ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರಿಯಾಂಕ್ ಖರ್ಗೆ ಅಮೇರಿಕಾ ಪ್ರವಾಸ ನಿರ್ಬಂಧ ತೆರವುಗೊಳಿಸಿದ ಕೇಂದ್ರ ಸರ್ಕಾರ

ಪ್ರಿಯಾಂಕ್ ಖರ್ಗೆ ಅಮೇರಿಕಾ ಪ್ರವಾಸ ನಿರ್ಬಂಧ ತೆರವುಗೊಳಿಸಿದ ಕೇಂದ್ರ ಸರ್ಕಾರ

ಕರ್ನಾಟಕ ಸರ್ಕಾರದ ಐಟಿಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆಯವರ ಅಮೇರಿಕಾ ಪ್ರವಾಸ ನಿರ್ಬಂಧಿಸಿದ ನಂತರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಬಿದ್ದ ಬೆನ್ನಲ್ಲೇ ನಿರ್ಬಂಧ ತೆರವುಗೊಳಿಸಿ ಆದೇಶ ಹೊರಡಿಸಿದೆ.

ರಾಜ್ಯಕ್ಕೆ ಆದಾಯ ತರುವ ಉದ್ದೇಶದಿಂದ ನಾವು ಅಮೇರಿಕಾ ಪ್ರವಾಸ ಹೊರಟಿದ್ದು, ಆಟ ಆಡಲು ಅಲ್ಲ ಎಂದು ಪ್ರಿಯಾಂಕ್ ಖರ್ಗೆ ಮಾಧ್ಯಮಗಳಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದರು. ಇದರ ಜೊತೆಗೆ ಅಮೇರಿಕಾ ಭೇಟಿ ರಾಜಕೀಯ ಅನುಮತಿ ನಿರಾಕರಿಸಿದ್ದಕ್ಕೆ ಖಾರವಾಗಿಯೇ ಈ ಬೆಳವಣಿಗೆಗೆ ಸ್ಪಷ್ಟನೆ ಕೋರಿ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಗೆ ಪತ್ರ ಬರೆದಿದ್ದರು.

ಇದು ರಾಜ್ಯದ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ. ಮಾತ್ರವಲ್ಲದೆ, ಸಹಕಾರಿ ಒಕ್ಕೂಟ ವ್ಯವಸ್ಥೆಯ ಚೈತನ್ಯವನ್ನು ಸಹ ಕಡೆಗಣಿಸುತ್ತದೆ. ಸಚಿವಾಲಯವು ಆದಷ್ಟು ಶೀಘ್ರವೇ ಸ್ಪಷ್ಟವಾದ ಲಿಖಿತ ಸ್ಪಷ್ಟೀಕರಣವನ್ನು ನೀಡುತ್ತದೆ ಎಂದು ನಾನು ಆಶಿಸುತ್ತೇನೆ ಎಂದು ಕೇಂದ್ರಕ್ಕೆ ಪತ್ರ ಬರೆದಿದ್ದರು. ಇದೀಗ ಪ್ರವಾಸದ ನಿರ್ಬಂಧ ತೆರವು ಮಾಡಿ ಕೇಂದ್ರ ಸರ್ಕಾರ ಮರು ಅದೇಶ ಹೊರಡಿಸಿದೆ.

ನಾನು ಕರ್ತವ್ಯಬದ್ಧನಾಗಿರುವ ನನ್ನ ಕರ್ನಾಟಕದ ಜನತೆ ಕುರಿತಾದ ಹೊಣೆಗಾರಿಕೆಯ ಪ್ರಜ್ಞೆಯೊಂದಿಗೆ ಈ ನಡೆ ಅನುಸರಿಸಿದ್ದೇನೆ. ಈ ಭೇಟಿಯು ಸಹಯೋಗಗಳನ್ನು ಬಲಪಡಿಸುವುದು, ಹೂಡಿಕೆಗಳನ್ನು ಆಕರ್ಷಿಸುವುದು ಮತ್ತು ರಾಜ್ಯಕ್ಕೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿತ್ತು. ಕ್ಯಾಬಿನೆಟ್ ಮಂತ್ರಿ ಹಾಗೂ ವಿಶ್ವದ ಅತಿದೊಡ್ಡ ತಂತ್ರಜ್ಞಾನ ಸಮೂಹಗಳಲ್ಲಿ ಒಂದಾಗಿರುವ ರಾಜ್ಯದ ಸಚಿವರಿಗೆ, ಯಾವುದೇ ವಿವರಣೆಯಿಲ್ಲದೆ ತನ್ನ ಅಧಿಕೃತ ಜವಾಬ್ದಾರಿಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ನಿರಾಕರಿಸುವುದು ಗಂಭೀರ ಕಳವಳಗಳನ್ನು ಹುಟ್ಟುಹಾಕುತ್ತದೆ ಎಂದು ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು