ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಖ್ಯಮಂತ್ರಿ ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-15 : ಪ್ರವಾಸೋದ್ಯಮಕ್ಕೆ ಏನು, ಎಷ್ಟು?

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಮುಖ್ಯಮಂತ್ರಿ ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-15 : ಪ್ರವಾಸೋದ್ಯಮಕ್ಕೆ ಏನು, ಎಷ್ಟು?

ಪ್ರವಾಸೋದ್ಯಮ

  • ನಮ್ಮ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿದ ಪರಿಣಾಮವಾಗಿ, ರಾಜ್ಯದ ಪ್ರಮುಖ ಧಾರ್ಮಿಕ ಮತ್ತು ಪಾರಂಪರಿಕ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಅತಿ ಹೆಚ್ಚಾಗಿರುವುದರಿಂದ ಅಂತಹ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು.
  • ʻಒಂದು ರಾಜ್ಯ ಹಲವು ಜಗತ್ತುʼ ಎಂಬ ಘೋಷವಾಕ್ಯದಂತೆ ಕರ್ನಾಟಕವು ಜಾಗತಿಕ ಮಟ್ಟದ ಪ್ರವಾಸಿ ತಾಣವಾಗಿ ಹೊರಹೊಮ್ಮುವ ಸಾಮರ್ಥ್ಯ ಹೊಂದಿದ್ದರೂ, ಅದರ ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಕಲ್ಪನೆಗಳನ್ನು ಅನುಷ್ಠಾನಗೊಳಿಸಲು ಮಾಸ್ಟರ್‌ ಪ್ಲಾನ್‌ ಅನ್ನು ತಯಾರಿಸಲಾಗುವುದು.
  • ಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ತಿಯಲ್ಲಿ ಬರುವ ಪ್ರವಾಸಿ ತಾಣಗಳಾದ ಹಂಪಿ, ಮೈಲಾರ, ಗಾಣಗಾಪುರ, ಸನ್ನತಿ ಮತ್ತು ಮಳಖೇಡ, ಬೀದರ್‌, ರಾಯಚೂರು ಹಾಗೂ ಕಲಬುರಗಿ ಕೋಟೆಗಳ ಸಮಗ್ರ ಅಭಿವೃದ್ಧಿಗಾಗಿ 75 ಕೋಟಿ ರೂ. ಗಳನ್ನು ಒದಗಿಸಲಾಗುವುದು.
  • ಕಿತ್ತೂರು ಕರ್ನಾಟಕ ಭಾಗದಲ್ಲಿನ ಸವದತ್ತಿ ಯಲ್ಲಮ್ಮನ ಗುಡ್ಡ, ದೇವರಗುಡ್ಡ, ಕಪ್ಪತ್ತಗುಡ್ಡ, ಬಾದಾಮಿ ಬನಶಂಕರಿ, ಲಕ್ಕುಂಡಿ ಪ್ರವಾಸಿ ತಾಣಗಳನ್ನು ಮತ್ತು ಗದಗ ಜಿಲ್ಲೆಯ ಮಾಗಡಿ ಪಕ್ಷಿಧಾಮವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.
  • ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್‌ ಪ್ರವಾಸೋದ್ಯಮ ಕಾರ್ಯಪಡೆಯನ್ನು ರಚಿಸಲಾಗುವುದು ಹಾಗೂ ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನೆಯನ್ನು ತಯಾರಿಸಲಾಗುವುದು.
  • ಸಸಿಹಿತ್ಲು ಕಡಲ ತೀರವನ್ನು ಅಂತಾರಾಷ್ಟ್ರೀಯ ಸರ್ಫಿಂಗ್‌ ತಾಣವಾಗಿ ಅಭಿವೃದ್ಧಿಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ರೂಪಿಸಲಾಗುವುದು.
  • ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಯಾತ್ರಿನಿವಾಸ/ಡಾರ್ಮಿಟರಿಗಳನ್ನು ನಿರ್ಮಾಣ ಮಾಡಲಾಗುವುದು.
  • ಮೈಸೂರಿನ ಹೃದಯ ಭಾಗದಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣವನ್ನು ದೆಹಲಿಯ ಪ್ರಗತಿ ಮೈದಾನದ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲಾಗುವುದು.
  • ರಾಜ್ಯದಲ್ಲಿರುವ 16 ವಸ್ತುಸಂಗ್ರಹಾಲಯಗಳನ್ನು ಹಂತ ಹಂತವಾಗಿ ಆಕರ್ಷಕ ಮತ್ತು ಸಂವಾದಾತ್ಮಕವಾಗಿ ಅಭಿವೃದ್ಧಿಪಡಿಸಲಾಗುವುದು. ಈ ಆರ್ಥಿಕ ಸಾಲಿನಲ್ಲಿ ಕಲಬುರಗಿ, ಗದಗ ಮತ್ತು ಬೆಂಗಳೂರಿನ ಸರ್ಕಾರಿ ವಸ್ತುಸಂಗ್ರಹಾಲಯಗಳ ಅಭಿವೃದ್ಧಿಪಡಿಸಲು ಮತ್ತು ವಿಜಯಪುರದಲ್ಲಿರುವ ಆನಂದಮಹಲ್ ಕಟ್ಟಡವನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ.
  • ಮೈಸೂರಿನಲ್ಲಿ ಹೆಚ್ಚು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರು ಭೇಟಿ ನೀಡುವ ಕಾರಣದಿಂದ ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದ ಬಳಿ ಪುರಾತತ್ವ ಇಲಾಖೆಯ ಸುಪರ್ದಿಯಲ್ಲಿನ ಎರಡೂವರೆ ಎಕರೆ ಜಮೀನಿನಲ್ಲಿ ಕರ್ನಾಟಕದ ಶ್ರೀಮಂತ ಕಲೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಲು Augmented Reality (AR) ಮತ್ತು Virtual Reality (VR) ತಂತ್ರಜ್ಞಾನದೊಂದಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ʻಕರ್ನಾಟಕ ಪುರಾತತ್ವ ವಸ್ತುಸಂಗ್ರಹಾಲಯ ಮತ್ತು ಕಲಾಗ್ಯಾಲರಿʼ ನಿರ್ಮಾಣ ಮಾಡಲಾಗುವುದು.
  • ರಾಜ್ಯದಲ್ಲಿರುವ ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳಾದ ಹಂಪಿಯ ವಿಜಯವಿಠಲ ದೇವಸ್ಥಾನ, ಬೀದರ್ ಕೋಟೆ, ನಂದಿಬೆಟ್ಟದ
    ಶ್ರೀ ಭೋಗನಂದೀಶ್ವರ ದೇವಸ್ಥಾನ, ವಿಜಯಪುರದ ಗೋಲಗುಂಬಜ್, ಕಿತ್ತೂರು ಕೋಟೆ ಮತ್ತು ಬಾದಾಮಿ ಗುಹೆಗಳ ಬಳಿ ರಾತ್ರಿ ವೇಳೆ ಪ್ರವಾಸಿಗರ ಭೇಟಿಯನ್ನು ಉತ್ತೇಜಿಸಲು ಹಾಗೂ ಕರ್ನಾಟಕ ರಾಜ್ಯದ ಕಲೆ, ವಾಸ್ತುಶಿಲ್ಪ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಪ್ರದರ್ಶಿಸಲು
    3D ಪ್ರೊಜೆಕ್ಷನ್, ಮಲ್ಟಿಮೀಡಿಯಾ, ಸೌಂಡ್ ಮತ್ತು ಲೈಟ್ ಷೋ ಯೋಜನೆಯನ್ನು ಕೈಗೊಳ್ಳಲಾಗುವುದು.
PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು