ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಛತ್ತೀಸಘಡದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು; ಓರ್ವ ನಕ್ಸಲ್ ನಾಯಕಿ ಹ*ತ್ಯೆ

PPeepal Media Desk
ಛತ್ತೀಸಘಡದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು; ಓರ್ವ ನಕ್ಸಲ್ ನಾಯಕಿ ಹ*ತ್ಯೆ

ಛತ್ತೀಸಘಡದಲ್ಲಿ ಮತ್ತೆ ಮಾವೋವಾದಿ ನಕ್ಸಲರ ವಿರುದ್ಧ ಗುಂಡಿನ ಸದ್ದು ಕೇಳಿಸಿದೆ. ಶುಕ್ರವಾರ ಬೆಳಗ್ಗೆ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ನಾಯಕಿಯೊಬ್ಬರನ್ನು ಪೊಲೀಸರು ಗುಂಡಿಕ್ಕಿ ಸಾಯಿಸಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿದ ಪೊಲೀಸರು ಛತ್ತೀಸಗಢದ ಕಂಕೇರ್ ಜಿಲ್ಲೆಯಲ್ಲಿ ಎನ್ಕೌಂಟರ್ ನಡೆದಿದೆ. ಕಂಕೇರ್ ನ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದ ಬಳಿಕ ಮಹಿಳಾ ನಕ್ಸಲ್ ಒಬ್ಬರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸಘಡ ರಾಜ್ಯದಲ್ಲಿ ಕೇವಲ ಜನವರಿಯಿಂದ ಜೂನ್ ವರೆಗೆ ಬಸ್ತಾರ್ ಪ್ರದೇಶದಲ್ಲಿ 213 ಮಾವೋವಾದಿಗಳನ್ನು ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದೊಂದು ವರ್ಷದಲ್ಲಿ ರಾಜ್ಯದಲ್ಲಿ ನಕ್ಸಲ್ ನಿಗ್ರಹ ದಳ ಪರಿಣಾಮಕಾರಿಯಾಗಿ ನಕ್ಸಲರನ್ನು ಮಟ್ಟ ಹಾಕಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ) ಮತ್ತು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಛೋಟೆಬೆಥಿಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಅರಣ್ಯ ಬೆಟ್ಟದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಟ್ರಿ ನದಿಯ ಇನ್ನೊಂದು ಬದಿಯಲ್ಲಿ ನಿಷೇಧಿತ ಮಾವೋವಾದಿ ಸಂಘಟನೆಗಳ ಸದಸ್ಯರು ಇರುವ ಬಗ್ಗೆ ಮಾಹಿತಿಯ ಆಧಾರದ ಮೇಲೆ ಅಮಟೋಲಾ ಮತ್ತು ಕಲ್ಪರ್ ಗ್ರಾಮಗಳ ನಡುವೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡಿನ ದಾಳಿ ನಿಂತ ನಂತರ, ಎನ್ಕೌಂಟರ್ ನಡೆದ ಸ್ಥಳದಿಂದ ನಕ್ಸಲೈಟ್ ಮಹಿಳೆಯ ಶವ ಮತ್ತು ಶಸ್ತ್ರಾಸ್ತ್ರವನ್ನು ವಶಪಡಿಸಿಕೊಳ್ಳಲಾಗಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು