ರ್ಯಾಪಿಡೋ ಬೈಕ್ ಟ್ಯಾಕ್ಸಿ ಬಂದ್ ಗೆ ಇನ್ನು ಆರು ವಾರಗಳ ಗಡುವು ಅಷ್ಟೇ; ಹೈಕೋರ್ಟ್ ಆದೇಶ
ಲಿಂಕ್ ನಕಲಿಸಲಾಗಿದೆ ✓
ಉಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸಂಬಂಧ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ರಾಜ್ಯದಲ್ಲಿ ಅಕ್ರಮವಾಗಿ ಚಲಿಸುತ್ತಿರುವ ಉಬರ್ ಬೈಕ್ ಟ್ಯಾಕ್ಸಿಗಳಿಗೆ ಯಾವುದೇ ಸಂಚಾರ ನಿಯಮ ಜಾರಿಗೊಳಿಸದ ಹಿನ್ನೆಲೆಯಲ್ಲಿ ಈ ಅರ್ಜಿ ಪ್ರಾಮುಖ್ಯತೆ ಪಡೆದಿತ್ತು.
ಈ ಸಂಬಂಧ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಶ್ಯಾಮ್ ಪ್ರಸಾದ್ ಅವರನ್ನು ಒಳಗೊಂಡಂತ ನ್ಯಾಯಪೀಠವು ವಿಚಾರಣೆ ನಡೆಸಿತು.
ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ನಿಯಮ ರೂಪಿಸಿಲ್ಲದ ಕಾರಣ ನಿಯಮಗಳಲ್ಲಿದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ ಎಂಬುದಾಗಿ ತಿಳಿಸಿತು.
ಮೂರು ತಿಂಗಳಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ಆರು ವಾರಗಳಲ್ಲಿ ಉಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಹೈಕೋರ್ಟ್ ನ್ಯಾಯಪೀಠವು ಆದೇಶಿಸಿದೆ. ಈ ಮೂಲಕ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯಲ್ಲಿ ತೊಡಗಿದ್ದಂತ ಉಬರ್, ರ್ಯಾಪಿಡೋ ಗಳಿಗೆ ಬಿಗ್ ಶಾಕ್ ಅನ್ನು ಹೈಕೋರ್ಟ್ ನೀಡಿದೆ
Peepal Media Desk
Peepal Media · ದೇಶ ವಿಭಾಗ