ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ತೈಲ ಕಂಪನಿಗಳಿಗೆ ಬಾರೀ ಲಾಸ್‌ ನಷ್‌ ತಪ್ಪಿಸಲು – ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ

ತೈಲ ಕಂಪನಿಗಳಿಗೆ ಬಾರೀ ಲಾಸ್‌ ನಷ್‌ ತಪ್ಪಿಸಲು – ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ

ನವದೆಹಲಿ : ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಸಾರಿರುವ ಯುದ್ಧ(Iran-Israel-America War) ಹಾರ್ಮುಜ್ ಜಲಸಂಧಿಯ ದಿಗ್ಬಂಧನ ದಿಂದಾಗಿ ತೈಲ ಬೆಲೆ ಏರಿಕೆಯಾಗಿದೆ. ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್(Petrol and diesel) ದರವನ್ನು ಪ್ರತಿ ಲೀಟರ್‌ಗೆ ಕನಿಷ್ಠ 2.83 ರೂಪಾಯಿ ಹಾಗೂ ಸಿಎನ್‌ಜಿ (CNG) ದರವನ್ನು ಪ್ರತಿ ಕೆಜಿಗೆ 2 ರೂಪಾಯಿ ಹೆಚ್ಚಳ ಮಾಡಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil) ಬೆಲೆಗಳು ಗಗನಕ್ಕೇರಿರುವುದರಿಂದ ದೇಶದ ಸಾರ್ವಜನಿಕ ವಲಯದ ತೈಲ ಮಾರಾಟ ಕಂಪನಿಗಳು (OMCs) ಪ್ರತಿದಿನ ಬರೋಬ್ಬರಿ 1,600 ಕೋಟಿ ರೂಪಾಯಿಗಳ ಭಾರಿ ಆರ್ಥಿಕ ನಷ್ಟವನ್ನು ಅನುಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ತೈಲ ಕಂಪನಿಗಳನ್ನು ದಿವಾಳಿಯಾಗದಂತೆ ರಕ್ಷಿಸಲು ಇಂಧನ ಬೆಲೆಗಳ ಪರಿಷ್ಕರಣೆ ಅತ್ಯಗತ್ಯವಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ಆರ್ಥಿಕ ನಷ್ಟಕ್ಕೆ ಬ್ರೇಕ್: ಪ್ರತಿದಿನ ಅನುಭವಿಸುತ್ತಿದ್ದ 1,600 ಕೋಟಿ ರೂಪಾಯಿಗಳ ಬೃಹತ್ ನಷ್ಟದ ಪ್ರಮಾಣವನ್ನು ತಗ್ಗಿಸಲು ಮತ್ತು ಕಂಪನಿಗಳ ದೈನಂದಿನ ಆರ್ಥಿಕ ಸಮತೋಲನವನ್ನು ಕಾಯ್ದುಕೊಳ್ಳಲು ಈ ಬೆಲೆ ಏರಿಕೆ ನೇರವಾಗಿ ನೆರವಾಗಲಿದೆ.

ಕಳೆದ ಒಂದು ತಿಂಗಳಿನಿಂದ ತೈಲ ಕಂಪನಿಗಳ ಉತ್ಪಾದನಾ ವೆಚ್ಚಗಳು ಮಿತಿಮೀರಿ ಹೆಚ್ಚಾಗಿವೆ. ಕೇಂದ್ರ ಸರ್ಕಾರವು ಅಬಕಾರಿ ಸುಂಕ ಕಡಿತಗೊಳಿಸಿದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿರಲಿಲ್ಲ. ಈಗಿನ ಚಿಲ್ಲರೆ ದರ ಏರಿಕೆಯು ಈ ಹೆಚ್ಚುವರಿ ವೆಚ್ಚವನ್ನು ಸರಿದೂಗಿಸಲಿದೆ.

ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎರಡರ ಬೆಲೆಯೂ ಸಾರಾಸಗಟಾಗಿ ಪ್ರತಿ ಲೀಟರ್‌ಗೆ 3.00 ರೂಪಾಯಿ ಭಾರಿ ಏರಿಕೆ ಕಂಡಿದೆ. ದೇಶದಲ್ಲೇ ಅತ್ಯಂತ ತೀವ್ರವಾದ ಬೆಲೆ ಏರಿಕೆ ಕೋಲ್ಕತ್ತಾದಲ್ಲಿ ದಾಖಲಾಗಿದ್ದು, ಇಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 3.29 ರೂಪಾಯಿ ಹೆಚ್ಚಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಡೀಸೆಲ್ ದರ ಪ್ರತಿ ಲೀಟರ್‌ಗೆ ಬರೋಬ್ಬರಿ 3.11 ರೂಪಾಯಿ ಏರಿಕೆಯಾಗಿದೆ.

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಉದ್ವಿಗ್ನತೆಯಿಂದಾಗಿ ತೈಲ ಉತ್ಪಾದನಾ ವೆಚ್ಚಗಳು ನಿಯಂತ್ರಣ ಮೀರಿ ಹೆಚ್ಚಾಗುತ್ತಿದ್ದು, ಇದು ದೇಶೀಯ ಮಾರುಕಟ್ಟೆಯ ಮೇಲೆಯೂ ತೀವ್ರ ಒತ್ತಡ ಸೃಷ್ಟಿಸಿದೆ.

ಪಶ್ಚಿಮ ಏಷ್ಯಾದ ಮಹಾಯುದ್ಧ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ನಡೆಯುವ ಇಂಧನ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿರುವುದು ಈ ಬೆಲೆ ಏರಿಕೆಗೆ ನೇರ ಕಾರಣವಾಗಿದೆ. ತೈಲ ಕಂಪನಿಗಳು ಅನುಭವಿಸುತ್ತಿದ್ದ ಭಾರಿ ಆರ್ಥಿಕ ಹೊರೆಯನ್ನು ತಗ್ಗಿಸಲು ಈ ತೀವ್ರ ದರ ಏರಿಕೆ ಅನಿವಾರ್ಯವಾಗಿದೆ ಎಂದು ಮೂಲಗಳು ತಿಳಿಸಿವೆ. ಸಿಎನ್‌ಜಿ ದರವೂ ಕೆಜಿಗೆ 2 ರೂಪಾಯಿ ಹೆಚ್ಚಳವಾಗಿರುವುದರಿಂದ ಸಾರಿಗೆ ವೆಚ್ಚಗಳು ದುಬಾರಿಯಾಗಲಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯ ಭೀತಿ ಎದುರಾಗಿದೆ.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು