ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಮುಖ್ಯಮಂತ್ರಿ ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-13 – ಮಾಹಿತಿ, ಜೈವಿಕ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಏನು, ಎಷ್ಟು?

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 2 ನಿಮಿಷದ ಓದು

ಮುಖ್ಯಮಂತ್ರಿ ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-13 – ಮಾಹಿತಿ, ಜೈವಿಕ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಏನು, ಎಷ್ಟು?

ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ

  • ನವೋದ್ಯಮಿಗಳಿಗೆ ಅತ್ಯಾಧುನಿಕ ಸೌಲಭ್ಯವುಳ್ಳ ವಿಶ್ವದರ್ಜೆಯ ಪರಿಪೋಷಣ ಕೇಂದ್ರ ʻINNOVERSEʼ ಅನ್ನು 50 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.
  • ಸ್ಟಾರ್ಟಪ್‌ ನೀತಿಯಡಿಯಲ್ಲಿ ಅನುದಾನ ನೀಡಿರುವ ಸ್ಟಾರ್ಟ್‌ಅಪ್‌ಗಳ ಪರಿಹಾರಗಳ ಅಳವಡಿಕೆಯನ್ನು ವೇಗಗೊಳಿಸಲು ʻPropelʼ ಎಂಬ ಯೋಜನೆಯನ್ನು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಆಯೋಜಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಂದು ಕೋಟಿ ರೂ. ಅನುದಾನವನ್ನು ನಿಗದಿಪಡಿಸಲಾಗಿದೆ.
  • ಸ್ಟಾರ್ಟ್ಅಪ್‍ಗಳಿಗೆ Global Innovation Alliance- Market Access Programme (GIA-MAP) ಕಾರ್ಯಕ್ರಮವನ್ನು ಮೂರು ಕೋಟಿ ರೂ.ಗಳ ವೆಚ್ಚದಲ್ಲಿ ಆಯೋಜಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಂದು ಕೋಟಿ ರೂ. ಅನುದಾನವನ್ನು ನಿಗದಿಪಡಿಸಲಾಗಿದೆ.
  • New Age Incubation Network (NAIN) ಕೇಂದ್ರಗಳನ್ನು ಬೆಂಬಲಿಸಲು ತಂತ್ರಜ್ಞಾನ ವರ್ಗಾವಣೆ ಸಂಸ್ಥೆಯನ್ನು (Technology Transfer Organisation) ನಾಲ್ಕು ಕೋಟಿ ರೂ. ಗಳ ಯೋಜನಾ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಎರಡು ಕೋಟಿ ರೂ. ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.
  • ಹೆಲ್ತ್‌-ಟೆಕ್‌ ಮತ್ತು ಮೆಡ್-ಟೆಕ್‌ನಲ್ಲಿ ಸೆಂಟರ್‌ ಆಫ್‌ ಎಕ್ಸಲೆನ್ಸ್‌ (Centre of Excellence in Health Tech & Med Tech) ಕೇಂದ್ರವನ್ನು 50 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.
  • ಜೈವಿಕ-ಬ್ಯಾಂಕ್ (Bio Bank) ಅನ್ನು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಎರಡು ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.
  • ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ʻCentre of Excellence in Wireless & Wired Technologies in Karnataka (COEWWT)ʼ ಅನ್ನು 25 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಐದು ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.
  • ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಇನ್‌ ಡಿಸೈನ್ (Centre of Excellence in Design) ಕೇಂದ್ರವನ್ನು 20 ಕೋಟಿ ರೂ.ಗಳ ಯೋಜನಾ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಎಂಟು ಕೋಟಿ ರೂ. ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.
  • ಕರ್ನಾಟಕ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ ನೀತಿಯ ಅನುಷ್ಠಾನಕ್ಕೆ ದೃಢವಾದ ಮತ್ತು ಪಾರದರ್ಶಕ ಆಡಳಿತದ ಚೌಕಟ್ಟನ್ನು ರಚಿಸುವುದು ಹಾಗೂ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಾಡುವುದು ಅಗತ್ಯವಾಗಿದೆ. ಈ ಉದ್ದೇಶಕ್ಕಾಗಿ ಕರ್ನಾಟಕ ರಾಜ್ಯ ಸಂಶೋಧನಾ ಪ್ರತಿಷ್ಠಾನವನ್ನು (ಕೆಎಸ್‌ಆರ್‌ಎಫ್) ರಚಿಸಲಾಗುವುದು.
  • ರಾಜ್ಯದ ವಿಜ್ಞಾನ ಕೇಂದ್ರಗಳ ಮೂಲಸೌಲಭ್ಯಗಳನ್ನು ಬಲಪಡಿಸಲು, ಎರಡು ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು
    ತಲಾ 50 ಲಕ್ಷ ರೂ. ವೆಚ್ಚದಲ್ಲಿ ಮತ್ತು ನಾಲ್ಕು ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ತಲಾ 30 ಲಕ್ಷ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುವುದು. ಈ ಯೋಜನೆಗೆ ಪ್ರಸ್ತುತ ವರ್ಷದಲ್ಲಿ ಎರಡು ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
  • ಸಂಶೋಧನೆ ಮತ್ತು ನಾವೀನ್ಯತೆ ವ್ಯವಸ್ಥೆಯು ಉದ್ಯಮಗಳು, ವಿಶ್ವವಿದ್ಯಾನಿಲಯಗಳು, ಸಂಶೋಧನಾ ಸಂಸ್ಥೆಗಳು ಮತ್ತು ಸರ್ಕಾರಗಳು ಸೇರಿದಂತೆ ಇವರ ನಡುವಿನ ಸಂಬಂಧಗಳ ಸಂಕೀರ್ಣ ವ್ಯವಸ್ಥೆಯಾಗಿದೆ. ಈ ಎಲ್ಲಾ ಭಾಗೀದಾರರನ್ನು ಒಟ್ಟುಗೂಡಿಸಲು ಮತ್ತು ಅವರ ನಡುವೆ ಸಮನ್ವಯತೆಯನ್ನು ಸಾಧಿಸಲು ಇ-ಪ್ಲಾಟ್‌ಫಾರ್ಮ್‌ e-KRDIP ಅನ್ನು ರಚಿಸಲಾಗುವುದು.
  • ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ರೈತರು, ಕುಶಲಕರ್ಮಿಗಳು, ಕಾರ್ಮಿಕರು, ಯಂತ್ರಕಾರರು ಮತ್ತು ಸಾಮಾನ್ಯ ಜನರು ರಚಿಸಿದ ತಳಹಂತದ ನಾವೀನ್ಯತೆಗಳನ್ನು ಗುರುತಿಸಿ, ವ್ಯಾಖ್ಯಾನಿಸಲು ಮತ್ತು ಅವುಗಳಿಗೆ ಮೌಲ್ಯವನ್ನು ದೊರಕಿಸುವ ಮೂಲಕ ವಾಣಿಜ್ಯೀಕರಣಕ್ಕೆ ಬೆಂಬಲವನ್ನು ನೀಡುವ ಯೋಜನೆಗೆ ಐದು ಕೋಟಿ ರೂ. ಒದಗಿಸಲಾಗುವುದು.
PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು