BIG BREAKING : ಮ್ಯೂನಿಚ್ ಏರ್ಪೋರ್ಟ್ ನಲ್ಲಿ ಚೆಕ್ ಇನ್ ಆದ ಪ್ರಜ್ವಲ್ ರೇವಣ್ಣ, ಬಂಧನಕ್ಕೆ ಕ್ಷಣಗಣನೆ
ಲಿಂಕ್ ನಕಲಿಸಲಾಗಿದೆ ✓
ಹಾಸನ ಪೆನ್ ಡ್ರೈವ್ ವೈರಲ್ ಕೇಸ್, ಅಶ್ಲೀಲ ವೀಡಿಯೋ ಕೇಸ್, ಮಹಿಳೆ ಅಪಹರಣ ಪ್ರಕರಣಗಳನ್ನು ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್ ಏರ್ಪೋರ್ಟ್ ನಲ್ಲಿ ಚೆಕ್ ಇನ್ ಆದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮೇ 31 ಕ್ಕೆ ಬೆಂಗಳೂರು ಬರುತ್ತೇನೆ ಎಂಬ ವಿಡಿಯೋ ಸಂದೇಶದಂತೆ ಪ್ರಜ್ವಲ್ ರೇವಣ್ಣ ಭಾರತಕ್ಕೆ ಹಿಂದಿರುಗುತ್ತಿರುವುದು ಬಹುತೇಕ ಖಚಿತ ಎನ್ನುವಂತಾಗಿದೆ.
ಈ ನಡುವೆ ಮೂರೂ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ವಿದೇಶದಿಂದಲೇ ನಿನ್ನೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಾಳೆ ನಡೆಸಲಿದೆ.
ಜರ್ಮನಿಯ ಮ್ಯೂನಿಚ್ ನಿಂದ ಲುಫ್ತಾ ಏರ್ ಲೈನ್ಸ್ ವಿಮಾನದ ಮೂಲಕ ಬೆಂಗಳೂರಿಗೆ ಇಂದೇ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸಲಿದ್ದಾರೆ. ಅವರನ್ನು ಎಸ್ಐಟಿ ಪೊಲೀಸರು ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಏರ್ ಪೋರ್ಟ್ ನಲ್ಲೇ ಬಂದಿಸೋ ಸಾಧ್ಯತೆ ಇದೆ.
Peepal Media Desk
Peepal Media · ಬ್ರೇಕಿಂಗ್ ಸುದ್ದಿ ವಿಭಾಗ