ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜೆಪಿ ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಯತ್ನಾಳ್ ಗೆ ನೋಟಿಸ್! 72 ಗಂಟೆಯೊಳಗೆ ಉತ್ತರಿಸಲು ತಾಕೀತು

ಬಿಜೆಪಿ ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಯತ್ನಾಳ್ ಗೆ ನೋಟಿಸ್! 72 ಗಂಟೆಯೊಳಗೆ ಉತ್ತರಿಸಲು ತಾಕೀತು

ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿರುವ ಪರಿಣಾಮ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಹೈಕಮಾಂಡ್ ಬಿಸಿ ಮುಟ್ಟಿಸಿದೆ. ಆ ಮೂಲಕ ಬಣ ಬಡಿದಾಟಕ್ಕೆ ನಿಂತಿರುವ ರೆಬೆಲ್ ಶಾಸಕರಿಗೆ ಯತ್ನಾಳ್ ಮೂಲಕ ನೋಟೀಸ್ ಭಯ ಹುಟ್ಟಿಸಿದೆ.

ಬಿಜೆಪಿ ಪಕ್ಷದ ಶಿಸ್ತು ಸಮಿತಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪಕ್ಷದ ಹಿರಿಯ ನಾಯಕರು ಮತ್ತು ರಾಜ್ಯಾಧ್ಯಕ್ಷರ ವಿರುದ್ಧ ನಿರಂತರವಾಗಿ ಬಹಿರಂಗ ವಾಗ್ದಾಳಿ ನಡೆಸುತ್ತಿರುವ ಯತ್ನಾಳ್​​ ಅವರಿಗೆ ಈಗ ಎರಡನೇ ನೋಟೀಸ್ ಜಾರಿಯಾಗಿದೆ.

ಈ ಹಿಂದೆ ಕಳೆದೆರಡು ತಿಂಗಳ ಹಿಂದೆಯೂ ಯತ್ನಾಳ್ ಇದೇ ಕಾರಣಕ್ಕೆ ಬಿಜೆಪಿ ಹೈಕಮಾಂಡ್ ನೋಟಿಸ್ ಜಾರಿ ಮಾಡಿತ್ತು. ಆದರೆ ಈಗ ಹೈಕಮಾಂಡ್ ಗೆ ಉತ್ತರ ನೀಡಲು ಯತ್ನಾಳ್ ಅವರಿಗೆ ಗಡುವು ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಈಗಾಗಲೇ ದೆಹಲಿಯಲ್ಲೇ ಇರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಎದುರು ಖುದ್ದು ಹಾಜರಾಗಿ 72 ಗಂಟೆಯೊಳಗೆ ನೋಟಿಸ್ ಸಂಬಂಧ ವಿವರಣೆ ನೀಡಬೇಕು ಎಂದು ಶಿಸ್ತು ಸಮಿತಿ ಯತ್ನಾಳ್​ ವಿರುದ್ಧ ನೋಟಿಸ್ ನೀಡಿ ಶಾಕ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿಂದೆ ಬಣ ಬಡಿದಾಟಕ್ಕೆ ಬ್ರೇಕ್ ಹಾಕುವ ಸಲುವಾಗಿ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಕಡೆಗೆ ಸಂಧಾನ ಮಾತುಕತೆ ನಡೆಸಲು ಹೈಕಮಾಂಡ್ ಯತ್ನಿಸಿದರೂ ಹೈಕಮಾಂಡ್ ಮಾತಿಗೂ ಬಗ್ಗದ ಹಿನ್ನೆಲೆಯಲ್ಲಿ ಈ ನೋಟೀಸ್ ಜಾರಿಯಾಗಿದೆ ಎಂಬ ಮಾಹಿತಿ ಸಿಕ್ಕಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು