ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ತಪ್ಪಿದ ಟಿಕೆಟ್ ಮುಸ್ಲಿಂ ಸಮುದಾಯದಲ್ಲಿ ತೀವ್ರ ಅಸಮಾಧಾನ, ಕಾಂಗ್ರೆಸ್ ವಿರುದ್ಧ ದಾವಣಗೆರೆಯಲ್ಲಿ ಹೋರಾಟ

ತಪ್ಪಿದ ಟಿಕೆಟ್ ಮುಸ್ಲಿಂ ಸಮುದಾಯದಲ್ಲಿ ತೀವ್ರ ಅಸಮಾಧಾನ, ಕಾಂಗ್ರೆಸ್ ವಿರುದ್ಧ ದಾವಣಗೆರೆಯಲ್ಲಿ ಹೋರಾಟ

ದಾವಣಗೆರೆ : ಜಿಲ್ಲೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಮುಂಬರುವ ಉಪಚುನಾವಣೆಗೆ (By election) ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಟಿಕೆಟ್ (Congress ticket) ಘೋಷಿಸಿದ ಬೆನ್ನಲ್ಲೇ ಸ್ಥಳೀಯ ಮುಸ್ಲಿಂ ಸಮುದಾಯದಲ್ಲಿ (Muslim community) ತೀವ್ರ ಅಸಮಾಧಾನ ವ್ಯಕ್ತವಾಗಿದೆ. ತಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ನೀಡದೆ ವಂಚಿಸಲಾಗಿದೆ ಎಂದು ಆರೋಪಿಸಿ ಅಲ್ಪಸಂಖ್ಯಾತ ಘಟಕದ ಮುಖಂಡರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಮತ್ತು ಎಐಸಿಸಿ ನಾಯಕರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಕಪ್ಪು ಬಾವುಟ ಪ್ರದರ್ಶಿಸಿ ತಮ್ಮ ಪ್ರತಿರೋಧವನ್ನು ವ್ಯಕ್ತಪಡಿಸಿದರು. ಹಲವು ದಶಕಗಳಿಂದ ಕಾಂಗ್ರೆಸ್ ಬೆಂಬಲಿಸುತ್ತಾ ಬಂದಿದ್ದರೂ ಅಂತಿಮ ಕ್ಷಣದಲ್ಲಿ ನಂಬಿಕೆ ದ್ರೋಹ ಮಾಡಲಾಗಿದೆ ಎಂಬುದು ಪ್ರತಿಭಟನಾಕಾರರ ಪ್ರಮುಖ ದೂರು. ಪಕ್ಷದ ಹೈಕಮಾಂಡ್ ತೆಗೆದುಕೊಂಡಿರುವ ಈ ನಿರ್ಧಾರವು ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಕೇವಲ ಹಣ ನೀಡಿ ಮುಸ್ಲಿಮರ ಮತಗಳನ್ನು ಪಡೆಯಬಹುದು ಎಂಬ ಹಗುರವಾದ ಮಾತುಗಳು ಹಾಗೂ ಸಮುದಾಯದ ನಾಯಕರನ್ನು ಅವಹೇಳನ ಮಾಡಿರುವ ಘಟನೆಗಳನ್ನು ಖಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಸ್ವಾಭಿಮಾನಿ ಮುಸ್ಲಿಮರು ಯಾರೂ ಕಾಂಗ್ರೆಸ್‌ಗೆ ಮತ ಹಾಕಬಾರದು ಎಂದು ಮುಖಂಡರು ಕರೆ ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಹೊರತುಪಡಿಸಿ ಬೇರೆ ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸಲು ಸಿದ್ಧರಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು