ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಅಧಿಕಾರಿಗಳ ಮೇಲೆ ಒತ್ತಡ, ಆತ್ಮಹತ್ಯೆ ಆದರೆ ಡಿಸಿ ಹೊಣೆ – ಎಚ್.ಡಿ.ರೇವಣ್ಣ

ಅಧಿಕಾರಿಗಳ ಮೇಲೆ ಒತ್ತಡ, ಆತ್ಮಹತ್ಯೆ ಆದರೆ ಡಿಸಿ ಹೊಣೆ – ಎಚ್.ಡಿ.ರೇವಣ್ಣ

ಹಾಸನ :  ಮಾಜಿ ಸಚಿವ ಹಾಗೂ ಹೋಳೇನರಸೀಪುರ ಶಾಸಕ ಎಚ್.ಡಿ.ರೇವಣ್ಣ ಅವರು ಸೋಮವಾರ  ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು. ಭೂಸ್ವಾಧೀನ ಪರಿಹಾರ ವಿತರಣೆಯಲ್ಲಿನ ಗೊಂದಲ, ರೈತರ ಅರ್ಜಿಗಳನ್ನು ತೀರ್ಮಾನಿಸುವಲ್ಲಿ ವಿಳಂಬ ಉಂಟಾಗುತ್ತಿದೆ  ಹಾಗೂ ತಮ್ಮ ಕೈಕೆಳಗಿನ ಅಧಿಕಾರಿಗಳ ಮೇಲೆ ಡಿಸಿ ಒತ್ತಡ ಹೇರುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ರೇವಣ್ಣ ಅವರು ಕಾಚೇನಹಳ್ಳಿ ಏತ ನೀರಾವರಿ ಯೋಜನೆಯ ಪ್ರಗತಿಯನ್ನು ಪ್ರಸ್ತಾಪಿಸಿ, “ಈ ಯೋಜನೆಯ ಮೊದಲ ಮತ್ತು ಎರಡನೇ ಹಂತಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ 165 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದರು. 2019ರಲ್ಲಿ ಆಲಗೋಡನಹಳ್ಳಿ ಲಿಫ್ಟ್ ಇರಿಗೇಷನ್ ಮೂಲಕ 26 ಕೆರೆಗಳನ್ನು ತುಂಬಿಸಲು 47 ಕೋಟಿ, ಶಂಭುಗೌಡನ ಕೆರೆಗೆ 21 ಕೋಟಿ ಹಾಗೂ ಒಂಟಿಪುರದಿಂದ ಚಾಕೇನಹಳ್ಳಿ ಡ್ಯಾಂ ನಿರ್ಮಾಣಕ್ಕೆ 22 ಕೋಟಿ ರೂಪಾಯಿ ನೀಡಲಾಗಿದೆ. ಆ ಹಣ ಬಿಡುಗಡೆಗೊಂಡು ಆರು ವರ್ಷವಾದರೂ ಯೋಜನೆ ಪೂರ್ಣಗೊಳ್ಳುವ ದಾರಿ ಕಂಡಿಲ್ಲ. ಕೆಲವರು ಬಂದು ಉದ್ಘಾಟನೆ ಮಾಡಿ ಮಾತಾಡಿ ಹೋದಷ್ಟೇ ಕೆಲಸವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪರಿಹಾರ ನೀಡದ ಜವಾಬ್ದಾರಿ ಜಿಲ್ಲಾಡಳಿತದ ಮೇಲಿದೆ

