಮಲ್ನಾಡ್ ಮೆಹಬೂಬ್ ಹಾಗೂ ಪತ್ರಕರ್ತ ತೌಫಿಕ್ ಅಹಮದ್ ಉಪಸ್ಥಿತರಿದ್ದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು