ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಖ್ಯಮಂತ್ರಿ ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-16 – ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ವಲಯಕ್ಕೆ ಏನು, ಎಷ್ಟು?

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಮುಖ್ಯಮಂತ್ರಿ ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-16 – ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ವಲಯಕ್ಕೆ ಏನು, ಎಷ್ಟು?

ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ

  1. ರಾಜ್ಯದಲ್ಲಿ ಮಾನವ – ಕಾಡಾನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಒಂದು 520 ಕಿ.ಮೀ.ಗಳ ಬ್ಯಾರಿಕೇಡ್‌ಗಳನ್ನು ನಿರ್ಮಿಸಲು ಘೋಷಿಸಲಾಗಿತ್ತು. ಈ ಯೋಜನೆಯಡಿಯಲ್ಲಿ ಇಲ್ಲಿಯವರೆಗೂ
    312 ಕಿ.ಮೀ. ನಷ್ಟು ಬ್ಯಾರಿಕೇಡ್‌ ನಿರ್ಮಿಸಲಾಗಿದ್ದು, ಬಾಕಿ ಉಳಿದಿರುವ ಬ್ಯಾರಿಕೇಡ್‌ ನಿರ್ಮಾಣ ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು. ಈ ಕಾಮಗಾರಿಗಳ ಅನುಷ್ಠಾನಕ್ಕೆ 2023-24 ರಲ್ಲಿ 120 ಕೋಟಿ ರೂ. ಮೀಸಲಿಡಲಾಗಿದೆ.
  2. ಮಾನವ – ಕಾಡಾನೆ ಸಂಘರ್ಷವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಈಗಾಗಲೇ ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಆನೆ ಕಾರ್ಯಪಡೆಯನ್ನು ರಚಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಮನಗರ ಮತ್ತು ಬನ್ನೇರುಘಟ್ಟದಲ್ಲಿ ಎರಡು ಹೊಸ ಆನೆ ಕಾರ್ಯಪಡೆಗಳನ್ನು ರಚಿಸಲಾಗುವುದು.
  3. ಮಾನವ-ವನ್ಯಪ್ರಾಣಿ ಸಂಘರ್ಷದಲ್ಲಿ ಸಂರಕ್ಷಿಸಿದ, ಗಾಯಗೊಂಡ, ಅನಾರೋಗ್ಯ ಪೀಡಿತ ಪ್ರಾಣಿಗಳನ್ನು ರಕ್ಷಣೆ/ನಿರ್ವಹಣೆ ಮಾಡುತ್ತಿರುವ ಬನ್ನೇರುಘಟ್ಟ ಮತ್ತು ಮೈಸೂರಿನಲ್ಲಿರುವ ಪುನರ್ವಸತಿ ಕೇಂದ್ರಗಳ ಸಾಮರ್ಥ್ಯ ವರ್ಧನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ, ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ಹೊಸದಾಗಿ ಪುನರ್ವಸತಿ ಕೇಂದ್ರಗಳ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುವುದು.
  4. ಬೀದರ್‌ ಜಿಲ್ಲೆಯಲ್ಲಿ ಕೃಷ್ಣಮೃಗಗಳು (Blackbuck) ಹೆಚ್ಚಾಗಿ ಕಂಡು ಬರುವುದರಿಂದ, ಇವುಗಳ ಸಂರಕ್ಷಣೆಗಾಗಿ ಕೃಷ್ಣಮೃಗ ಸಂರಕ್ಷಣಾ ಮೀಸಲು ಪ್ರದೇಶವನ್ನು ಘೋಷಿಸಲಾಗುವುದು. ಈ ಸಂರಕ್ಷಣಾ ಮೀಸಲು ಪ್ರದೇಶದ ರಕ್ಷಣೆ ಮತ್ತು ನಿರ್ವಹಣೆಗಾಗಿ ಎರಡು ಕೋಟಿ ರೂ. ಮೀಸಲಿಡಲಾಗಿದೆ.
  5. ರಾಷ್ಟ್ರೀಯ ಅರಣ್ಯ ನೀತಿಯ ಪ್ರಕಾರ ಭೌಗೋಳಿಕ ವಿಸ್ತೀರ್ಣದ
    ಶೇ.33 ರಷ್ಟು ಭಾಗ ಅರಣ್ಯ ಪ್ರದೇಶದಿಂದ ಆವೃತಗೊಂಡಿರಬೇಕಾಗಿದ್ದು, ಕರ್ನಾಟಕ ರಾಜ್ಯದ ಬಯಲುಸೀಮೆ ಪ್ರದೇಶದ 17 ಜಿಲ್ಲೆಗಳಲ್ಲಿ ಶೇ.10 ಕ್ಕಿಂತ ಕಡಿಮೆ ಅರಣ್ಯ ಪ್ರದೇಶ ಇರುತ್ತದೆ. ಹಾಗಾಗಿ ಈ ಜಿಲ್ಲೆಗಳಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ʻಹಸಿರೀಕರಣ ಕಾರ್ಯಕ್ರಮʼ ವನ್ನು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ ಐದು ವರ್ಷಗಳ ಅವಧಿಯಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
  6. ಇಂಗಾಲದ ಹೆಜ್ಜೆಗುರುತನ್ನು (Carbon Footprint) ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರದ ಎಲ್ಲಾ ಪ್ರಮುಖ ಯೋಜನೆಗಳಲ್ಲಿ ಪರಿಸರ ಹೊಂದಾಣಿಕೆಯನ್ನು ಮಾಡುವ ಕುರಿತು ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ (EMPRI) ವತಿಯಿಂದ ಮೌಲ್ಯಮಾಪನ ಮಾಡಲಾಗುವುದು.
  7. ಡಿಕಾರ್ಬೊನೈಸೇಷನ್ನಿನ (Decarbonization) ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಮತ್ತು ಹಸಿರು ಬೆಳವಣಿಗೆಯನ್ನು ಉತ್ತೇಜಿಸಲು, ರಾಜ್ಯದಲ್ಲಿನ ಸಂಸ್ಥೆಗಳಿಂದ ಸ್ವಯಂಪ್ರೇರಿತವಾಗಿ Green House Gases (GHG) ಹೊರಸೂಸುವಿಕೆಯನ್ನು ಬಹಿರಂಗಪಡಿಸುವ ಯೋಜನೆಯನ್ನು ಪ್ರಾರಂಭಿಸಲಾಗುವುದು.
PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು