ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

P

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್‌ 21 – ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು.


ಅವರು ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀತಿ ರೂಪಿಸಲು ಸಾಧ್ಯವಿಲ್ಲ. ಏಕೆಂದರೆ ಅದು ರಾಜ್ಯದ ವಿಷಯ. ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಶಿಕ್ಷಣ ನೀತಿಯನ್ನು ಕೇಂದ್ರ ಹೇರಲಾಗದು. ಹೇರಲು ಹೊರಟಿರುವುದು ಒಂದು ಹುನ್ನಾರ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಬಹು ಸಂಸ್ಕೃತಿ, ಬಹುತ್ವ ಇರುವ ದೇಶದಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಮಾಡಲಾಗದು. ಆದ್ದರಿಂದ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.


ಬಿಜೆಪಿ ಆಳ್ವಿಕೆಯ ಇತರ ರಾಜ್ಯಗಳೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಹಿಂದೇಟು ಹಾಕುತ್ತಿವೆ. ಕೇರಳ, ತಮಿಳು ನಾಡು ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವುದಿಲ್ಲ ಎಂದು ಕೇಂದ್ರಕ್ಕೆ ಸ್ಪಷ್ಟಪಡಿಸಿವೆ ಎಂದು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಕೇಂದ್ರ ಪುರಸ್ಕೃತ ಯೋಜನೆಗಳು ಎಲ್ಲ ರಾಜ್ಯಗಳಿಗೂ ಅನ್ವಯಿಸುವುದರಿಂದ ರಾಜ್ಯಕ್ಕೆ ಅನ್ಯಾಯವಾಗಲಾರದು ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.


ಇದರಿಂದ ಬಡವರು, ಪರಿಶಿಷ್ಟ ಜಾತಿ, ಪಂಗಡದವರು, ಹಿಂದುಳಿದವರು, ಗ್ರಾಮೀಣ ಪ್ರದೇಶದವರಿಗೆ ತೊಂದರೆಯಾಗುತ್ತದೆ. ಉನ್ನತ ಶಿಕ್ಷಣದಲ್ಲಿ ಪ್ರತಿ ವರ್ಷ ಪ್ರಮಾಣ ಪತ್ರ ನೀಡಿದರೂ, ಒಂದು ವರ್ಷ, ಎರಡು ವರ್ಷ ಓದಿದವರಿಗೆ ಎಷ್ಟು ಉದ್ಯೋಗಾವಕಾಶ ದೊರೆಯಲು ಸಾಧ್ಯ? ಉದ್ಯೋಗವಕಾಶ ದೊರೆತು ಹೋದ ಬಡವರ ಮಕ್ಕಳು ಮತ್ತೆ ಓದಲು ಎಷ್ಟು ಅವಕಾಶ ದೊರೆಯುವುದು? ಎಂಬ ಅನುಮಾನ ವ್ಯಕ್ತಪಡಿಸಿದರು.


ಈ ಶಿಕ್ಷಣ ನೀತಿ ಜಾರಿಗೊಳಿಸಲು ಅಗತ್ಯ ಮೂಲಸೌಲಭ್ಯಗಳು ಶಿಕ್ಷಣ ಸಂಸ್ಥೆಗಳಲ್ಲಿ ಇಲ್ಲ. ಇದರಿಂದ ಅನಗತ್ಯ ಗೊಂದಲಗಳು ಸೃಷ್ಟಿಯಾಗಿದೆ ಎಂದು ಮುಖ್ಯಮಂತ್ರಿಯವರು ಅಭಿಪ್ರಾಯಪಟ್ಟರು.


ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಷಯಗಳು: #NEP #peepal #peepalmedia #politics
P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version