ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಐಸಿಸ್ ನಂಟಿನ ಆರೋಪ ಹೊತ್ತ ಮಾಜ್ ಮುನೀರ್ ತಂದೆ ಮುನೀರ್ ಅಹಮದ್ ನಿಧನ

PPeepal Media

Peepal Media • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಐಸಿಸ್ ನಂಟಿನ ಆರೋಪ ಹೊತ್ತ ಮಾಜ್ ಮುನೀರ್ ತಂದೆ ಮುನೀರ್ ಅಹಮದ್ ನಿಧನ

ಉಗ್ರ ಸಂಘಟನೆಯ ಜೊತೆಗೆ ಸಂಪರ್ಕ ಹೊಂದಿದ್ದ ಆರೋಪದ ಅಡಿಯಲ್ಲಿ ಬಂಧಿತನಾಗಿರುವ ಯುವಕ ಮಾಜ್ ಮುನೀರ್ ತಂದೆ ಮುನೀರ್ ಅಹಮದ್ ಇಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ತನ್ನ ಮಗನ ಬಂಧನದ ನಂತರ ತೀವ್ರ ಖಿನ್ನತೆಗೆ ಒಳಗಾಗಿದ್ದ ಮುನೀರ್ ಅಹಮದ್ ರವರು ಇಂದು ಸಂಜೆ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

ತೀರ್ಥಹಳ್ಳಿ ಮೂಲದ ಮುನೀರ್ ಅಹಮದ್ ರವರು ಕಳೆದ 2 ವರ್ಷಗಳ ಹಿಂದೆ ಮಕ್ಕಳ ವಿಧ್ಯಾಭ್ಯಾಸ ಮತ್ತು ಉದ್ಯೋಗದ ಕಾರಣಕ್ಕೆ ಮಂಗಳೂರಿನಲ್ಲಿ ನೆಲೆಸಿದ್ದರು. ತೀರ್ಥಹಳ್ಳಿಯ ಮಾರ್ಕೆಟ್ ವ್ಯಾಪ್ತಿಯಲ್ಲಿ ಬರುವ ಸೊಪ್ಪುಗುಡ್ಡೆಯಲ್ಲಿ ಸ್ವಂತ ಮನೆ ಇದ್ದರೂ ಅದನ್ನು ಬಾಡಿಗೆಗೆ ಕೊಟ್ಟು ಮಂಗಳೂರಿನಲ್ಲಿ ನೆಲೆಸಿದ್ದರು.

ಮೃತ ಮುನೀರ್ ಅಹಮದ್ ಅವರು ಮಾಜಿ ಪುರಸಭಾ ಸದಸ್ಯ ಕಾಂಗ್ರೆಸ್ ಮುಖಂಡರಾದ ಸಬ್ಜಾನ್ ಸಾಹೇಬರ ಪುತ್ರನಾಗಿದ್ದರು. ಈ ಹಿನ್ನೆಲೆಯಲ್ಲಿ ಮೃತ ಮುನೀರ್ ಅಹಮದ್ ಮೃತದೇಹವನ್ನು ತೀರ್ಥಹಳ್ಳಿಗೆ ತರಲಾಗುತ್ತಿದೆ. ಮತ್ತು ನಾಳೆ 12 ಗಂಟೆಗೆ ಅಂತ್ಯಸಂಸ್ಕಾರ ನಡೆಯುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಎರಡು ವರ್ಷಗಳ ಹಿಂದೆ ಉಗ್ರ ಸಂಘಟನೆಗೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಗೋಡೆ ಬರಹ ಬರೆದ ಆರೋಪದಲ್ಲಿ ಮಗ ಮಾಜ್ ಮುನೀರ್ ನನ್ನು ಬಂಧಿಸಿದಾಗಲೂ ತೀವ್ರ ಖಿನ್ನತೆಗೆ ಒಳಗಾಗಿದ್ದ ತಂದೆ ಮುನೀರ್ ಅಹಮದ್ ರವರು ಅಂದೇ ಆಸ್ಪತ್ರೆಗೆ ದಾಖಲಾಗಿ ಹೃದಯಕ್ಕೆ ಸ್ಟಂಟ್ ಗಳನ್ನು ಅಳವಡಿಸಲಾಗಿತ್ತು. ಸಧ್ಯ ಈಗಲೂ ಉಗ್ರ ಸಂಘಟನೆ ಜೊತೆಗೆ ನಂಟು ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಮಗನನ್ನು ಬಂಧಿಸಿದ ನಂತರ ಮತ್ತೆ ಹೃದಯಾಘಾತವಾಗಿ ಸಂಜೆ 5 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.

ವಿಷಯಗಳು: #india #kannada #news #peepal #peepalmedia
PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು