ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್ ಕಡೆಯಿಂದ ಸ್ವ ಇಚ್ಚಾ ಹೇಳಿಕೆ ದಾಖಲಿಸಿದ ಪೊಲೀಸರು

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್ ಕಡೆಯಿಂದ ಸ್ವ ಇಚ್ಚಾ ಹೇಳಿಕೆ ದಾಖಲಿಸಿದ ಪೊಲೀಸರು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ವಾರಕ್ಕೂ ಹೆಚ್ಚು ದಿನಗಳ ಕಾರ್ಯಾಚರಣೆ, ಸಾಕ್ಷ್ಯ ಸಂಗ್ರಹ, ಆರೋಪಿಗಳ ಮಾಹಿತಿ ಕಲೆ ಹಾಕಿದ ನಂತರ ಈಗ ಪೊಲೀಸರು ಆರೋಪಿ ದರ್ಶನ್ ಕಡೆಯಿಂದ ಸ್ವ ಇಚ್ಚಾ ಹೇಳಿಕೆ ದಾಖಲಿಸಿದ್ದಾರೆ. ಅದರಂತೆ ಆರೋಪಿ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆಯಲ್ಲಿ ತಮ್ಮ ಪಾತ್ರದ ಬಗ್ಗೆ ಇಂಚಿಂಚೂ ಮಾಹಿತಿಯನ್ನು ನೀಡಿದ್ದಾರೆ.

ಕಳೆದ ಎಂಟು ದಿನದಿಂದಲೂ ದರ್ಶನ್ ಕಾಮಾಕ್ಷಿಪಾಳ್ಯ ಪೊಲೀಸರ ವಶದಲ್ಲಿದ್ದಾರೆ. ಸತತ ವಿಚಾರಣೆ, ತನಿಖೆಗಳು ನಡೆಯುತ್ತಲೇ ಇವೆ. ಇದರ ನಡುವೆ ದರ್ಶನ್ ಪೊಲೀಸರ ಮುಂಚೆ ಸ್ವ-ಇಚ್ಛಾ ಹೇಳಿಕೆ ದಾಖಲಿಸಿದ್ದು, ರೇಣುಕಾ ಸ್ವಾಮಿ ಕೊಲೆಯಲ್ಲಿ ತಮ್ಮ ಪಾತ್ರ ಏನೆಂಬುದನ್ನು ಪೊಲೀಸರಿಗೆ ವಿವರಿಸಿದ್ದಾರೆ.

ರೇಣುಕಾ ಸ್ವಾಮಿ ಕೊಲೆಯಲ್ಲಿ ತಮ್ಮ ಪಾತ್ರದಿಂದ ಹಿಡಿದು, ಹಲ್ಲೆ ಮಾಡಿದ್ದು, ಹಲ್ಲೆ ಮಾಡಿದ ರೀತಿ, ಪ್ರಕರಣದಲ್ಲಿ ತಮ್ಮ ಹೆಸರು ಮುನ್ನೆಲೆಗೆ ಬರದಂತೆ ತಡೆಯಲು ಮಾಡಿದ್ದ ಪ್ರಯತ್ನದ ಬಗ್ಗೆಯೂ ದರ್ಶನ್ ವಿವರಿಸಿದ ಬಗ್ಗೆ ಪೊಲೀಸ್ ಮೂಲಗಳು ಖಚಿತಪಡಿಸಿವೆ.

ಕೊಲೆ ಪ್ರಕರಣವನ್ನು ಮುಚ್ಚಿಹಾಕಲು ಪ್ರದೋಶ್​ಗೆ 30 ಲಕ್ಷ ರೂಪಾಯಿ ಹಣ ನೀಡಿದರ ಬಗ್ಗೆಯೂ ಮಾಹಿತಿ ನೀಡಿರುವ ದರ್ಶನ್, ಆ ನಂತರ ಪ್ರಕರಣದಿಂದ ಹೊರಬರಲು ಯಾವ್ಯಾವ ಪ್ರಭಾವಿಗಳನ್ನು ಸಂಪರ್ಕಿಸಿದ ಬಗ್ಗೆಯೂ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಸ್ವ-ಇಚ್ಛೆ ಹೇಳಿಕೆ ದಾಖಲಿಸಿದಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಆಗಬಹುದೆಂಬ ನಿರೀಕ್ಷೆ ಹಾಗೂ ಈಗಾಗಲೇ ಪೊಲೀಸ್ ಕಸ್ಟಡಿ ತೀರಾ ಹಿಂಸೆಯ ವಾತಾವರಣ ಸೃಷ್ಟಿಯಾದ ಕಾರಣ ಆದಷ್ಟು ಬೇಗ ಈ ಒತ್ತಡದಿಂದ ದೂರವಾಗುವ ದೃಷ್ಟಿಯಿಂದ ದರ್ಶನ್ ಹೀಗೆ ಮಾಡಿರಬಹುದು ಎನ್ನಲಾಗುತ್ತಿದೆ.

ದರ್ಶನ್ ಹೇಳಿಕೆಯ ಅನುಸಾರ ಪೊಲೀಸರು ಸಾಕ್ಷ್ಯಗಳನ್ನಷ್ಟೆ ಒಂದು ಮಾಡಬೇಕಿದೆ. ಈಗಾಗಲೇ ಬಹುತೇಕ ಸಾಕ್ಷ್ಯಗಳನ್ನು ಕಲೆ ಹಾಕಿರುವ ಪೊಲೀಸರು ಕೆಲವೇ ದಿನಗಳಲ್ಲಿ ಪ್ರಕರಣಕ್ಕೆ ಮುಕ್ತಿ ಸಿಕ್ಕಿ, ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗುವುದು ಎನ್ನಲಾಗಿದೆ.

ಸ್ವ ಇಚ್ಚಾ ಹೇಳಿಕೆಯಿಂದ ದರ್ಶನ್ ಪೊಲೀಸ್ ಕಸ್ಟಡಿ ಅಂತ್ಯವಾಗುವ ಸಾಧ್ಯತೆ ಇದ್ದು, ಜೂನ್ 20 ಕ್ಕೆ ದರ್ಶನ್​ ಹಾಗೂ ಇತರೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು, ನಾಳೆ ನ್ಯಾಯಾಲಯದ ಆದೇಶದಂತೆ ದರ್ಶನ್ ಹಾಗೂ ಇತರ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಳಪಡಬೇಕಾಗಬಹುದು ಎನ್ನಲಾಗಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು