ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಹತ್ರಾಸ್ ದುರಂತ : ಹೆಣಗಳ ರಾಶಿ ನೋಡಿ ಪೊಲೀಸ್‌ ಗೆ ಹೃದಯಾಘಾತ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಹತ್ರಾಸ್ ದುರಂತ : ಹೆಣಗಳ ರಾಶಿ ನೋಡಿ ಪೊಲೀಸ್‌ ಗೆ ಹೃದಯಾಘಾತ

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ನಿನ್ನೆ ನಡೆದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿದೆ. ಈ ನಡುವೆ ಹೆಣಗಳ ರಾಶಿ ನೋಡಿ ಪೊಲೀಸ್‌ ಕಾನ್ಸ್‌ಟೇಬಲ್‌ ಒಬ್ಬರು ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಹತ್ರಾಸ್ ನ ಪುಲ್ರೈ ಗ್ರಾಮದಲ್ಲಿ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಅಧಿಕ ಜನರು ಸೇರಿದ್ದರು. ಆರಂಭದಲ್ಲಿ ಸರಾಗವಾಗಿಯೇ ನಡೆದಿದ್ದ ಕಾರ್ಯಕ್ರಮ ಕೊನೇ ಹಂತದಲ್ಲಿ ದುರಂತಕ್ಕೆ ಕಾರಣವಾಗಿದೆ.

ಭೋಲೆ ಬಾಬಾ ಅವರ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಸತ್ಸಂಗದ ಪ್ರಚಾರಕರು ವೇದಿಕೆಯಿಂದ ಕೆಳಗಿಳಿಯುತ್ತಿದ್ದಂತೆಯೇ ಬಾಬಾ ಅವರಿಗೆ ನಮಸ್ಕರಿಸಲೆಂದು ಕೆಲ ಭಕ್ತರು ಪ್ರಯತ್ನಿಸಿದ್ದಾರೆ. ಇದೇ ವೇಳೆ ಕೆಲ ಭಕ್ತರ ಸಮೂಹ ಬಾಬಾ ಅವರನ್ನು ಸ್ಪರ್ಶಿಸಲು ಅವರತ್ತ ನುಗ್ಗಿದೆ. ಈ ವೇಳೆ ನೂಕು ನುಗ್ಗಲು ಆರಂಭವಾಗಿದೆ.

ಸ್ವಯಂ ಸೇವಕರು ಭಕ್ತರನ್ನು ತಡೆಯಲು ಯತ್ನಿಸಿದ್ದಾರೆ ಆದರೆ ಅಪಾರ ಜನಸಂಖ್ಯೆ ಇದ್ದುದರಿಂದ ಸಾಧ್ಯವಾಗಿಲ್ಲ. ಹಲವು ಭಕ್ತರು ಕೆಳಗೆ ಬಿದ್ದಿದ್ದಾರೆ. ಮೇಲೇಳಲು ಸಾಧ್ಯವಾಗದೇ ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೆ.

ನಿನ್ನೆಯಿಂದ ಇಂದಿನ ವರೆಗೂ ಸಾವನ್ನಪ್ಪಿದವರ ಸಂಖ್ಯೆ 116 ದಾಟಿದ್ದು, ಗಂಭೀರ ಗಾಯವಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಹತ್ರಾಸ್ ಜಿಲ್ಲಾಸ್ಪತ್ರೆಯಲ್ಲಿ ರಆಶಿ ಬಿದ್ದ ಹೆಣಗಳನ್ನು ನೋಡಿ, ಪೊಲೀಸ್ ಕಾನಸ್ಟೇಬಲ್ ಮೃತಪಟ್ಟಿದ್ದಾರೆ.

ರಜನೀಶ್‌ ಎಂಬ ಪೊಲೀಸ್‌ ಕಾನ್ಸ್‌ಟೇಬಲ್‌ ಹೃಯಘಾತಕ್ಕೆ ಬಲಿಯಾದವರು. ಇವರನ್ನು ಇಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ಭದ್ರತೆಗೆ ನಿಯೋಜಿಸಲಾಗಿತ್ತು. ಆಸ್ಪತ್ರೆಯಲ್ಲಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳ ರಾಶಿ ಹಾಕಲಾಗಿತ್ತು. ಅದನ್ನು ನೋಡುತ್ತಿದ್ದಂತೆ ರಜನೀಶ್‌ಗೆ ಹೃದಯಾಘಾತವಾಗಿದ್ದು, ಅವರು ಅಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು