ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಧಿಕಾರಿಗಳ ವಿರುದ್ಧ ವೈಯಕ್ತಿಕ ಆರೋಪ, ತೇಜೋವಧೆ ಒಳ್ಳಯದಲ್ಲ – ಮರಿ ಜೋಸೆಫ್ 

ಅಧಿಕಾರಿಗಳ ವಿರುದ್ಧ ವೈಯಕ್ತಿಕ ಆರೋಪ, ತೇಜೋವಧೆ ಒಳ್ಳಯದಲ್ಲ – ಮರಿ ಜೋಸೆಫ್ 

ಹಾಸನ: ಜಿಲ್ಲೆಗೆ ಆಗಮಿಸುವ ಜಿಲ್ಲಾಧಿಕಾರಿ ಸೇರಿದಂತೆ ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಅಧಿಕಾರಿಗಳ ವಿರುದ್ಧ ವೈಯಕ್ತಿಕ ಆರೋಪ, ನಿಂದನೆ ಹಾಗೂ ತೇಜೋವಧೆ ಮಾಡುವಂತಹ ಬೆಳವಣಿಗೆಗಳು ನಡೆಯಬಾರದು ಎಂದು ದಲಿತ ಸಂಘಟನೆಗಳ ಮುಖಂಡರಾದ ಮರಿ ಜೋಸೆಫ್ ಅವರು ಒತ್ತಾಯಿಸಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಜಿಲ್ಲಾಧಿಕಾರಿ ಅಥವಾ ಯಾವುದೇ ಅಧಿಕಾರಿಗಳ ಕಾರ್ಯವೈಖರಿ ಕುರಿತು ಆಕ್ಷೇಪಗಳಿದ್ದರೆ ದಾಖಲೆ ಹಾಗೂ ಸಾಕ್ಷ್ಯಗಳೊಂದಿಗೆ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ವೈಯಕ್ತಿಕವಾಗಿ ಅವಮಾನಿಸುವ ರೀತಿಯಲ್ಲಿ ಮಾತನಾಡುವುದು ಅಥವಾ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡುವುದು ಸರಿಯಲ್ಲ ಎಂದರು. ಜಿಲ್ಲೆಗೆ ಈ ಹಿಂದೆ ಹಲವು ಜಿಲ್ಲಾಧಿಕಾರಿಗಳು ಬಂದು ಕರ್ತವ್ಯ ನಿರ್ವಹಿಸಿದ್ದಾರೆ. ಪ್ರತಿಯೊಬ್ಬ ಅಧಿಕಾರಿಗೂ ತಮ್ಮ ಹುದ್ದೆಯ ಜವಾಬ್ದಾರಿ ಹಾಗೂ ಆಡಳಿತ ನಡೆಸುವ ಅನುಭವವಿರುತ್ತದೆ. ಹೀಗಾಗಿ ಅಧಿಕಾರಿಗಳು ದಲಿತ ಸಮುದಾಯಕ್ಕೆ ಸೇರಿದವರು ಅಥವಾ ಕೆಳಮಟ್ಟದಿಂದ ಬಂದವರು ಎಂಬ ಕಾರಣಕ್ಕೆ ಅವರನ್ನು ವಿಭಿನ್ನವಾಗಿ ನೋಡುವ ಮನಸ್ಥಿತಿ ಬೆಳೆಯಬಾರದು. ಜಾತಿ ಆಧಾರದ ಮೇಲೆ ಅಧಿಕಾರಿಗಳನ್ನು ಅವಮಾನಿಸುವ ಪ್ರವೃತ್ತಿ ದೂರವಾಗಬೇಕು ಎಂದು ಹೇಳಿದರು.

ಪ್ರಸ್ತುತ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರ ಅವಧಿಯಲ್ಲಿ ದಲಿತ ಸಮುದಾಯಕ್ಕೆ ಸಂಬಂಧಿಸಿದ ಹಲವು ಬೇಡಿಕೆಗಳಿಗೆ ಸ್ಪಂದನೆ ದೊರೆತಿದೆ ಎಂದು ಮುಖಂಡರು ತಿಳಿಸಿದರು. ಕೃಷ್ಣರಾಜ ಒಡೆಯರ್–ಡಾ. ಬಿ.ಆರ್. ಅಂಬೇಡ್ಕರ್ ಸ್ಮಾರಕಕ್ಕೆ ಭೂಮಿ ಒದಗಿಸುವ ಪ್ರಕ್ರಿಯೆ, ಬೌದ್ಧ ಧರ್ಮೀಯರಿಗೆ ನಿವೇಶನ ಕಲ್ಪಿಸುವ ನಿಟ್ಟಿನಲ್ಲಿ ಲೇಔಟ್ ಅಭಿವೃದ್ಧಿ ಸೇರಿದಂತೆ ಹಲವು ವಿಚಾರಗಳಲ್ಲಿ ಆಡಳಿತ ಸ್ಪಂದಿಸಿದೆ ಎಂದು ಹೇಳಿದರು.
ಜಿಲ್ಲಾ ಮಟ್ಟದಲ್ಲಿ ದಲಿತ ಸಮುದಾಯದ ಸಮಸ್ಯೆಗಳನ್ನು ಚರ್ಚಿಸಿ ಪರಿಹರಿಸಲು ನಡೆಯುವ ಸಭೆಗಳು ಹಾಗೂ ಸಮಿತಿಗಳ ಮೂಲಕವೂ ಹಲವು ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ. ಇಂತಹ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನು ವಿರೋಧಿಸುವ ಬದಲು, ಉತ್ತಮ ಕೆಲಸ ಮಾಡಲು ಪ್ರೋತ್ಸಾಹಿಸಬೇಕು. ಅಧಿಕಾರಿಗಳ ಮೇಲೆ ಅನಗತ್ಯ ಒತ್ತಡ ಹೇರಿದರೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು