ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ಮೀಡಿಯಾ

• 1 ನಿಮಿಷದ ಓದು

ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮಂಗಳೂರಿನ ಕುಡುಪುವಿನಲ್ಲಿ ಭೀಕರವಾಗಿ ಹತ್ಯೆಯಾದ ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಲಾಗಿದ್ದು, ಪೊಲೀಸರು ಬಂಧಿತರ ವಿವರ ನೀಡಿದ್ದಾರೆ. ಕೊಲೆಯ ಬಳಿಕ ಆರೋಪಿಗಳು ಸ್ವಿಫ್ಟ್ ಕಾರಿನಲ್ಲಿ ಎಸ್ಕೇಪ್ ಆಗಿದ್ದರು. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಕೊಲೆಯಲ್ಲಿ ಭಾಗಿಯಾಗಿದ್ದ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಒಟ್ಟು ಎಂಟು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರದಲ್ಲಿ ಪ್ರಮುಖ ಆರೋಪಿಗಳು ಮುಸ್ಲಿಂ ಧರ್ಮೀಯರೆನ್ನಲಾಗಿದ್ದು ಇವರಿಗೆ ಬಜರಂಗ ದಳದ ಮಾಜಿ ಸದಸ್ಯನೊಬ್ಬನೂ ಸಹಾಯ ಮಾಡಿದ್ದ ಎನ್ನಲಾಗಿದ್ದು ಆತನನ್ನೂ ಬಂಧಿಸಲಾಗಿದೆ.

ಬಂಧಿತ 8 ಆರೋಪಿಗಳ ಪೈಕಿ ಇಬ್ಬರು ಹಿಂದೂಗಳಿದ್ದಾರೆ. ಅವರ ವಿವರನ್ನು ನೀಡಿದ್ದಾರೆ. ಅಬ್ದುಲ್ ಸಫ್ವಾನ್ (29), ನಿಯಾಜ್ (28), ಕಲಂದರ್ ಶಾಫಿ (31), ಮೊಹಮ್ಮದ್ ಮುಝಮ್ಮಿಲ್ (32), ರಂಜಿತ್ (19), ನಾಗರಾಜ್ (20), ಮೊಹಮ್ಮದ್ ರಿಜ್ವಾನ್ ​(28) ಮತ್ತು ಆದಿಲ್ ಮೆಹರೂಫ್ ಬಂಧಿತರು.

ಇತ್ತ ಬಂಧಿತರಲ್ಲಿ ಒಬ್ಬನಾದ ಆದಿಲ್ ಮೆಹರೂಫ್ ಈ ಹಿಂದೆ 2022 ರಲ್ಲಿ ಕೊಲೆಯಾದ ಫಾಸಿಲ್ ನ ಸಹೋದರ ಎನ್ನಲಾಗಿದೆ. ಹಾಗೆಯೇ ಕೊಲೆಗಾರ ತಂಡಕ್ಕೆ 5 ಲಕ್ಷ ಸುಪಾರಿ ನೀಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಮತ್ತೊಬ್ಬ ಆರೋಪಿ ನಿಯಾಝ್ ಸ್ನೇಹಿತರಾದ ನಾಗರಾಜ್ ಮತ್ತು ರಂಜಿತ್ ಸಂಪರ್ಕ ಮಾಡುತ್ತಾರೆ. ಈ ಇಬ್ಬರು ಸಫ್ವಾನ್ ಮನೆಯಲ್ಲಿ ಎರಡು ದಿನಗಳ ಕಾಲ ವಾಸವಿದ್ದರು. ಮೇ 1ರಂದು ಸುಹಾಸ್ ಚಲನವಲನ ಗಮನಿಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದರು.

ನಿನ್ನೆ ಸಂಜೆ ಸುಹಾಸ್ ಶೆಟ್ಟಿ ಅಂತಿಮ ಕ್ರಿಯೆಗಳು ನೆರವೇರಿದೆ. ಈ ವೇಳೆ ಸಾಕಷ್ಟು ಜನ ಸೇರಿದ್ದರು. ನಿನ್ನೆ ದಕ್ಷಿಣ ಕನ್ನಡ ಬಂದ್ ಘೋಷಿಸಲಾಗಿತ್ತು. ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ಮೇ 5 ರವರೆಗೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು