ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರಿಯಾಂಕ ಖರ್ಗೆ ಅಮೇರಿಕಾ ಪ್ರವಾಸಕ್ಕೆ ನಿರಾಕರಣೆ, ಇದು ದಲಿತ ವಿರೋಧಿ ನೀತಿ – DSS

ಪ್ರಿಯಾಂಕ ಖರ್ಗೆ ಅಮೇರಿಕಾ ಪ್ರವಾಸಕ್ಕೆ ನಿರಾಕರಣೆ, ಇದು ದಲಿತ ವಿರೋಧಿ ನೀತಿ – DSS

ಹಾಸನ : ಇಲಾಖೆವತಿಯಿಂದ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೆ ಅಮೇರಿಕಾ ಪ್ರವಾಸಕ್ಕೆ ಹೊರಟಿರುವುದಕ್ಕೆ ಬಿಜೆಪಿ ಮತ್ತು ಕೇಂದ್ರ ಸರಕಾರದವರು ಅನುಮತಿ ನಿರಾಕರಿಸಿರುವುದನ್ನು ಖಂಡಿಸುವುದಾಗಿ ವಕೀಲರಾದ ಬಿ.ಸಿ. ರಾಜೇಶ್ ಸಿಡಿಮಿಡಿಗೊಂಡರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಮೇರಿಕಾದಲ್ಲಿ ನಡೆಯುವ ಕಾನ್ಫರೆನ್ಸ್ ನಲ್ಲಿ ಭಾಗವಹಿಸುವುದರ ಮೂಲಕ ಈ ರಾಜ್ಯಕ್ಕೆ ಬಂಡವಾಳವನ್ನು ಆಕರ್ಷಣೆ ಮಾಡುವ ಉದ್ದೇಶದಲ್ಲಿ ಈರಾಜ್ಯಕ್ಕೆ ಉದ್ಯೋಗ ಸೃಷ್ಠಿ ಮಾಡುವ ನಿಟ್ಟಿನಲ್ಲಿ ಇಲಾಖೆವತಿಯಿಂದ ಸಚಿವೆ ಪ್ರಿಯಾಂಕ ಖರ್ಗೆ ಅವರು ಅಮೇರಿಕ ಪ್ರವಾಸ ಕೈಗೊಳ್ಳುತ್ತಾರೆ. ಅವರು ಮೋಜು, ಮಸ್ತಿ ಮಾಡಲು ಹೊರಟವರಲ್ಲ. ಆದರೇ ಈ ಒಂದು ಕಾರ್ಯ ವೈಖರಿ ಕಂಡು ಬಿಜೆಪಿಯವರು ಈ ಪ್ರವಾಸ ತಪ್ಪಿಸುವ ಏಕ ಉದ್ದೇಶದಲ್ಲಿ ಅವರಿಗೆ ಪ್ರವಾಸದ ಅನುಮತಿ ನಿರಾಕರಿಸಿದ್ದಾರೆ ಎಂದರು. ರಾಜ್ಯದ ಒಳಿತಿಗಾಗಿ ಅಮೆರಿಕಕ್ಕೆ ತೆರಳುತ್ತಿದ್ದರೆ ಹೊರತು ಮಜಾ ಮಾಡಲು ಅಲ್ಲ. ಬಂಡವಾಳ ಹೂಡಿಕೆ ಉದ್ದೇಶದಿಂದ ಸಚಿವರು ಅಲ್ಲಿಗೆ ತೆರಳುತ್ತಿದ್ದರು. ದಲಿತರು ಬೆಳೆಯಬಾರದು ಎನ್ನುವುದೇ ಬಿಜೆಪಿ ಉದ್ದೇಶವಾಗಿದೆ. ಇದರಿಂದ ರಾಜ್ಯದಲ್ಲಿ ಉದ್ಯೋಗ ಸೃಷ್ಠಿ ನಿಂತು ಹೋಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು. ಇದರ ಲಾಸನ್ನು ತಂದು ಕೊಡುವವರು ಯಾರು ಎಂದು ಪ್ರಶ್ನೆ ಮಾಡಿದರು. ಇದು ರಾಜ್ಯಕ್ಕೆ ಮಾಡಿರುವ ಅನ್ಯಾಯ. ಮೋದಿ ಒಬ್ಬರೇ ವಿದೇಶ ಪ್ರವಾಸ ಮಾಡಬೇಕಾ. ಹಿಂದುಳಿದ ವರ್ಗದ ಯಾರೂ ತಮ್ಮ ಪಾಂಡಿತ್ಯ ಪ್ರದರ್ಶಿಸಬಾರದಾ? ತಾವು ಮಾತ್ರ ಶ್ರೇಷ್ಠ ಎಂಬ ಭಾವನೆ ಬಿಜೆಪಿ ಅವರಿಗಿದೆ ಎಂದು ಹೇಳಿದರು.


ದಲಿತ ಹಿರಿಯ ಮುಖಂಡರಾದ ಎಚ್.ಕೆ. ಸಂದೇಶ್ ಮಾತನಾಡುತ್ತಾ, ಮಲ್ಲಿಕಾರ್ಜುನವರು ಎಂದು ಕಪ್ಪು ಕಲೆ ಇಟ್ಟಿಕೊಳ್ಳದೇ ರಾಜ್ಯ ಸಭೆಯ ಬಗ್ಗೆ ಚರ್ಚೆಯನ್ನು ಗಂಬೀರವಾಗಿ ಮಾಡುತ್ತಿದ್ದಾರೆ. ಅವರ ಮಗ ಪ್ರಿಯಾಂಕ ಖರ್ಗೆ ಅವರನ್ನು ಈರೀತಿ ಪ್ರವಾಸ ತಡೆಯುವುದು ಸರಿಯಲ್ಲ. ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಅಮೇರಿಕಾ ಪ್ರವಾಸ ನಿಕಾರಣೆ ಮಾಡುವ ಮೂಲಕ ಕೇಂದ್ರ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸಿದೆ. ಈ ದೇಶದಲ್ಲಿ ದಲಿತರು ವಿದೇಶ ಪ್ರವಾಸ ಮಾಡಬಾರದು ಎಂಬ ಕಾನೂನು ಇದೆಯಾ? ಪ್ರಧಾನಿ ಮೋದಿ ಅವರು ಮಾತ್ರ ಲಕ್ಷಾಂತರ ಬೆಲೆ ಬಾಳುವ ಶೂಟು ಬೂಟು ಧರಿಸಿ ವಿದೇಶ ಪ್ರವಾಸ ಮಾಡುತ್ತಾರೆ.ಅದೇ ಒಬ್ಬ ದಲಿತ ಸಚಿವ ವಿದೇಶ ಪ್ರವಾಸಕ್ಕೆ ಅನುಮತಿ ಕಳಿದರೆ ನಿರಾಕರಣೆ ಮಾಡಿದ್ದಾರೆ ಎಂದು ದೂರಿದರು. ಯಾವುದೇ ಕಾರಣವಿಲ್ಲದೇ ಈ ರೀತಿ ಅವಮಾನ ಮಾಡಿರುವುದು ಭಾರತ ದೇಶಕ್ಕೆ ಮಾಡಿರುವ ಅಪಮಾನ ಎಂದು ಕಿಡಿಕಾರಿದರು. ಜಯಾಶಂಕರ್ ಮತ್ತು ಅಲ್ಲಿನ ಕಾರ್ಯದರ್ಶಿ ವಿರುದ್ಧ ಕೇಸನ್ನು ದಾಖಲು ಮಾಡುವಂತೆ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ದಲಿತ ಸಂಘಟನೆ ರಾಜ್ಯ ಸಂಚಾಲಕ ಎಂ. ಸೋಮಶೇಖರ್, ದೇವರಾಜ್, ಪರಮೇಶ್, ಪುಟ್ಟಯ್ಯ, ಮಾದಿಗ ದಂಡೋರ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಆರ್. ವಿಜಯಕುಮಾರ್ ಇತರರು ಉಪಸ್ಥಿತರಿದ್ದರು.

ವಿಷಯಗಳು: #india #karnataka #news #peepalmedia #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು