ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮತ್ತೆ ಮುರುಘಾ ಮಠದ ಶಿವಮೂರ್ತಿ ಬಂಧನ

CCharan Aivarnad

Charan Aivarnad ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಮತ್ತೆ ಮುರುಘಾ ಮಠದ ಶಿವಮೂರ್ತಿ ಬಂಧನ
ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಮುರುಘಾ ಶ್ರೀ ಮತ್ತೆ ಬಂಧನ

ಬೆಂಗಳೂರು: ಎರಡನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ಮತ್ತೆ ಬಂಧನವಾಗಿದೆ. ದಾವಣಗೆರೆ ವಿರಕ್ತ ಮಠದಲ್ಲಿದಲ್ಲಿದ್ದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಇಂದು ಚಿತ್ರದುರ್ಗ ಗ್ರಾಮಾಂತರ ಠಾ಼ಣೆಯ ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ಹಗರಣದಲ್ಲಿ ಬಂಧನಕ್ಕೊಳಗಾಗಿ ನಾಲ್ಕು ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಸಿಪಿಐ ಮುದ್ದುರಾಜ್‌ ನೇತೃತ್ವದ ತಂಡ ಮತ್ತೆ ಬಂಧಿಸಿ ಚಿತ್ರದುರ್ಗಕ್ಕೆ ಕರೆದೊಯ್ದಿದ್ದಾರೆ. ಇಂದೇ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆಯಿದೆ.

ನವೆಂಬರ್‌ 16ರಂದು ಪೋಕ್ಸೊ ಮೊದಲನೇ ಪ್ರಕರಣದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಹೈಕೋರ್ಟ್ ಶರತ್ತು ಬದ್ಧ ಜಾಮೀನು ನೀಡಿತ್ತು. ಜಾಮೀನು ಪಡೆದು ಬಿಡುಗಡೆಯಾಗಿದ್ದ ಇವರನ್ನು ಇನ್ನೊಂದು ಪೋಕ್ಸೊ ಪ್ರಕರಣದಲ್ಲಿ ಜಾಮೀನು ಪಡೆಯೋ ಮುನ್ನವೇ ಬಿಡುಗಡೆಗೊಂಡ ಕಾರಣ 4 ದಿನಗಳಲ್ಲೇ ಮತ್ತೆ ಬಂಧಿಸಲಾಗಿದೆ.

ಬಿಡುಗಡೆಯಾದ ಮೇಲೆ ಎರಡನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿನೆ ನೀಡಿದ್ದರೂ, ಆದೇಶವನ್ನು ಪಾಲಿಸದೇ ವೀಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರಾಗಿದ್ದರು. ಇದನ್ನು ಸರ್ಕಾರಿ ವಕೀಲರು ಪ್ರಶ್ನೆ ಮಾಡಿ, ಆದೇಶ ಉಲ್ಲಂಘನೆ ಮಾಡಿದ ಇವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಮನವಿ ಮಾಡಿದ್ದರು.

ಮೊದಲ ಪ್ರಕರಣದಲ್ಲಿ ಹೈಕೋರ್ಟ್ ಏಳು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿ, ಬಿಡುಗಡೆ ಮಾಡಿತ್ತು. ವಿಚಾರಣೆಗೆ ಹಾಜರಾಗುವುದು. ಸಾಕ್ಷ್ಯ ನಾಶ ಮಾಡದಿರುವುದು. ಜಾಮೀನು ಪಡೆಯುವ ಮೊದಲು ಇಬ್ಬರ ಶ್ಯೂರಿಟಿ. ವಿದೇಶಕ್ಕೆ ಹೋಗದಂತೆ ಪಾಸ್ ಪೋರ್ಟ್ ಸರೆಂಡರ್‌ ಮಾಡುವುದು. 2 ಲಕ್ಷ ರೂಪಾಯಿಯ ಜಾಮೀನು ಬಾಂಡ್ ನೀಡುವುದು – ಈ ಷರತ್ತುಗಳನ್ನು ವಿಧಿಸಲಾಗಿತ್ತು.

CCharan Aivarnad

Charan Aivarnad

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದವರು. ಜಾನಪದ, ಇತಿಹಾಸ, ರಾಜಕೀಯ, ಸಾಂಸ್ಕೃತಿಕ ಅಧ್ಯಯನ, ಸಬಾಲ್ಟರ್ನ್‌ ಸ್ಟಡೀಸ್, ಭಾಷೆ, ಸಾಂಸ್ಕೃತಿಕ ರಾಜಕಾರಣ ಇವರ‌ ಆಸಕ್ತಿಯ ಕ್ಷೇತ್ರಗಳು.

ಸಂಬಂಧಿತ ಸುದ್ದಿಗಳು