ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅದಿರು ನಾಪತ್ತೆ ಪ್ರಕರಣ : ಶಾಸಕ ಸತೀಶ್ ಸೈಲ್ ಗೆ 7 ವರ್ಷ ಶಿಕ್ಷೆ ಪ್ರಕಟ ; ಶಾಸಕ ಸ್ಥಾನದಿಂದ ಅನರ್ಹ

P

Peepal Media Desk • ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಅದಿರು ನಾಪತ್ತೆ ಪ್ರಕರಣ : ಶಾಸಕ ಸತೀಶ್ ಸೈಲ್ ಗೆ 7 ವರ್ಷ ಶಿಕ್ಷೆ ಪ್ರಕಟ ; ಶಾಸಕ ಸ್ಥಾನದಿಂದ ಅನರ್ಹ

ಅದಿರು ನಾಪತ್ತೆ ಪ್ರಕರಣ ಸಂಬಂಧ ಆರು ಪ್ರಕರಣಗಳಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಗೆ ಜನಪ್ರತಿನಿಧಿಗಳ ನ್ಯಾಯಾಲಯ ಏಳು ವರ್ಷ  ಜೈಲು ಶಿಕ್ಷ ವಿಧಿಸಿ ತೀರ್ಪು ನೀಡಿದೆ. ಎಲ್ಲಾ ಆರು ಪ್ರಕರಣಗಳ ಒಟ್ಟಾರೆ ಪರಿಗಣಿಸಿ ಈ ಶಿಕ್ಷೆ ಪ್ರಕಟವಾಗಿದೆ.

ಈ ಹಿಂದೆ ನ್ಯಾಯಾಲಯ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು. ಈಗ ಎಲ್ಲಾ ಪ್ರಕರಣಗಳನ್ನು ಪರಿಗಣಿಸಿ ಏಳು ವರ್ಷ ಶಿಕ್ಷೆ ಪ್ರಕಟಿಸಿದೆ.

ಶಿಕ್ಷೆ ಅವಧಿಯನ್ನು ಕಡಿಮೆ ಮಾಡಬೇಕು ಎಂದು ಶಾಸಕ ಸೈಲ್ ಮನವಿ ಮಾಡಿದ್ದರು. ಆದರೆ ಇದೀಗ 7 ವರ್ಷ ಜೈಲು ಆಗಿರುವುದರಿಂದ ಶಾಸಕ ಸ್ಥಾನವೂ ಅನರ್ಹ ಆಗಲಿದೆ.

ವಂಚನೆ ಪ್ರಕರಣದಲ್ಲಿ 7 ವರ್ಷ ಸಜೆ, ಒಳಸಂಚು ಆರೋಪ ಪ್ರಕರಣದಲ್ಲಿ 5 ವರ್ಷ ಹಾಗೂ ಅದಿರು ಕಳ್ಳತನ ಪ್ರಕರಣದಲ್ಲಿ 3 ವರ್ಷ ಸಜೆ ವಿಧಿಸಿ ಕೋರ್ಟ್​ ಆದೇಶಿಸಿದೆ. ಜೊತೆಗೆ, ಒಟ್ಟು 9 ಕೋಟಿ 60 ಲಕ್ಷ ರೂ. ದಂಡ ವಿಧಿಸಲಾಗಿದೆ.

ಮುಟ್ಟುಗೋಲು ಹಾಕಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದು ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿತ್ತು.

P

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version