1986 ರಲ್ಲೇ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ನಡೆದಿದೆ ಎಂಬುದನ್ನು ಉಲ್ಲೇಖಿಸಿ, “ಭೂಮಿ ಕಳೆದುಕೊಂಡ ರೈತರಿಗೆ ಇಂದಿಗೂ ಪರಿಹಾರ ಹಣ ನೀಡಿಲ್ಲ. ಸರ್ಕಾರದ ಹಣ ಜಿಲ್ಲಾಧಿಕಾರಿ ಖಾತೆಗೆ ಬಂದಿದೆ. ಆದರೆ ರೈತರ ಅರ್ಜಿಗಳನ್ನು ಬಗೆಹರಿಸದೇ ಎಸ್‌ಎಲ್‌ಓ ಕಚೇರಿಗೆ ಅಲೆದಾಡಿಸುತ್ತಿದ್ದಾರೆ. ಎಸ್‌ಎಲ್‌ಓ ಕಚೇರಿ ಜಿಲ್ಲಾಧಿಕಾರಿ ಅಧೀನದಲ್ಲಿರುವುದರಿಂದ ವಾರಕ್ಕೊಮ್ಮೆ ಸಭೆ ನಡೆಸಿ ಹಳೆಯ ಅರ್ಜಿಗಳನ್ನು ತ್ವರಿತವಾಗಿ ಬಗೆಹರಿಸಬೇಕು” ಎಂದು ಜಿಲ್ಲಾಡಳಿತವನ್ನು  ಆಗ್ರಹಿಸಿದರು.

ಅಧಿಕಾರಿಗಳ ಮೇಲೆ ಒತ್ತಡ – ಆತ್ಮಹತ್ಯೆ ಆದರೆ ಡಿಸಿ ಹೊಣೆ :

ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಅವರ ನಡೆ ಬಗ್ಗೆ ಗಂಭೀರ ಆರೋಪ ಹೊರಿಸಿದ ರೇವಣ್ಣ, “ಕೆಲವು ಅಧಿಕಾರಿಗಳು ಅವರ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡರೂ ಜಿಲ್ಲಾಧಿಕಾರಿಗಳೇ ಹೊಣೆಗಾರರು. ಒಬ್ಬ ತಹಸೀಲ್ದಾರ್ ನನ್ನ ಬಳಿ ಬಂದು ‘ಡಿಸಿ ನಮಗೆ ಹೀಗೆ ಬರೆಯಿರಿ ಎಂದು ಹೇಳುತ್ತಾರೆ, ಕೊಡುವ ಕಾಟದಿಂದ ಬದುಕಲು ಕಷ್ಟವಾಗಿದೆ’ ಎಂದು ಮನವಿ ಮಾಡಿದ್ದಾರೆ. ಬೆಳಿಗ್ಗೆ ಎಂಟು ಗಂಟೆಗೆ ಅಧಿಕಾರಿಗಳನ್ನು ಕರೆಸಿ ಮಧ್ಯಾಹ್ನದವರೆಗೂ ಕೆಲಸ ಮಾಡಿಸಿ, ನಂತರ ಬೇರೆ ತಾಲ್ಲೂಕಿಗೆ ಹೋಗುತ್ತಾರೆ. ಇಂತಹ ಕಿರುಕುಳದಿಂದ ಕೆಲ ಅಧಿಕಾರಿಗಳು ಸೂಸೈಡ್ ಮಾಡಿಕೊಳ್ಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದರು.

ಜಿಲ್ಲಾಧಿಕಾರಿಗಳಿಗೆ ರೇವಣ್ಣ ಎಚ್ಚರಿಕೆ

“ನಾನು ಶಾಸಕನಾಗಿಯೂ, ಸಚಿವನಾಗಿಯೂ ಕೆಲಸ ಮಾಡಿದ್ದೇನೆ. ಜಿಲ್ಲಾಧಿಕಾರಿಗಳೇ, ನಿಮ್ಮ ನಡವಳಿಕೆ ತಿದ್ದುಕೊಳ್ಳಿ. ಕೆಳಮಟ್ಟದ ಅಧಿಕಾರಿಗಳೊಂದಿಗೆ ಗೌರವಯುತವಾಗಿ ವರ್ತಿಸಿ. ನಿಮ್ಮ ಕಚೇರಿಯನ್ನು ಶುದ್ಧೀಕರಣ ಮಾಡಿ” ಎಂದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು