ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರೈತರ ಸಾಲ ವಸೂಲಿ ರೀತಿಗೆ ಬ್ಯಾಂಕ್ ವಿರುದ್ಧ ಆಕ್ರೋಶ – ಕಣಗಾಲ್ ಮೂರ್ತಿ

ರೈತರ ಸಾಲ ವಸೂಲಿ ರೀತಿಗೆ ಬ್ಯಾಂಕ್ ವಿರುದ್ಧ ಆಕ್ರೋಶ – ಕಣಗಾಲ್ ಮೂರ್ತಿ

ಹಾಸನ: ರೈತರು ಹೋರಾಟ ಮಾಡಿದ ಹಿನ್ನಲೆಯಲ್ಲಿ ಸಾಲ ಮಾಡಿದವರ ಜಪ್ತಿ ಮಾಡುವುದನ್ನ ಸರಕಾರದವರು ನಿಲ್ಲಿಸಿದ್ದರು. ಮತ್ತೆ ಬ್ಯಾಂಕಿನವರು ಸಾಲದಲ್ಲಿ ಕಡಿಮೆ ಮಾಡದೇ ಪೂರ್ಣ ಕಟ್ಟಬೇಕು ಇಲ್ಲವಾದರೇ ಹರಾಜು ಹಾಕುವುದಾಗಿ ತಮಟೆ ಬಾರಿಸಿ ಕರಪತ್ರ ಹಂಚುತ್ತಿದ್ದಾರೆ. ಕೇಳಲು ಹೋಗಿದಕ್ಕೆ ಬ್ಯಾಂಕ್ ಮ್ಯಾನೇಜರ್ ಹಲ್ಲೆ ಮಾಡಿದ್ದಾರೆ. ಡಿಸಿಗೆ ನಮ್ಮ ಸಮಸ್ಯೆ ಹೇಳಲು ಹೋದರೆ ಕೇಳಲು ಸಿದ್ಧರಿಲ್ಲ ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕಣಗಾಲ್ ಮೂರ್ತಿ ಬೇಸರವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಕಾವೇರಿ ಗ್ರಾಮೀಣ ಬ್ಯಾಂಕಿನವರು ಅಡಗೂರಿನಲ್ಲಿರುವ ಕಾವೇರಿ ಗ್ರಾಮೀಣ ಬ್ಯಾಂಕಿನ ಮ್ಯಾನೆಜರ್ ನಮಗೆ ಕಿರುಕುಳ ಕೊಡುತ್ತಿದ್ದಾರೆ. ಆಸ್ತಿ ಹರಾಜಿಗೆ ಇಟ್ಟಿರುವುದಾಗಿ ಡಂಗೂರ ಬಡೆಸಿದರು. ಬೇಲೂರು ತಾಲೂಕು ಅಡಗೂರು ಗ್ರಾಮದ ಶಿವಕುಮಾರ್ ಅವರ ಮೇಲೆ ಬ್ಯಾಂಕ್ ಮ್ಯಾನೆಜರ್ ಹಲ್ಲೆ ಮಾಡಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಬಳಿ ಕೇಳಲು ಹೋದರೇ ಸಾಲ ಕಟ್ಟಿ ಎಂದು ಹೇಳಿದಲ್ಲದೇ ನಮಗೆ ಸಮಯವಿಲ್ಲ ಎಂದು ಹೇಳಿ ಹೊರಟು ಹೋದರು ಎಂದು ಹೇಳಿದರು.


ಇದೆ ಏಪ್ರಿಲ್ 12 ರಿಂದ 14ರ ವರೆಗೂ ಮೂರು ದಿನಗಳ ಕಾಲ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ನೇರ ಮಾರಾಟದ ಮೂಲಕ ನಮ್ಮ ಹೋರಾಟ, ನಮ್ಮ ಬೆಳೆಗೆ ನಮ್ಮದೆ ಬೆಲೆ ಘೋಷಣೆಯೊಂದಿಗೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಳಿ ಇರುವ ಮುನಿ ವೆಂಕಟಯ್ಯ ಸ್ಮಾರಕ ಬಯಲು ರಂಗಮAದಿರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿ ನಡೆಸಲಾಗುವುದು. ಹೆಚ್ಚು ಪ್ರಚಾರ ಮಾಡಿ ಸಂತೆಗೆ ಗ್ರಾಹಕರನ್ನು ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಹಳ್ಳಿಗಳಿಂದ ವ್ಯವಸಾಯ ಬಿಟ್ಟು ಬದುಕು ಕಟ್ಟಿಕೊಳ್ಳಲು ಬಂದಿರುವವರೇ ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕಾರಣ, ಈ ಕಾರ್ಯಕ್ರಮಕ್ಕೆ ನಮ್ಮ ನಿರೀಕ್ಷೆಗೆ ಮೀರಿದ ಸ್ಪಂದನೆ ಸಿಗುತ್ತದೆ ಎಂಬ ವಿಶ್ವಾಸ ರೈತ ಚಳವಳಿಗಿದೆ ಎಂದರು. ಈ ಮೊದಲ ಸಂತೆ ಯಶಸ್ಸು ಕಂಡಲ್ಲಿ, ಬೆಂಗಳೂರಿನ ಇತರೆ ಬಡಾವಣೆಗಳಲ್ಲಿ ಇಂತಹದೆ ಸಂತೆ ಮಾಡಲಾಗುವುದು. ಇದು ಯಾವುದೇ ಮಧ್ಯವರ್ತಿಗಳಿಲ್ಲದ ಮಾರುಕಟ್ಟೆ ಮತ್ತು ಕಮಿಷನ್ ರಹಿತ ಮಾರುಕಟ್ಟೆ. ರೈತರೇ ನೇರ ಬಂದು ತಮ್ಮ ಬೆಳೆಗಳನ್ನು ಈ ಮಾರುಕಟ್ಟೆಯಲ್ಲಿ ಮಾರತಕ್ಕದ್ದು. ಇಲ್ಲಿ ವ್ಯಾಪಾರಿಗಳಿಗೆ ಮತ್ತು ಮಧ್ಯವರ್ತಿಗಳಿಗೆ ಅವಕಾಶವಿರುವುದಿಲ್ಲ. ಹೆಚ್ಚಿನ ವಿವರಗಳಿಗೆ ರೈತ ಸಂಘದ ಜಿಲ್ಲಾ ಮತ್ತು ತಾಲ್ಲೂಕು ಮುಖಂಡರುಗಳಿಗೆ ಕರೆ ಮಾಡಲು ಮೊಬೈಲ್ ಸಂಖ್ಯೆ 903 5454365 / 9036654365 ಗೆ ಸಂಪಕಿಸಬಹುದಾಗಿದೆ. ಕೆ.ಟಿ.ಗಂಗಾಧರ, ಪ್ರೊ.ರವಿ ವರ್ಮ ಕುಮಾರ್, ಶ್ರೀ.ರಾಮಣ್ಣ ಕೆಂಚಳ್ಳರ, ಶ್ರೀಮತಿ ಅನಸೂಯಮ್ಮ,ಶೀಮತಿ ಪಾರ್ವತಿ ಕಳಸಣ್ಣನವರ್, ಪ್ರೊ.ಹಿ.ಶಿ.ರಾಮಚಂದ್ರೇಗೌಡ ಗ್ಯಾರಂಟಿ ರಾಮಣ್ಣ, ಹೊನ್ನೂರು ಪ್ರಕಾಶ್, ಚುಕ್ಕಿ ನಂಜುAಡಸ್ವಾಮಿ ರಾಜ್ಯ ಅಧ್ಯಕ್ಷೀಯ ಮಂಡಳಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಮನವಿ ಮಾಡುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಮಂಜು, ರೈತ ಮುಖಂಡ ಮರ್ಕುಲಿ ಪ್ರಕಾಶ್, ಶಿವಕುಮಾರ್ ಇತರರು ಉಪಸ್ಥಿತರಿದ್ದ

ವಿಷಯಗಳು: #karnataka #news #peepal #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು