ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯತ್ನಾಳ್ ಗೆ ಶಿಸ್ತು ಸಮಿತಿ ನೋಟಿಸ್: ವಿಜಯೇಂದ್ರ ವಿರುದ್ಧ ತಿರುಗಿ ಬಿದ್ರು ರೆಬಲ್ ನಾಯಕರು

ಯತ್ನಾಳ್ ಗೆ ಶಿಸ್ತು ಸಮಿತಿ ನೋಟಿಸ್: ವಿಜಯೇಂದ್ರ ವಿರುದ್ಧ ತಿರುಗಿ ಬಿದ್ರು ರೆಬಲ್ ನಾಯಕರು

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳಗೆ ಬಿಜೆಪಿ ಕೇಂದ್ರ ಶಿಸ್ತು ಸಮೀತಿಯಿಂದ ಶೋಕಾಸ್ ನೋಟಿಸ್ ಹೊರಡಿಸುತ್ತಿದ್ದಂತೆ, ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿರುವ ಒಬ್ಬೊಬ್ಬರೇ ಈಗ ಬಿಜೆಪಿ ಹೈಕಮಾಂಡ್ ವಿರುದ್ದ ತಿರುಗಿ ಬಿದ್ದಿದ್ದಾರೆ. ಈ ವಿಚಾರವಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ತಿರುಗಿ ಬಿದ್ದ ರಮೇಶ್ ಜಾರಕಿಹೊಳಿ, ಯತ್ನಾಳಗೆ ಶೋಕಾಸ್‌ ನೋಟಿಸ್‌ ಇಂದು ಬಂದಿದ್ದಲ್ಲ, ಎರಡು ದಿನಗಳ ಹಿಂದೆಯೇ ಬಂದಿದೆ, ಮಾಧ್ಯಮಗಳಲ್ಲಿ ಇಂದು ಪ್ರಚಾರ ಆಗಿದೆ. ವಿಜಯೇಂದ್ರಗೆ ರಾಜ್ಯಾದ್ಯಕ್ಷ ಸ್ಥಾನ ನಿಭಾಯಿಸಲು ಆಗುವುದಿಲ್ಲ, ತಕ್ಷಣವೇ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಶಾಸಕ ರಮೇಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಹುಟ್ಟು ಹೋರಾಟಗಾರ, ಆದರೆ ವಿಜಯೇಂದ್ರ ಬಿಎಸ್‌ವೈ ಅವರ ಕಾಲಿನ ಧೂಳಿವೂ ಸಮನಲ್ಲ. ಜೀನ್ಸ್ ಪ್ಯಾಂಟ್- ಟೀಶರ್ಟ್ ಹಾಕಿ ಅಡ್ಡಾಡುವ ವಯಸ್ಸು ಅವರದ್ದು. ಇನ್ನೂ ನಾಲ್ಕು ವರ್ಷಗಳ ಬಳಿಕ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಬೇಕಿತ್ತು. ನಾವು ಯತ್ನಾಳ ಬೆನ್ನಿಗೆ ನಿಲ್ತಿವಿ. ಕೇಂದ್ರ ನಾಯಕರ ಮನವೊಲಿಸುತ್ತೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ನನ್ನ ಬೆನ್ನಿಗೆ ನಿಲ್ಲುವಂತೆ ವಿಜಯೇಂದ್ರ ಹಿಂದುಳಿದ ನಾಯಕರಿಗೆ ಬೆದರಿಸುತ್ತಿದ್ದಾರೆ. ವಿಜಯೇಂದ್ರ ಜೊತೆಯಲ್ಲಿರುವ ಬಹುತೇಕರು ಹಿಂದುಳಿದ ಸಮುದಾಯದವರು. ಲಿಂಗಾಯತ, ಒಕ್ಕಲಿಗರು ಯಾರೂ ಇಲ್ಲ. ಪಾಪ ರೇಣುಕಾಚಾರ್ಯ ರಾಜಕೀಯ ಅಸ್ತಿತ್ವಕ್ಕಾಗಿ ಅವರ ಜೊತೆಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗಬೇಕು ಎಂದು ನಾನು ಬಹಿರಂಗವಾಗಿ ಹೇಳಲ್ಲ. ಇನ್ ಡೋರ್ ಸಭೆ ಮಾಡಿ ಕೇಳಲಿ ನಾನು ಹೇಳ್ತಿನಿ ಎಂದ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಇನ್ನು ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿರುವ ಮತ್ತೋರ್ವ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ, ಯತ್ನಾಳ್ ನೋಟಿಸ್ ಗೆ ಉತ್ತರ ನೀಡುತ್ತಾರೆ. ಉಚ್ಚಾಟನೆ ಮಾಡುತ್ತಾರಾ, ಉನ್ನತ ಸ್ಥಾನ ಕೊಡ್ತಾರಾ ಕಾದು ನೋಡಿ.. ಎಂದಿದ್ದಾರೆ.

ಯಾವ ಕಾರಣಕ್ಕೆ ನೋಟಿಸ್ ಕೊಟ್ಟಿದ್ದಾರೆ ಗೊತ್ತಿಲ್ಲ.  ನೋಟಿಸ್ ಗೆ ಯತ್ನಾಳ್ ಉತ್ತರ ಕೊಡುತ್ತಾರೆ. ವಕ್ಫ್ ವಿಚಾರವಾಗಿ ನೋಟಿಸ್ ಕೊಟ್ಟಿಲ್ಲ ವೈಯಕ್ತಿಕವಾಗಿ ನೋಟಿಸ್ ನೀಡಿದ್ದಾರೆ.  ವಕ್ಫ್ ವಿರುದ್ದದ ಹೋರಾಟಕ್ಕೂ ಈ ನೋಟಿಸ್  ಗೂ ಸಂಬಂಧವಿಲ್ಲ. ವಿಜಯೇಂದ್ರ ಎಷ್ಟು ಬಾರಿ ದೆಹಲಿಗೆ  ಹೋಗಿದ್ದಾರೆ.  ವಿಜಯೇಂದ್ರ ಅವರೇ ನೋಟಿಸ್ ಕೊಡಿಸಿದ್ದಾರೆ ಅನ್ನೋಕೆ ಆಗಲ್ಲ ಎಂದರು.

ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಸತತವಾಗಿ ನಡೆಯುತ್ತಿದೆ. ಸಂಪೂರ್ಣ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿಲ್ಲ  ಹಗುರವಾಗಿ ಚುನಾವಣೆ  ತೆಗೆದುಕೊಂಡವು ಅನ್ನೋದು ಅಕ್ಷಮ್ಯ ಅಪರಾಧ. ನಮ್ಮ ಅಮಾಯಕ ಕಾರ್ಯಕರ್ತರನ್ನ ವಜಾ ಮಾಡಲಾಗಿದೆ. ಹೀಗೆ ಮಾಡಿದರೆ ಪಕ್ಷಸಂಘಟನೆ ಹೇಗೆ ಸಾಧ್ಯ? ಎಂದು ಕುಮಾರ ಬಂಗಾರಪ್ಪ ಪ್ರಶ್ನಿಸಿದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು