ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದರ್ಶನ್‌ಗೆ ಜಾಮೀನಿಲ್ಲ: ಸುಪ್ರೀಂ ಕೋರ್ಟ್ ತೀರ್ಪು, ಒಂದು ವರ್ಷದೊಳಗೆ ವಿಚಾರಣೆ ಪೂರ್ಣಗೊಳಿಸಲು ವಿಚಾರಣಾ ನ್ಯಾಯಾಲಯಕ್ಕೆ ಆದೇಶ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ರಾಜ್ಯ

• 1 ನಿಮಿಷದ ಓದು

ದರ್ಶನ್‌ಗೆ ಜಾಮೀನಿಲ್ಲ: ಸುಪ್ರೀಂ ಕೋರ್ಟ್ ತೀರ್ಪು, ಒಂದು ವರ್ಷದೊಳಗೆ ವಿಚಾರಣೆ ಪೂರ್ಣಗೊಳಿಸಲು ವಿಚಾರಣಾ ನ್ಯಾಯಾಲಯಕ್ಕೆ ಆದೇಶ

ಕನ್ನಡ ಚಿತ್ರರಂಗದ ಖ್ಯಾತ ನಟ, ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಿಲುಕಿರುವ ದರ್ಶನ್ ಅವರಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ್ದು, ಏಕಕಾಲದಲ್ಲಿ ಪ್ರಕರಣದ ತ್ವರಿತ ವಿಚಾರಣೆಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಈ ಐತಿಹಾಸಿಕ ಆದೇಶ ಹೊರಡಿಸಿದ್ದು, ವಿಚಾರಣಾ ನ್ಯಾಯಾಲಯ ಇಂದಿನಿಂದಲೇ ಪ್ರಕರಣದ ವಿಚಾರಣೆಯನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಂಡು ಒಂದು ವರ್ಷದೊಳಗೆ ತೀರ್ಪು ನೀಡಬೇಕೆಂದು ಆಜ್ಞಾಪಿಸಿದೆ.

ಒಂದು ವರ್ಷ ಜಾಮೀನು ಅರ್ಜಿ ಸಲ್ಲಿಕೆಗೆ ನಿರ್ಬಂಧ
ನ್ಯಾಯಾಲಯ ತನ್ನ ಆದೇಶದಲ್ಲಿ, ಮುಂದಿನ ಒಂದು ವರ್ಷ ದರ್ಶನ್ ಯಾವುದೇ ರೀತಿಯ ಜಾಮೀನು ಅರ್ಜಿ ಸಲ್ಲಿಸಬಾರದೆಂದು ಷರತ್ತು ವಿಧಿಸಿದೆ. ಆದರೆ ಒಂದು ವರ್ಷದ ಒಳಗೆ ವಿಚಾರಣೆ ಸಂಪೂರ್ಣಗೊಳ್ಳದಿದ್ದ ಪಕ್ಷದಲ್ಲಿ, ಆ ಬಳಿಕ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಬಹುದೆಂದು ಸ್ಪಷ್ಟಪಡಿಸಿದೆ. ಇದೇ ವೇಳೆ, ಜೈಲಿನಲ್ಲಿ ದರ್ಶನ್ ಅವರಿಗೆ ಇತರ ಕೈದಿಗಳಿಗೆ ಸಿಗುವ ಎಲ್ಲ ಮೂಲಭೂತ ಸೌಲಭ್ಯಗಳನ್ನೂ ಒದಗಿಸಬೇಕೆಂದು ಜೈಲು ಅಧಿಕಾರಿಗಳಿಗೆ ಸೂಚಿಸಿದೆ.

270 ಸಾಕ್ಷಿಗಳ ಪೈಕಿ ಕೇವಲ 10 ಮಂದಿ ವಿಚಾರಣೆ
ಪ್ರಕರಣದಲ್ಲಿ ಒಟ್ಟು 270 ಸಾಕ್ಷಿದಾರರಿದ್ದು, ಇದುವರೆಗೆ ಕೇವಲ 10 ಮಂದಿ ಮಾತ್ರ ವಿಚಾರಣೆಗೆ ಒಳಪಟ್ಟಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂತು. ವಿಚಾರಣೆಯಲ್ಲಿ ಆಗುತ್ತಿರುವ ವಿಳಂಬವನ್ನು ಪ್ರಮುಖ ಕಾರಣವಾಗಿ ಮುಂದಿಟ್ಟು, ಉಳಿದ ಸಾಕ್ಷಿಗಳ ವಿಚಾರಣೆ ಮುಕ್ತಾಯವಾಗುವವರೆಗೆ ತಮಗೆ ಮಧ್ಯಂತರ ಜಾಮೀನು ಮಂಜೂರು ಮಾಡಬೇಕೆಂದು ದರ್ಶನ್ ಮನವಿ ಮಾಡಿದ್ದರು. ಆದರೆ ನ್ಯಾಯಾಲಯ ಈ ವಾದವನ್ನು ತಿರಸ್ಕರಿಸಿ, ಬದಲಿಗೆ ವಿಚಾರಣೆ ಚುರುಕುಗೊಳಿಸಲು ಆದೇಶ ನೀಡಿದೆ.

ಜೈಲಿನ ಕಿರುಕುಳ ಆರೋಪ ವಿಡಿಯೋ ಸಾಕ್ಷ್ಯದಿಂದ ತಳ್ಳಿಹಾಕಿದ ಸರ್ಕಾರ
ಹಿಂದಿನ ವಿಚಾರಣೆಗಳಲ್ಲಿ ದರ್ಶನ್, ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳು ಹಾಗೂ ಸಹ ಕೈದಿಗಳಿಂದ ತಮಗೆ ಕಿರುಕುಳ ಮತ್ತು ಬೆದರಿಕೆ ಎದುರಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ಗೆ ದೂರಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಜೈಲು ಅಧಿಕಾರಿಗಳಿಂದ ವರದಿ ಕೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ವಿಶೇಷ ಸರ್ಕಾರಿ ಅಭಿಯೋಜಕರು, ದರ್ಶನ್ ಮಾಡಿದ ಎಲ್ಲ ಆರೋಪಗಳನ್ನು ವಿಡಿಯೋ ಸಾಕ್ಷ್ಯಗಳ ಸಹಿತ ನಿರಾಕರಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.

ಈ ತೀರ್ಪಿನೊಂದಿಗೆ, ದರ್ಶನ್ ಅವರ ಜಾಮೀನು ಆಸೆ ಮತ್ತಷ್ಟು ದೂರವಾಗಿದ್ದು, ಪ್ರಕರಣ ಇನ್ನು ವಿಚಾರಣಾ ನ್ಯಾಯಾಲಯದ ಮಹತ್ವದ ಹಂತಕ್ಕೆ ಕಾಲಿಡಲಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು