ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

APMCಗೆ CM ಡಿಕೆಶಿ ಭೇಟಿ ಬೆನ್ನಲ್ಲೇ ಫೀಲ್ಡಿಗಿಳಿದ ಪೊಲೀಸರು – 19 ಬಾಲ ಕಾರ್ಮಿಕರ ರಕ್ಷಣೆ

APMCಗೆ CM ಡಿಕೆಶಿ ಭೇಟಿ ಬೆನ್ನಲ್ಲೇ ಫೀಲ್ಡಿಗಿಳಿದ ಪೊಲೀಸರು – 19 ಬಾಲ ಕಾರ್ಮಿಕರ ರಕ್ಷಣೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಬೆಳಗ್ಗೆ ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ, ರೈತರು, ವ್ಯಾಪಾರಿಗಳು ಹಾಗೂ ಕಾರ್ಮಿಕರೊಂದಿಗೆ ನೇರ ಮಾತುಕತೆ ನಡೆಸಿದ್ದರು. ಈ ವೇಳೆ ಹಲವು ಅಂಗಡಿಗಳಲ್ಲಿ ಬಾಲಕರನ್ನು ಕಾರ್ಮಿಕರಾಗಿ ಬಳಸಲಾಗುತ್ತಿದೆ ಎಂಬ ದೂರು ಕೇಳಿಬಂದಿತ್ತು.ಸಿಎಂ ಭೇಟಿ ಬೆನ್ನಲ್ಲೇ ಯಶವಂತಪುರ ಎಪಿಎಂಸಿ ಮಾರುಕಟ್ಟೆ ಮೇಲೆ ದಾಳಿ ನಡೆಸಿದ ಪೊಲೀಸರು, 19 ಅಪ್ರಾಪ್ತರನ್ನು ರಕ್ಷಿಸಿದ್ದಾರೆ ಮತ್ತು ನಾಲ್ವರು ಅಂಗಡಿ ಮಾಲೀಕರನ್ನು ಬಂಧಿಸಿದ್ದಾರೆ. ಅಕ್ರಮವಾಗಿ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರು ಮುಖ್ಯಮಂತ್ರಿಗಳಿಗೆ ದೂರು ನೀಡಿದ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹಾಗೂ ಉಪ ಪೊಲೀಸ್ ಆಯುಕ್ತ(ಉತ್ತರ)ರ ಮೇಲ್ವಿಚಾರಣೆಯಲ್ಲಿ ಐದು ವಿಶೇಷ ತಂಡಗಳು ಯಶವಂತಪುರ ಎಪಿಎಂಸಿ ಮಾರುಕಟ್ಟೆ ಮೇಲೆ ದಾಳಿ ನಡೆಸಿವೆ.ಎಸಿಪಿಗಳು, ಇನ್ಸ್‌ಪೆಕ್ಟರ್‌ಗಳು ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ತಂಡಗಳು ಇಂದು ಮಾರುಕಟ್ಟೆಯಾದ್ಯಂತ ವ್ಯಾಪಕ ದಾಳಿ ನಡೆಸಿ 19 ಅಪ್ರಾಪ್ತ ವಯಸ್ಕರನ್ನು ರಕ್ಷಿಸಿವೆ. ಇವರಲ್ಲಿ 12 ವರ್ಷದ ಬಾಲಕಿ ಸೇರಿದಂತೆ ಹದಿಮೂರು ಮಕ್ಕಳು ಬಿಹಾರದವರು, ಉಳಿದವರು ಪಶ್ಚಿಮ ಬಂಗಾಳ, ಉತ್ತರಪ್ರದೇಶ, ರಾಜಸ್ಥಾನ ಮತ್ತು ಕರ್ನಾಟಕ ಮೂಲದವರು ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.ಎಪಿಎಂಸಿ ಯಾರ್ಡ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಲ್ವರು ಅಂಗಡಿ ಮಾಲೀಕರಾದ ಶಾಹಿದ್, ಅಮೀರ್, ಪ್ರಕಾಶ್ ಮತ್ತು ಸೈಫ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಲೋಡಿಂಗ್, ಅನ್ ಲೋಡಿಂಗ್ ಮತ್ತು ಟ್ರಕ್ ಚಲನೆಯಂತಹ ಅಪಾಯಕಾರಿ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಲಾಗಿದೆ. ಇದು ತುಂಬಾ ಗಂಭೀರ ಸಮಸ್ಯೆಯಾಗಿದೆ. ಈ ಸಂಬಂಧ ಪ್ರಕರಣಗಳನ್ನು ದಾಖಲಿಸಲಾಗಿದೆ, ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಹೆಚ್ಚುವರಿ ಶಂಕಿತರನ್ನು ಗುರುತಿಸಲು ಹೆಚ್ಚಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ತಿಳಿಸಿದ್ದಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು