ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನೇಪಾಳ ಮತ್ತೆ ಜಲಪ್ರಳಯದ ಭೀತಿ, ಕಾರ್ಯಾಚರಣೆ ಸ್ಥಗಿತ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ – ಸೈನಿಕರಿಗೆ ಸೂಚನೆ

ನೇಪಾಳ ಮತ್ತೆ ಜಲಪ್ರಳಯದ ಭೀತಿ, ಕಾರ್ಯಾಚರಣೆ ಸ್ಥಗಿತ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ – ಸೈನಿಕರಿಗೆ ಸೂಚನೆ

ಕಠ್ಮಂಡು: ನೇಪಾಳ-ಚೀನಾ ಗಡಿಯಲ್ಲಿ ಸಂಭವಿಸಿದ ಹಿಮ ಕುಸಿತದ ಬೆನ್ನಲ್ಲೇ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ನೇಪಾಳ ಸರ್ಕಾರವು ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಸ್ಥಗಿತಗೊಳಿಸಲು ಆದೇಶಿಸಿದೆ. ಟಿಬೆಟ್‌ನಲ್ಲಿ ನೀರಿನ ತಡೆಗೋಡೆ ಒಡೆದುಹೋಗಿರುವ ಮಾಹಿತಿ ಲಭ್ಯವಾಗಿದ್ದು, ಮತ್ತಷ್ಟು ಭೀಕರ ಪ್ರವಾಹದ ಅಲೆಗಳು ಅಪ್ಪಳಿಸುವ ಅಪಾಯ ಎದುರಾಗಿದೆ. ಹೀಗಾಗಿ ಎಲ್ಲಾ ರಕ್ಷಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಗಳನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಹಿಂತಿರುಗುವಂತೆ ತುರ್ತು ಸೂಚನೆ ನೀಡಲಾಗಿದೆ. ಬುಧವಾರ ನೇಪಾಳ ಮತ್ತು ಟಿಬೆಟ್‌ನಲ್ಲಿ ಮನೆಗಳನ್ನು ಕೊಚ್ಚಿಕೊಂಡು ಹೋಗಿ, ಸೇತುವೆಗಳನ್ನು ಧ್ವಂಸಗೊಳಿಸಿ, ವಾಹನಗಳನ್ನು ನೀರಿನಲ್ಲಿ ಎಳೆದುಕೊಂಡು ಹೋದ ಸುನಾಮಿಯಂತಹ ನೀರು ಮತ್ತು ಕೆಸರಿನ ಪ್ರವಾಹಕ್ಕೆ ಈವರೆಗೆ 472 ಮೃತದೇಹಗಳನ್ನು ರಕ್ಷಣಾ ತಂಡಗಳು ಹೊರತೆಗೆದಿವೆ.

ಹಿಮಾಲಯದಲ್ಲಿ ಚಾರಣಕ್ಕೆ ತೆರಳಿದ್ದವರು ಹಾಗೂ ಟಿಬೆಟ್‌ನ ಪವಿತ್ರ ಕೈಲಾಸ ಪರ್ವತಕ್ಕೆ ತೆರಳಿದ್ದ ಹಿಂದೂ ಯಾತ್ರಿಕರು ಸೇರಿದಂತೆ 1,400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (USGS) ಪ್ರಕಾರ, ಹಿಮನದಿ ಕುಸಿತದಿಂದ ಭಾರಿ ಪ್ರಮಾಣದ ಹಿಮ ಮತ್ತು ಅವಶೇಷಗಳು ಏಕಾಏಕಿ ಹರಿದುಬಂದಿದ್ದು, ಇದರಿಂದಾಗಿ ಈ ದುರಂತ ಸಂಭವಿಸಿದೆ. 2015ರ ಭೂಕಂಪದ ಬಳಿಕ ನೇಪಾಳ ಕಂಡ ಅತ್ಯಂತ ಭೀಕರ ದುರಂತ ಇದಾಗಿದೆ ಎಂದು ಹೇಳಲಾಗಿದೆ. ಹಿಮ ಮತ್ತು ಕೆಸರಿನ ಪ್ರವಾಹದಿಂದ ಹಲವೆಡೆ ಭಾರಿ ಪ್ರಮಾಣದ ನೀರು ಸಂಗ್ರಹವಾಗಿತ್ತು. ಈ ಪೈಕಿ ಟಿಬೆಟ್‌ನಲ್ಲಿದ್ದ ಒಂದು ನೀರಿನ ಸಂಗ್ರಹ ಶುಕ್ರವಾರ ಒಡೆದುಹೋಗಿದ್ದು, ಬದುಕುಳಿದವರಿಗಾಗಿ ಶೋಧ ನಡೆಸುತ್ತಿದ್ದ ರಕ್ಷಣಾ ಸಿಬ್ಬಂದಿಗೂ ಹೊಸ ಅಪಾಯ ಎದುರಾಗಿದೆ.

ತಕ್ಷಣ ಸುರಕ್ಷಿತ ಸ್ಥಳಕ್ಕೆ ತೆರಳಿ

ಟಿಬೆಟ್‌ ಭಾಗದಲ್ಲಿ ಮತ್ತೊಂದು ನೀರಿನ ತಡೆಗೋಡೆ ಒಡೆದಿರುವ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಎಲ್ಲಾ ರಕ್ಷಣಾ ಸಿಬ್ಬಂದಿ ‘ತಕ್ಷಣ ಸುರಕ್ಷಿತ ಸ್ಥಳಕ್ಕೆ ತೆರಳಬೇಕು’ ಎಂದು ನೇಪಾಳ ಪೊಲೀಸರು ಸೂಚಿಸಿದ್ದಾರೆ. ಇದೇ ವೇಳೆ, ಟಿಬೆಟ್‌ನ ಗೈರಾಂಗ್‌ನಲ್ಲಿ ಪ್ರವಾಹದ ಅಪಾಯ ಹೆಚ್ಚಿದ ಹಿನ್ನೆಲೆಯಲ್ಲಿ ಚೀನಾ ಶುಕ್ರವಾರ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ವಿಷಯಗಳು: #india #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು