ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಭಾರತಕ್ಕೆ ಬಂದ ಶೇಖ್ ಹಸೀನಾ, ಬಾಂಗ್ಲಾ ಜೈಲಿನಿಂದ ಬಿಡುಗಡೆಗೊಂಡ ವಿರೋಧ ಪಕ್ಷದ ನಾಯಕಿ

P

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಭಾರತಕ್ಕೆ ಬಂದ ಶೇಖ್ ಹಸೀನಾ, ಬಾಂಗ್ಲಾ ಜೈಲಿನಿಂದ ಬಿಡುಗಡೆಗೊಂಡ ವಿರೋಧ ಪಕ್ಷದ ನಾಯಕಿ

ವ್ಯಾಪಕ ಹಿಂಸಾಚಾರದ ಬಳಿಕ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಶೇಖ್ ಹಸೀನಾ ಭಾರತಕ್ಕೆ ಬಂದಿದ್ದಾರೆ. ಅವರನ್ನು ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭಾರತಕ್ಕೆ ಬರಮಾಡಿಕೊಂಡಿದ್ದಾರೆ.

ದೇಶ ತೊರೆದ ಶೇಖ್‌ ಹಸೀನಾ ಅವರನ್ನು ದೆಹಲಿಯ ಗಾಜಿಯಾಬಾದ್ ಬಳಿಯ ಹಿಂಡನ್ ವಾಯುನೆಲೆಯಲ್ಲಿ ಭೇಟಿಯಾದ ಅಜಿತ್ ದೋವಲ್, ಸೇನಾ ಮುಖ್ಯಸ್ಥರ ಮೂಲಕ ಸುರಕ್ಷಿತ ಸ್ಥಳಕ್ಕೆ ಕಳಿಸಿ ಕೊಡಲಾಗಿದೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ಭಾರತ ಗಡಿ ಭಾಗದಲ್ಲಿ ಕಟ್ಟೆಚ್ಚರದ ಭಿಗಿ ಭದ್ರತೆ ಮಾಡಲಾಗಿದೆ. ಯಾವುದೇ ಸಂದರ್ಭದಲ್ಲೂ ಹೆಚ್ಚುವ ಹಿಂಸಾಚಾರದ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸಲು ಭಾರತೀಯ ಸೇನೆಗೆ ಸೂಚಿಸಲಾಗಿದೆ.

ಸಧ್ಯ ಅಲ್ಲಿ ಅಧಿಕಾರ ವಹಿಸಿಕೊಂಡ ಸೇನಾ ಮುಖ್ಯಸ್ಥರು ಪರಿಸ್ಥಿತಿ ನಿಯಂತ್ರಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತಿರುವ ಬಗ್ಗೆ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಾಂಗ್ಲಾದೇಶ ಸೇನಾ ಮುಖ್ಯಸ್ಥರು, “ಪ್ರಧಾನಿ ಹಸೀನಾ ರಾಜೀನಾಮೆ ನೀಡಿದ್ದಾರೆ, ದೇಶವನ್ನು ನಡೆಸಲು ಮಧ್ಯಂತರ ಸರ್ಕಾರ ರಚಿಸಲಿದ್ದೇವೆ. ನಾವು ದೇಶಕ್ಕೆ ಶಾಂತಿಯನ್ನು ಮರಳಿಸುತ್ತೇವೆ. ಹಿಂಸಾಚಾರವನ್ನು ನಿಲ್ಲಿಸುವಂತೆ ನಾವು ನಾಗರಿಕರನ್ನು ಕೇಳುತ್ತೇವೆ. ಕಳೆದ ಕೆಲವು ವಾರಗಳಲ್ಲಿ ನಡೆದ ಎಲ್ಲಾ ಹತ್ಯೆಗಳ ಬಗ್ಗೆ ನಾವು ತನಿಖೆ ನಡೆಸುತ್ತೇವೆ ಎಂದಿದ್ದಾರೆ.

ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ಬಿಟ್ಟು ಹೊರಡುತ್ತಿದ್ದಂತೆಯೇ, ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಜೈಲಿನಲ್ಲಿರುವ ವಿರೋಧ ಪಕ್ಷದ ನಾಯಕಿ ಮತ್ತು ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದ್ದಾರೆ.

ಶೇಖ್ ಹಸೀನಾ ಅವರ ಪ್ರಬಲ ವಿರೋಧಿ ಎಂದು ಪರಿಗಣಿಸಲ್ಪಟ್ಟಿರುವ 78 ವರ್ಷದ ಖಲೀದಾ ಜಿಯಾ ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿಯ ಮುಖ್ಯಸ್ಥರಾಗಿದ್ದಾರೆ.

2018 ರಲ್ಲಿ, ಭ್ರಷ್ಟಾಚಾರದ ಆರೋಪದ ನಂತರ ಅವರನ್ನು ಜೈಲಿಗೆ ಹಾಕಲಾಯಿತು, ಇದು ರಾಜಕೀಯ ಪ್ರೇರಿತ ಎಂದು ಅವರು ಹೇಳಿದ್ದಾರೆ.

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version