“ಆಪರೇಷನ್ ನಾದೆರ್” : ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆಯ ಮತ್ತೊಂದು ಕಾರ್ಯಾಚರಣೆ ಶುರು!
ಲಿಂಕ್ ನಕಲಿಸಲಾಗಿದೆ ✓

ಆಪರೇಷನ್ ಸಿಂಧೂರ್ ನ ನಂತರ ಭಾರತ ಪಾಕಿಸ್ತಾನ ನಡುವಿನ ಉದ್ವಿಗ್ನತೆಯಲ್ಲಿ ಸ್ವಲ್ಪ ಮಟ್ಟಿಗೆ ಸಡಿಲಿಕೆ ಕಂಡರೂ ಗಡಿಯಲ್ಲಿ ಭಯೋತ್ಪಾದಕರು ಮತ್ತು ಸೈನಿಕರ ನಡುವಿನ ಕದನ ಇನ್ನೂ ಮುಂದುವರೆದಿದೆ. ಗುರುವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಟ್ರಾಲ್ನ ನಾದೆರ್ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರ ಮೇಲೆ ಭಾರತೀಯ ಸೇನೆಯು ಮುಗಿ ಬಿದ್ದಿದೆ.
ವಿಶೇಷ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಭೀಕರ ಗುಂಡಿನ ಚಕಮಕಿ ನಡೆದ ಬಗ್ಗೆ ವರದಿಯಾಗಿದೆ.
ಈ ಬಗ್ಗೆ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ತನ್ನ ಅಧಿಕೃತ ‘ಎಕ್ಸ್’ ಹ್ಯಾಂಡಲ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಈ ಕಾರ್ಯಾಚರಣೆಯನ್ನು ‘ಆಪರೇಷನ್ ನಾಡರ್’ ಎಂಬ ಸುಳಿವು ನೀಡಿದೆ.
“ಇಂಟ್ ಏಜೆನ್ಸಿಯ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಮೇ 15, 2025 ರಂದು ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸಿಆರ್ಪಿಎಫ್ ಅವಂತಿಪೋರಾದ ಟ್ರಾಲ್ನ ನಾದೆರ್ನಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಜಾಗೃತ ಪಡೆಗಳು ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದವು ಮತ್ತು ಸವಾಲು ಹಾಕಿದಾಗ, ಭಯೋತ್ಪಾದಕರು ಭಾರಿ ಗುಂಡು ಹಾರಿಸಿದರು ಮತ್ತು ಭೀಕರ ಗುಂಡಿನ ಚಕಮಕಿ ನಡೆಯಿತು. ಕಾರ್ಯಾಚರಣೆ ಪ್ರಗತಿಯಲ್ಲಿದೆ” ಎಂದು ‘ಎಕ್ಸ್’ ಪೋಸ್ಟ್ನಲ್ಲಿ ಬರೆಯಲಾಗಿದೆ.
Peepal Media Desk
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
