ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯ ಸಾರಿಗೆ ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಪ್ರಸ್ತಾಪ – ಜನಸಾಮಾನ್ಯರಿಗೆ ಬಿಗ್‌ ಶಾಕ್

ರಾಜ್ಯ ಸಾರಿಗೆ ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಪ್ರಸ್ತಾಪ – ಜನಸಾಮಾನ್ಯರಿಗೆ ಬಿಗ್‌ ಶಾಕ್

ಬೆಂಗಳೂರು‌ : ಪೆಟ್ರೋಲ್, ಡೀಸೆಲ್(Fuel) ಮತ್ತು ಗ್ಯಾಸ್ ಸಿಲಿಂಡರ್(Gas Cylinder) ದರ ಏರಿಕೆಯಿಂದ(Price Hike) ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಈಗ ಮತ್ತೊಂದು ಬೆಲೆ ಏರಿಕೆಯ ಆತಂಕ ಎದುರಾಗಿದೆ. ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು(KSRTC Bus Ticket Price) ಹೆಚ್ಚಳ ಮಾಡಲು ಸಾರಿಗೆ ನಿಗಮಗಳು ಸರ್ಕಾರದ(Government) ಮುಂದೆ ಪ್ರಸ್ತಾಪ ಇಟ್ಟಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಾರಿಗೆ ನಿಗಮಗಳು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಅಧಿಕೃತವಾಗಿ ಮನವಿ ಮಾಡಿವೆ.

ದರ ಹೆಚ್ಚಳದ ಬೇಡಿಕೆಗೆ ಕಾರಣಗಳೇನು?

ಸಾರಿಗೆ ನಿಗಮಗಳ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಡೀಸೆಲ್ ದರ ಗಣನೀಯವಾಗಿ ಏರಿಕೆಯಾಗಿದೆ ಮತ್ತು ಸಿಬ್ಬಂದಿಗಳ ಸಂಖ್ಯೆಯೂ ಹೆಚ್ಚಾಗಿದೆ. ಇದರೊಂದಿಗೆ, ಸಿಬ್ಬಂದಿಗಳ ಒಟ್ಟು ವೇತನ ಬಾಕಿ ಇರುವ 1,271 ಕೋಟಿ ರೂಪಾಯಿಗಳ ಪೈಕಿ ಕೇವಲ 450 ಕೋಟಿ ರೂಪಾಯಿಗಳು ಮಾತ್ರ ಬಿಡುಗಡೆಯಾಗಿದೆ. ಈ ಎಲ್ಲಾ ಆರ್ಥಿಕ ಹೊರೆಗಳನ್ನು ನಿಭಾಯಿಸಲು ಮತ್ತು ನಿಗಮಗಳನ್ನು ನಷ್ಟದಿಂದ ರಕ್ಷಿಸಲು ಪ್ರಯಾಣ ದರ ಹೆಚ್ಚಳಕ್ಕೆ ಅನುಮತಿ ನೀಡಬೇಕು ಎಂದು ನಿಗಮಗಳು ಸರ್ಕಾರವನ್ನು ಕೋರಿವೆ.

ಕಳೆದ 2025ರ ಜನವರಿ 5ರಂದು ರಾಜ್ಯದಲ್ಲಿ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಲಾಗಿತ್ತು. ಅದಾಗಿ ಕೆಲವೇ ತಿಂಗಳುಗಳಲ್ಲಿ ಈಗ ಮತ್ತೆ ಡೀಸೆಲ್ ಬೆಲೆ ಏರಿಕೆಯ ನೆಪವೊಡ್ಡಿ ದರ ಪರಿಷ್ಕರಣೆಗೆ ಬೇಡಿಕೆ ಇಡಲಾಗಿದೆ. ಸಾರಿಗೆ ನಿಗಮಗಳ ಈ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಸಮ್ಮತಿ ನೀಡಲಿದೆಯೇ ಅಥವಾ ಜನಸಾಮಾನ್ಯರ ಹಿತದೃಷ್ಟಿಯಿಂದ ನಿರಾಕರಿಸಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

ರಾಜ್ಯದಲ್ಲಿ ಖಾಸಗಿ ಬಸ್‌ ಟಿಕೆಟ್‌ ದರ ಏರಿಕೆ, ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ!

ಉಡುಪಿ: ಕರ್ನಾಟಕದಾದ್ಯಂತ ಸಂಚರಿಸುವ ಸಾರ್ವಜನಿಕ ಖಾಸಗಿ ಬಸ್ ಟಿಕೆಟ್ ದರದಲ್ಲಿ ಗಣನೀಯ ಬದಲಾವಣೆಯಾಗಿದ್ದು, ಪ್ರಯಾಣಿಕರು ಇನ್ನು ಮುಂದೆ ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ. ಇಂಧನ ಬೆಲೆ ಏರಿಕೆ, ಸುಂಕದ ಕೇಂದ್ರಗಳ ಶುಲ್ಕ ಹೆಚ್ಚಳ ಹಾಗೂ ವಾಹನಗಳ ಬಿಡಿಭಾಗಗಳ ಮಾರುಕಟ್ಟೆ ದರ ದುಬಾರಿಯಾಗಿರುವುದರಿಂದ ಈ ನಿರ್ಧಾರ ಅನಿವಾರ್ಯವಾಗಿದೆ ಎಂದು ಬಸ್ ಮಾಲೀಕರ ಒಕ್ಕೂಟ ಸ್ಪಷ್ಟಪಡಿಸಿದೆ. ಸರ್ಕಾರದ ನಿಯಮಾವಳಿಗಳಿಗೆ ಒಳಪಟ್ಟೇ ಈ ಪರಿಷ್ಕರಣೆ ಮಾಡಲಾಗಿದ್ದು, ಜೂನ್ ೯ ರಿಂದ ಹೊಸ ದರಪಟ್ಟಿ ಅಧಿಕೃತವಾಗಿ ಅನುಷ್ಠಾನಕ್ಕೆ ಬರಲಿದೆ.

ಒಕ್ಕೂಟದ ಪ್ರಮುಖ ಪದಾಧಿಕಾರಿಗಳು ನಡೆಸಿದ ಸಭೆಯ ಪ್ರಕಾರ, ಶೇಕಡಾ ೫ ರಿಂದ ೮ ರಷ್ಟು ಪ್ರಮಾಣದಲ್ಲಿ ಪ್ರಯಾಣದ ವೆಚ್ಚ ಹೆಚ್ಚಾಗಲಿದೆ. ಉದಾಹರಣೆಗೆ, ಕರಾವಳಿ ಭಾಗದ ಪ್ರಮುಖ ನಗರಗಳ ನಡುವಿನ ಸಂಚಾರದ ದರಗಳು ಬದಲಾಗಲಿದ್ದು, ಮಂಗಳೂರು ಮತ್ತು ಉಡುಪಿ ನಡುವಿನ ಹಳೆಯ ದರ ನೂರು ರೂಪಾಯಿ ತಲುಪಲಿದೆ. ಹಾಗೆಯೇ ಉಡುಪಿಯಿಂದ ಮಣಿಪಾಲಕ್ಕೆ ತೆರಳಲು ಕನಿಷ್ಠ ಹದಿನೈದು ರೂಪಾಯಿ ನೀಡಬೇಕಾಗುತ್ತದೆ ಮತ್ತು ಕುಂದಾಪುರ ಮಾರ್ಗದ ದರದಲ್ಲೂ ಮೂರು ರೂಪಾಯಿಗಳಷ್ಟು ಏರಿಕೆ ಕಾಣಬಹುದಾಗಿದೆ.

ಹೀಗೆ ದೈನಂದಿನ ಆಡಳಿತಾತ್ಮಕ ವೆಚ್ಚಗಳು ಮತ್ತು ಟೈರ್ ಮರುಜೋಡಣೆಯಂತಹ ತಾಂತ್ರಿಕ ನಿರ್ವಹಣೆಗಳು ಅತ್ಯಂತ ಹೊರೆಯಾಗಿ ಪರಿಣಮಿಸಿರುವುದರಿಂದ ಸಾರಿಗೆ ಸಂಸ್ಥೆಗಳ ಉಳಿವಿಗೆ ಈ ಕ್ರಮ ಅನಿವಾರ್ಯವಾಗಿತ್ತು ಎಂದು ಮಾಲೀಕರ ಸಂಘಟನೆಗಳು ಸಮರ್ಥಿಸಿಕೊಂಡಿವೆ. ಈ ಹಠಾತ್ ದರ ಏರಿಕೆಯು ಸಾರ್ವಜನಿಕ ವಲಯದಲ್ಲಿ ಮತ್ತು ನಿತ್ಯ ಪ್ರಯಾಣಿಸುವ ಜನಸಾಮಾನ್ಯರಲ್ಲಿ ಕಳವಳವನ್ನು ಉಂಟುಮಾಡಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು