ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಹಾಸನ ಜಿಲ್ಲೆಗೆ ನೂತನ ಡಿಸಿ – ಕೆ.ಎಸ್. ಲತಕುಮಾರಿ

ಹಾಸನ ಜಿಲ್ಲೆಗೆ ನೂತನ ಡಿಸಿ – ಕೆ.ಎಸ್. ಲತಕುಮಾರಿ

ಹಾಸನ : ಜಿಲ್ಲೆಗೆ ಆಗಮಿಸಿದ ನೂತನ ಜಿಲ್ಲಾಧಿಕಾರಿ ಕೆ.ಎಸ್. ಲತಕುಮಾರಿರವರು ಮೊದಲು ಆದಿ ದೇವತೆ ಹಾಸನಾಂಬೆ ದೇವಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ತಮ್ಮ ಕಛೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದರು. ಇದೆ ವೇಳೆ ನೂತನ ಡಿಸಿ ಕೆ.ಎಸ್. ಲತಾಕುಮಾರಿ ಅವರು ಮಾಧ್ಯಮದೊಂದಿಗೆ ಮಾತನಾಡಿ, ಅಮ್ಮನ ಆಶೀರ್ವಾದ ಪಡೆದು ಜಿಲ್ಲೆಯಲ್ಲಿ ಒಳ್ಳೆಯ ಕೆಲಸ ಮಾಡಲು ಮೊದಲ ಹೆಜ್ಜೆ ಇಟ್ಟಿದ್ದೇನೆ ಎಂದರು. ಡಿಸಿ ಆಗೋದು ಐಎಎಸ್ ಆದ ಎಲ್ಲರ ಕನಸು. ಅಂತಹ ಅವಕಾಶ ಹಾಸನ ಜಿಲ್ಲೆಯಲ್ಲಿ ನನಗೆ ಸಿಕ್ಕಿದೆ ಇದು ನನ್ನ ಅದೃಷ್ಟ. ಹಾಸನಾಂಬೆ ಅಶೀರ್ವಾದದಿಂದ ಸಂವಿಧಾನದ ನಿಯಮದಂತೆ ಪ್ರಾಮಾಣಿಕತೆ, ನಿಷ್ಟೆಯಿಂದ ಕೆಲಸ ಮಾಡುವೆನು. ನಾನು ಎಸಿಯಾಗಿ ಕೆಲಸ ಹಾಗೂ ಇತರೆ ಹುದ್ದೆ ನಿಬಾಯಿಸಿದ ಅನುಭವ ಇದೆ. ಹಾಗಾಗಿ ಕಂದಾಯ ಇಲಾಖೆ ನನಗೆ ಹೊಸದಲ್ಲ. ನಾನು ಜಿಲ್ಲಾಧಿಕಾರಿ ಆಗಿರುವ ಬಗ್ಗೆ ಅದರಲ್ಲೂ ಹಾಸನ ಎಂದ ಕೂಡಲೇ ಮೊದಲು ಹಾಸನಾಂಬೆ ದರ್ಶನಕ್ಕೆ ಬರೋ ಭಕ್ತರಿಗೆ ಇನ್ನಷ್ಟು ಸುಗಮ ದರ್ಶನ ವ್ಯವಸ್ಥೆ ಕಲ್ಪಿಸುವುದು ಸವಾಲಿನ ಕೆಲಸ. ಸಣ್ಣ ಜಾಗದಲ್ಲಿ ಅಷ್ಟೊಂದು ಜನ ಸಾಗರವೇ ಬರುತ್ತದೆ. ತಿರುಪತಿಯಂತಾ ಕಡೆಯಲ್ಲಿ ಲಕ್ಷ ಲಕ್ಷ ಜನರು ಬರ್ತಾರೆ. ಅದರಂತೆ ಇಲ್ಲಿಯು ತುಂಬಾ ಸುಗಮವಾಗಿ ದರ್ಶನ ವ್ಯವಸ್ಥೆ ಮಾಡಲು ಪ್ರಯತ್ನ ಮಾಡುತ್ತೇವೆ ಎಂದು ವಿಶ್ವಾಸವ್ಯಕ್ತಪಡಿಸಿದರು. ಈ ಬಾರಿ ಸರಾಗವಾಗಿ ದರ್ಶನಕ್ಕೆ ಅವಕಾಶ ಕಲ್ಪಿಸುವ ಭರವಸೆ ಇದೆ ಎಂದು ಹೇಳಿದರು.ಇದೆ ವೇಳೆ ಉಪವಿಭಾಗಧಿಕಾರಿ ಮಾರುತಿ, ತಹಸೀಲ್ದಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು