ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶ್ರೀಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ: ಆದಿಚುಂಚನಗಿರಿಗೆ ಇಂದು ಪ್ರಧಾನಿ ಮೋದಿ ಭೇಟಿ

ಶ್ರೀಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ: ಆದಿಚುಂಚನಗಿರಿಗೆ ಇಂದು ಪ್ರಧಾನಿ ಮೋದಿ ಭೇಟಿ

ಸುಮಾರು 1,500 ವರ್ಷಗಳ ಸುದೀರ್ಘ ಐತಿಹಾಸಿಕ ಹಿನ್ನೆಲೆ ಹೊಂದಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಆದಿಚುಂಚನಗಿರಿ ಮಠದಲ್ಲಿ ಇಂದು ಸಂಭ್ರಮದ ವಾತಾವರಣ ನೆಲೆಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು, ದಿವಂಗತ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣಾರ್ಥ ನಿರ್ಮಿಸಲಾದ ಭವ್ಯ ‘ಶ್ರೀಗುರು ಭೈರವೈಕ್ಯ ಮಂದಿರ’ವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಕಾರ್ಯಕ್ರಮದ ವಿವರ
ಪ್ರಧಾನಿ ಮೋದಿ ಅವರು ಬೆಳಿಗ್ಗೆ 10.55ಕ್ಕೆ ತಪೋವನದ ಆವರಣದಲ್ಲಿರುವ ಹೆಲಿಪ್ಯಾಡ್‌ನಲ್ಲಿ ಇಳಿಯಲಿದ್ದಾರೆ. ಬಳಿಕ 11.30ಕ್ಕೆ ಭೈರವೈಕ್ಯ ಮಂದಿರವನ್ನು ವಿಧ್ಯುಕ್ತವಾಗಿ ಉದ್ಘಾಟಿಸಲಿದ್ದಾರೆ. ಮಂದಿರ ಉದ್ಘಾಟನೆಯ ನಂತರ ಅವರು ಶ್ರೀಗಳ ಪಾದುಕೆಗಳಿಗೆ ನಮಸ್ಕರಿಸಿ, ಧ್ಯಾನ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಅನಂತರ ಕಾಲಭೈರವೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಕ್ರೀಡಾಂಗಣದಲ್ಲಿ ನಡೆಯಲಿರುವ ಸಾರ್ವಜನಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

100 ಕೋಟಿ ರೂ. ವೆಚ್ಚದ ಭವ್ಯ ಮಂದಿರ
ಸುಮಾರು 100 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ನಿರ್ಮಿಸಲಾದ ಈ ಮಂದಿರವು ವಾಸ್ತುಶಿಲ್ಪ ವೈಭವದ ಅನನ್ಯ ಮಾದರಿಯಾಗಿ ತಲೆಎತ್ತಿ ನಿಂತಿದೆ. ಒಡಿಶಾದ ಕೊನಾರ್ಕ್ ಸೂರ್ಯ ದೇಗುಲದ ಶೈಲಿಯಲ್ಲಿ ರೂಪಿಸಲಾದ ಈ ಮಂದಿರದಲ್ಲಿ ಹೊಯ್ಸಳ, ಚೋಳ, ಚಾಲುಕ್ಯ ಮತ್ತು ಗಂಗ ವಾಸ್ತುಶಿಲ್ಪ ಶೈಲಿಗಳ ಸುಂದರ ಮಿಶ್ರಣ ಕಾಣಸಿಗುತ್ತದೆ.

26,250 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಿತವಾಗಿರುವ ಈ ಮಂದಿರವು ಉತ್ತರ-ದಕ್ಷಿಣ ದಿಕ್ಕಿನಲ್ಲಿ 175 ಅಡಿ ಹಾಗೂ ಪೂರ್ವ-ಪಶ್ಚಿಮ ದಿಕ್ಕಿನಲ್ಲಿ 150 ಅಡಿ ಉದ್ದವಿದೆ. ಕೆಂಪು ಮತ್ತು ವಿವಿಧ ಬಗೆಯ ಗ್ರಾನೈಟ್ ಶಿಲೆಗಳಿಂದ ನಿರ್ಮಿಸಲಾದ ಮಂದಿರದಲ್ಲಿ 26 ವಿಶಿಷ್ಟ ಕಂಬಗಳಿದ್ದು, ಒಳಭಾಗದಲ್ಲಿ ಚಿನ್ನ ಮತ್ತು ಬೆಳ್ಳಿಯ ಕವಚ ಹೊದಿಕೆಗಳನ್ನು ಬಳಸಲಾಗಿದ್ದು ಮಂದಿರ ಅತ್ಯಂತ ಭವ್ಯವಾಗಿ ಕಂಗೊಳಿಸುತ್ತಿದೆ.

10 ವರ್ಷಗಳ ನಿರಂತರ ಶ್ರಮ
2013ರಲ್ಲಿ ಲಿಂಗೈಕ್ಯರಾದ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಪವಿತ್ರ ಸ್ಮರಣೆಗೆ ಅರ್ಪಿತವಾದ ಈ ಮಂದಿರದ ಶಂಕುಸ್ಥಾಪನೆ 2016ರಲ್ಲಿ ನೆರವೇರಿತ್ತು. ಅಂದಿನಿಂದ ಸುಮಾರು 250ಕ್ಕೂ ಹೆಚ್ಚು ನುರಿತ ಶಿಲ್ಪಿಗಳು ಅವಿರತವಾಗಿ ದುಡಿದು ಈ ಮಹಾನ್ ಕಲಾಕೃತಿಯನ್ನು ಸಾಕಾರಗೊಳಿಸಿದ್ದಾರೆ.

ಬಿಗಿ ಭದ್ರತೆ
ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಎಸ್‌ಪಿಜಿ (SPG) ಪಡೆ ಹಾಗೂ ಜಿಲ್ಲಾಡಳಿತ ಈಗಾಗಲೇ ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದು, ಕ್ಷೇತ್ರದಾದ್ಯಂತ ಸುರಕ್ಷತಾ ಪಡೆಗಳನ್ನು ನಿಯೋಜಿಸಲಾಗಿದೆ. ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸಿದ್ಧತೆಗಳನ್ನು ಖುದ್ದಾಗಿ ಪರಿಶೀಲಿಸಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು