ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನಮ್ಮ ತಂದೆ, ಎಚ್‌ಡಿಕೆ ರವರ ತೀರ್ಮಾನವೇ ಅಂತಿಮ – ಎಚ್‌.ಡಿ.ರೇವಣ್ಣ

ನಮ್ಮ ತಂದೆ, ಎಚ್‌ಡಿಕೆ ರವರ ತೀರ್ಮಾನವೇ ಅಂತಿಮ – ಎಚ್‌.ಡಿ.ರೇವಣ್ಣ

ಹಾಸನ: ಅರಸೀಕೆರೆ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯ ಕೇಳಿಬಂದಿರುವ ಬಗ್ಗೆ ಈ ವಿಷಯದಲ್ಲಿ ತಮ್ಮ ವೈಯಕ್ತಿಕ ತೀರ್ಮಾನವೇನೂ ಇಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಾಗೂ ಎಚ್.ಡಿ. ಕುಮಾರಸ್ವಾಮಿ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ತಿಳಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಜ.24ರಂದು ಹಾಸನದಲ್ಲಿ ಜೆಡಿಎಸ್ ಪಕ್ಷದ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ. ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಸಮಾವೇಶ ನಡೆಸಲಾಗುತ್ತಿದೆ ಎಂದು  ಹೇಳಿದರು. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸುರೇಶ್‌ಬಾಬು ಸೇರಿದಂತೆ ಜೆಡಿಎಸ್‌ನ ಎಲ್ಲಾ ಹಾಲಿ ಹಾಗೂ ಮಾಜಿ ಶಾಸಕರು ಭಾಗವಹಿಸಲಿದ್ದಾರೆ. ಈ ಸಮಾವೇಶಕ್ಕೆ ಸುಮಾರು ಒಂದೂವರೆ ಇಂದ ಎರಡುವರೆ ಲಕ್ಷ ಜನ ಸೇರುವ ನಿರೀಕ್ಷೆಯಿದೆ ಎಂದರು.

ಸಮಾವೇಶದ ಸ್ಥಳದ ಕುರಿತು ಮಾತನಾಡಿದ ಅವರು, ಕೆಐಎಡಿಬಿಗೆ ಅಗತ್ಯ ಶುಲ್ಕವನ್ನು ಈಗಾಗಲೇ ಪಾವತಿಸಲಾಗಿದೆ. ಜಿಲ್ಲಾಡಳಿತ ಹಾಗೂ ಕೆಐಎಡಿಬಿ ಯಾವ ಸ್ಥಳವನ್ನು ಸೂಚಿಸುತ್ತವೆಯೋ ಅಲ್ಲಿ ಸಮಾವೇಶ ನಡೆಸಲಾಗುವುದು. ಐದು ಲಕ್ಷ ರೂ. ಶುಲ್ಕ ಕೇಳಲಾಗಿದ್ದು, ಅದರಲ್ಲಿ ಒಂದು ಲಕ್ಷ ರೂ. ಮುಂಗಡವಾಗಿ ಪಾವತಿಸಲಾಗಿದೆ. ಕೆಐಎಡಿಬಿಯವರು ಸೂಚಿಸುವ ಸ್ಥಳದಲ್ಲಿಯೇ ಸಮಾವೇಶ ನಡೆಸಲಾಗುತ್ತದೆ ಎಂದು ಸ್ಪಷ್ಟನೆ ನೀಡಿದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅರಸೀಕೆರೆ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯ ಕೇಳಿಬಂದಿರುವ ಕುರಿತು ಪ್ರತಿಕ್ರಿಯಿಸಿದ ಎಚ್.ಡಿ. ರೇವಣ್ಣ, ಈ ವಿಷಯದಲ್ಲಿ ತಮ್ಮ ವೈಯಕ್ತಿಕ ತೀರ್ಮಾನವೇನೂ ಇಲ್ಲ. ಎಚ್.ಡಿ. ದೇವೇಗೌಡರು ಹಾಗೂ ಎಚ್.ಡಿ. ಕುಮಾರಸ್ವಾಮಿ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ ಎಂದು ಹೇಳಿದರು.

ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರು ಯಾವ ಕ್ಷೇತ್ರದಿಂದ ಸ್ಪರ್ಧಿಸು ಎಂದು ಹೇಳುತ್ತಾರೋ, ಅದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದರು. ಅರಸೀಕೆರೆ ಕ್ಷೇತ್ರದ ಮುಖಂಡರು ತಮ್ಮನ್ನು ಭೇಟಿಯಾಗಿ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಈಗಲೇ ಯಾವ ಕ್ಷೇತ್ರದಿಂದ ನಿಲ್ಲುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ. ಹೊಳೆನರಸೀಪುರ ಕ್ಷೇತ್ರದ ಜನತೆ ಆರು ಬಾರಿ ತಮ್ಮನ್ನು ಗೆಲ್ಲಿಸಿದ್ದು, ತಮಗೆ ಮಾತ್ರವಲ್ಲದೆ ಪ್ರಜ್ವಲ್ ಹಾಗೂ ಸೂರಜ್ ಅವರಿಗೆ ಸಹ ಶಕ್ತಿ ಹಾಗೂ ಬೆಂಬಲ ನೀಡಿದ್ದಾರೆ ಎಂದು ಹೇಳಿದರು.

ಜಿಲ್ಲೆಯನ್ನು ರಾಜ್ಯದಲ್ಲಿ ಮೊದಲ ಸ್ಥಾನಕ್ಕೆ ತೆಗೆದುಕೊಂಡು ಹೋಗುವುದು ನಮ್ಮ ಗುರಿಯಾಗಿದೆ. ನಾವು ಪಕ್ಷವನ್ನು ಬೆಳೆಸುತ್ತೇವೆ, ಆದರೆ ರಾಷ್ಟ್ರೀಯ ಪಕ್ಷಗಳು ನಾವು ಬೆಳೆಸಿದ ನಾಯಕರನ್ನು ಕರೆದುಕೊಂಡು ಹೋಗಿ ಚುನಾವಣೆಗೆ ನಿಲ್ಲಿಸುತ್ತವೆ ಎಂದು ಪರೋಕ್ಷವಾಗಿ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ಕಿಡಿಕಾರಿದರು. ಸುದ್ದಿಗೋಷ್ಠಿಯಲ್ಲಿ ಶಾಸಕ ಹೆಚ್.ಪಿ. ಸ್ವರೂಪ್, ಜೆಡಿಎಸ್ ಮುಖಂಡ ಹೊನ್ನವಳ್ಳಿ ಸತೀಶ್, ಬಿದರಿಕೆರೆ ಜಯರಾಂ ಇತರರು ಉಪಸ್ಥಿತರಿದರು.

ವಿಷಯಗಳು: #karnataka #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು