ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಾಂಸಾಹಾರ ತಪ್ಪು ರೀತಿಯ ಆಹಾರ ಪದ್ಧತಿ ; ಮೋಹನ್ ಭಾಗವತ್ ವಿವಾದಾತ್ಮಕ ಹೇಳಿಕೆ

PPeepal Media

Peepal Media • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಮಾಂಸಾಹಾರ ತಪ್ಪು ರೀತಿಯ ಆಹಾರ ಪದ್ಧತಿ ; ಮೋಹನ್ ಭಾಗವತ್ ವಿವಾದಾತ್ಮಕ ಹೇಳಿಕೆ

RSS ಮುಖ್ಯಸ್ಥ ಮೋಹನ್ ಭಾಗವತ್ ಮಾಂಸಾಹಾರ ಮತ್ತು ಮಾಂಸಾಹಾರಿಗಳ ಬಗ್ಗೆ ಮತ್ತೆ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಮಾಂಸ ತಿನ್ನುವವರು ತಪ್ಪು ದಾರಿ ತುಳಿಯುತ್ತಾರೆ ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ದಾರಿ ಮಾಡಿಕೊಟ್ಟಿದ್ದಾರೆ.

RSS ನ ಸಹವರ್ತಿ ಸಂಘಟನೆಯಾದ ಭಾರತ್ ವಿಕಾಸ್ ಮಂಚ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋಹನ್ ಭಾಗವತ್, ಅವರು ವ್ಯಕ್ತಿತ್ವದ ಸರ್ವಾಂಗೀಣ ವಿಕಸನ ವಿಚಾರದ ಬಗ್ಗೆ ಮಾತನಾಡುತ್ತಾ ಮಾಂಸಾಹಾರವನ್ನು ಉಲ್ಲೇಖಿಸಿ ಮಾತನಾಡಿದರು.

‘ಮಾಂಸಾಹಾರ ಒಂದು ತಪ್ಪು ರೀತಿಯ ಆಹಾರ ಪದ್ಧತಿಯಾಗಿದ್ದು ಹಿಂಸೆಗೆ ದಾರಿ ಮಾಡಿಕೊಡುವ ಆಹಾರವನ್ನು ನಾವು ಪ್ರೋತ್ಸಾಹಿಸಬಾರದು. ತಪ್ಪು ರೀತಿಯ ಆಹಾರ ಪದ್ಧತಿ ಹಾಗೂ ಕೆಟ್ಟ ಆಹಾರವನ್ನು ಸೇವಿಸಿದರೆ ಮಾನಸಿಕವಾಗಿಯೂ ಅದು ನಮ್ಮನ್ನು ತಪ್ಪು ದಾರಿಗೆ ಕೊಂಡೊಯ್ಯುತ್ತದೆ. ಮಾಂಸಾಹಾರ ಹಿಂಸೆಯನ್ನು ಉತ್ತೇಜಿಸುವ ಆಹಾರ ಪದ್ಧತಿ. ಹಾಗಾಗಿ ನಾವು ಮಾಂಸಾಹಾರದಿಂದ ದೂರವೇ ಇರಬೇಕು’ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಮೋಹನ್ ಭಾಗವತ್ ಪಾಶ್ಚಿಮಾತ್ಯರ ಆಹಾರ ಪದ್ಧತಿಯನ್ನು ಉಲ್ಲೇಖಿಸಿ ಮಾತನಾಡಿ ‘ಪಾಶ್ಚಿಮಾತ್ಯರಿಗೂ ಭಾರತೀಯರಿಗೂ ವ್ಯತ್ಯಾಸವಿದೆ, ಭಾರತದ ಮಾಂಸಾಹಾರಿಗಳು ಸಂಯಮದಿಂದ ಕೆಲವು ನಿಯಮಗಳನ್ನು ಅನುಸರಿಸಿ ಆಹಾರ ಸೇವನೆ ಮಾಡುತ್ತಾರೆ. ಹಾಗಾಗಿ ಆಹಾರ ಸೇವಿಸುವುದರಲ್ಲೂ ನಾವು ನಿಯಮ ಪಾಲಿಸಬೇಕು’ ಎಂದು ಹೇಳಿದರು.

ಮುಂದುವರಿದು ‘ಇಲ್ಲಿ ಮಾಂಸಾಹಾರ ಸೇವಿಸುವ ಜನರು ಇಡೀ ಶ್ರಾವಣ ಮಾಸದಲ್ಲಿ ತಿನ್ನುವುದಿಲ್ಲ. ಸೋಮವಾರ, ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸಹ ಅವರು ತಿನ್ನುವುದಿಲ್ಲ. ಹಬ್ಬ ಹರಿದಿನಗಳಲ್ಲಿ ತಿನ್ನುವುದಿಲ್ಲ, ಮೇಲಾಗಿ ಹಿಂದೂ ದೇವರುಗಳು ಸಹ ಮಾಂಸಾಹಾರ ಬಯಸುವುದಿಲ್ಲವಾದ್ದರಿಂದ ಮಾಂಸಾಹಾರ ಎಂಬುದೇ ಒಂದು ತಪ್ಪು ಆಹಾರ ಪದ್ಧತಿ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

🔸ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ನೋಡಿ: ವಾಹನಗಳೇ ಹೋಗದ ಜಾಗದಲ್ಲಿ ಕಾಂತಾರ ಸಿನಿಮಾ ಚಿತ್ರಿಕರಣ ಮಾಡಿದ್ದಾರೆ: ಪ್ರಗತಿ ಶೆಟ್ಟಿ

Reviews KANTARA After Watching Celebrity Show

https://youtu.be/PY2sCI8bWK0

https://fb.watch/fRPWf1OI_H/

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು