ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆಯಿಲ್ಲ-  ಇಂಡಿಯನ್ ಆಯಿಲ್ ಸ್ಪಷ್ಟನೆ 

ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆಯಿಲ್ಲ-  ಇಂಡಿಯನ್ ಆಯಿಲ್ ಸ್ಪಷ್ಟನೆ 

ಬೆಂಗಳೂರು : ರಾಜ್ಯದಲ್ಲಿ ಇಂಧನ ಕೊರತೆ ಉಂಟಾಗಿದೆ ಎಂಬ ವದಂತಿಗಳ ನಡುವೆಯೇ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಸ್ಪಷ್ಟನೆ ನೀಡಿದ್ದು, ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ತಿಳಿಸಿದೆ. ಕೆಲ ಪೆಟ್ರೋಲ್ ಬಂಕ್‌ಗಳಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಿರುವುದು ಜನರು ಭಯದಿಂದ ಹೆಚ್ಚಾಗಿ ಖರೀದಿ ಮಾಡುತ್ತಿರುವುದರಿಂದ ಎಂದು ಕಂಪನಿ ಹೇಳಿದೆ.

ರಾಜ್ಯದ ಎಲ್ಲಾ ಪೆಟ್ರೋಲಿಯಂ ಟರ್ಮಿನಲ್‌ಗಳು ಮತ್ತು ಸರಬರಾಜು ಕೇಂದ್ರಗಳಲ್ಲಿ ಸಮರ್ಪಕ ಪ್ರಮಾಣದ ಇಂಧನ ಸಂಗ್ರಹವಿದ್ದು, ಪೆಟ್ರೋಲ್ ಬಂಕ್‌ಗಳಿಗೆ ಸರಬರಾಜು ನಿರಂತರವಾಗಿ ನಡೆಯುತ್ತಿದೆ ಎಂದು ಸಂಸ್ಥೆ ತಿಳಿಸಿದೆ. ಕೆಲವು ಪ್ರದೇಶಗಳಲ್ಲಿ ಏಕಾಏಕಿ ಹೆಚ್ಚಾದ ಬೇಡಿಕೆಯಿಂದ ಕೆಲ ಔಟ್‌ಲೆಟ್‌ಗಳಲ್ಲಿ ತಾತ್ಕಾಲಿಕ ಕೊರತೆ ಕಂಡುಬಂದಿದೆಯಷ್ಟೇ. ಆದರೆ, ಸರಬರಾಜಿನ ಸಮಸ್ಯೆಯಲ್ಲ ಎಂದು ಸ್ಪಷ್ಟಪಡಿಸಿದೆ. ಕರ್ನಾಟಕದ ತೈಲೋದ್ಯಮದ ರಾಜ್ಯ ಮಟ್ಟದ ಸಂಯೋಜಕರಾದ ಸಿದ್ಧಾರ್ಥ್ ಅಗರ್ವಾಲ್ ಅವರು ಮಾತನಾಡಿ, ಐಒಸಿ, ಬಿಪಿಸಿ ಮತ್ತು ಎಚ್‌ಪಿಸಿ ಸೇರಿದಂತೆ ಎಲ್ಲಾ ಸಾರ್ವಜನಿಕ ವಲಯದ ತೈಲ ಕಂಪನಿಗಳ ಟರ್ಮಿನಲ್‌ಗಳಲ್ಲಿ ಸಮರ್ಪಕ ಪ್ರಮಾಣದ ಇಂಧನ ಲಭ್ಯವಿದೆ ಎಂದು ಹೇಳಿದ್ದಾರೆ.

ತಾತ್ಕಾಲಿಕವಾಗಿ ಸಮಸ್ಯೆ ಎದುರಿಸುತ್ತಿರುವ ಪೆಟ್ರೋಲ್ ಬಂಕ್‌ಗಳಿಗೆ ಆದ್ಯತೆಯ ಆಧಾರದ ಮೇಲೆ ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.ಜನರು ಆತಂಕದಿಂದ ಅನಗತ್ಯವಾಗಿ ಇಂಧನ ಸಂಗ್ರಹಿಸಿಕೊಳ್ಳಬಾರದು. ಪ್ಲಾಸ್ಟಿಕ್ ಕ್ಯಾನ್‌ಗಳು ಅಥವಾ ಅನುಮೋದಿಸದ ಪಾತ್ರೆಗಳಲ್ಲಿ ಪೆಟ್ರೋಲ್ ಸಂಗ್ರಹಿಸುವುದು ಅಪಾಯಕಾರಿಯಾಗಿದ್ದು, ಸುರಕ್ಷತಾ ದೃಷ್ಟಿಯಿಂದ ಇಂತಹ ಕ್ರಮಗಳಿಂದ ದೂರವಿರಬೇಕು ಎಂದು ಕಂಪನಿ ಎಚ್ಚರಿಕೆ ನೀಡಿದೆ.ಇದೇ ವೇಳೆ, ರಿಫೈನರಿಗಳಿಂದ ಇಂಧನ ಉತ್ಪಾದನೆ ಹಾಗೂ ಸರಬರಾಜು ನಿರಂತರವಾಗಿ ನಡೆಯುತ್ತಿದ್ದು, ಯಾವುದೇ ರೀತಿಯ ವ್ಯತ್ಯಯವಿಲ್ಲ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು