ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ದೇಶವ್ಯಾಪಿ ಹೋರಾಟ – ಕಾಕ್ರೋಚ್ ಜನತಾ ಪಾರ್ಟಿ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ತನ್ನ ಬೇಡಿಕೆಗಳ ಕುರಿತು ಸರ್ಕಾರ ಭರವಸೆ ನೀಡಿದ ನಡುವೆಯೂ ಕಾಕ್ರೋಚ್ ಜನತಾ ಪಾರ್ಟಿ (CJP) ಜುಲೈ 24ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲು ಕರೆ ನೀಡಿದೆ.

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದ ವಿವಿಧ ಭಾಗಗಳಲ್ಲಿ ಪೊಲೀಸರ ಕ್ರಮಗಳಿಂದ ತೊಂದರೆಗೊಳಗಾದವರೊಂದಿಗೆ ಒಗ್ಗಟ್ಟು ಪ್ರದರ್ಶಿಸುವ ಉದ್ದೇಶದಿಂದ ಪ್ರತಿಭಟನೆ ಆಯೋಜಿಸಲಾಗಿದೆ ಎಂದು CJP ಹೇಳಿದೆ. ವಿದ್ಯಾರ್ಥಿ ಸಂಘಟನೆಗಳು ಮತ್ತು ವಿವಿಧ ಗುಂಪುಗಳು ಪ್ರತಿಭಟನೆಗೆ ಸಂಬಂಧಿಸಿದ ಅನುಮತಿ ಹಾಗೂ ವ್ಯವಸ್ಥೆಗಳ ಕುರಿತು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದೆ.

ಪ್ರತಿಭಟನೆಯ ವೇಳೆ ಶಾಂತಿ ಮತ್ತು ಅಹಿಂಸೆಯನ್ನು ಕಾಪಾಡುವಂತೆ ಸಂಘಟನೆ ಮನವಿ ಮಾಡಿದೆ. ಜೈ ಹಿಂದ್, ಭಾರತ ಮಾತಾ ಕೀ ಜೈ, ಇಂಕ್ವಿಲಾಬ್ ಜಿಂದಾಬಾದ್, ಜೈ ಭೀಮ್‌ನಂತಹ ಸಕಾರಾತ್ಮಕ ಘೋಷಣೆಗಳನ್ನು ಮಾತ್ರ ಕೂಗಬೇಕು ಹಾಗೂ ಪ್ರತಿಭಟನೆಯ ಎಲ್ಲ ಚಟುವಟಿಕೆಗಳನ್ನು ದಾಖಲಿಸಿಕೊಳ್ಳಬೇಕು ಎಂದು ತಿಳಿಸಿದೆ.

ಪ್ರತಿಭಟನಾಕಾರರು:

  • ಅನುಮತಿ ನೀಡಿರುವ ಸ್ಥಳಗಳಲ್ಲಿ ಮಾತ್ರ ಇರಬೇಕು.
  • ನಿಗದಿತ ಮಾರ್ಗಗಳಲ್ಲೇ ಸಾಗಬೇಕು.
  • ಪ್ರಚೋದನಕಾರಿ, ನಿಂದನಾತ್ಮಕ ಅಥವಾ ದ್ವೇಷ ಹರಡುವ ಹೇಳಿಕೆಗಳನ್ನು ನೀಡಬಾರದು.
  • ಯಾವುದೇ ಆಯುಧಗಳು, ಕೋಲು ಅಥವಾ ಲಾಠಿಗಳನ್ನು ತರಬಾರದು.
  • ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು.
  • ಸುಳ್ಳು ಸುದ್ದಿಗಳನ್ನು ಹರಡಬಾರದು.

ತುರ್ತು ಸಂದರ್ಭಗಳಿಗಾಗಿ ವಕೀಲರು ಅಥವಾ ಆಪ್ತರ ಸಂಪರ್ಕ ಸಂಖ್ಯೆಯನ್ನು ಕೈಯಲ್ಲಿ ಹಾಗೂ ಪ್ರತ್ಯೇಕ ಕಾರ್ಡ್‌ನಲ್ಲಿ ಬರೆದುಕೊಂಡಿರಬೇಕು ಎಂದು ಸಂಘಟನೆ ಸಲಹೆ ನೀಡಿದೆ. ಪ್ರತಿಭಟನೆ ವೇಳೆ ಯಾವುದೇ ಕಿಡಿಗೇಡಿತನ ಕಂಡುಬಂದರೆ ಅದನ್ನು ದಾಖಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಕು ಹಾಗೂ ಅಗತ್ಯವಿದ್ದಲ್ಲಿ ಸುತ್ತಮುತ್ತಲಿನವರ ಸಹಾಯ ಪಡೆಯಬೇಕು ಎಂದು ತಿಳಿಸಿದೆ.ಯಾರಾದರೂ ಪ್ರಚೋದನೆ ನೀಡಿದರೆ ಪ್ರತಿಕ್ರಿಯಿಸದೆ ಸ್ಥಳದಿಂದ ದೂರ ಸರಿದು, ಪ್ರತಿಭಟನೆಯ ಮಾರ್ಷಲ್‌ಗಳಿಗೆ ಮಾಹಿತಿ ನೀಡುವಂತೆ CJP ಮನವಿ ಮಾಡಿದೆ.

ವಿಷಯಗಳು: #india #karnataka #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು